ಕಡಬ: ಮತ್ತೆ ಬಾಯ್ದೆರೆದ ರಸ್ತೆ ಹೊಂಡ
Team Udayavani, Mar 23, 2022, 12:28 PM IST
ಕಡಬ: ಇಲ್ಲಿನ ಹಳೆಸ್ಟೇಶನ್ ಬಳಿ ಕಡಬ-ಸುಬ್ರಹ್ಮಣ್ಯ ಮುಖ್ಯರಸ್ತೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಒಡೆದು ರಸ್ತೆಗೆ ಹಾನಿಯಾಗಿ ಸೃಷ್ಟಿಯಾಗಿದ್ದ ಅಪಾಯಕಾರಿ ಹೊಂಡವನ್ನು ತಿಂಗಳ ಹಿಂದೆ ಮುಚ್ಚಲಾಗಿತ್ತು. ಆದರೆ ಅದೇ ಜಾಗದಲ್ಲಿ ಮತ್ತೆ ಹೊಂಡ ಕಾಣಿಸಿಕೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಕಳೆದ ಹಲವು ವರ್ಷಗಳಿಂದ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ಈ ರಸ್ತೆ ಹೊಂಡವನ್ನು ಮುಚ್ಚಿ ಸಮಸ್ಯೆಯನ್ನು ಬಗೆಹರಿಸುವಂತೆ ಪದೇ ಪದೇ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ ಪರಿಣಾಮವಾಗಿ ಕಳೆದ ತಿಂಗಳು ಕಡಬ ಪಟ್ಟಣ ಪಂಚಾಯತ್ ಅಧಿಕಾರಿ ಜೆಸಿಬಿ ಮೂಲಕ ರಸ್ತೆಯಲ್ಲಿದ್ದ ಹೊಂಡವನ್ನು ಅಗೆಸಿ ಒಡೆದು ಹೋಗಿದ್ದ ನೀರಿನ ಪೈಪ್ ಅನ್ನು ದುರಸ್ತಿಪಡಿಸಲು ಕ್ರಮ ಕೈಗೊಂಡಿದ್ದರು. ಬಳಿಕ ರಸ್ತೆಯನ್ನು ಅಗೆದಿರುವ ಜಾಗಕ್ಕೆ ಲೋಕೋಪಯೋಗಿ ಇಲಾಖಾಧಿಕಾರಿಗಳು ಡಾಮರು ಹಾಕಿಸಿ ಸರಿಪಡಿಸಿಕೊಟ್ಟಿದ್ದರು. ಆದರೆ ತಿಂಗಳು ಕಳೆಯುವ ಮೊದಲೇ ಹೊಂಡದ ಮಣ್ಣು ಜಗ್ಗಿ ಡಾಮರು ಎದ್ದು ಹೊಂಡ ಮರುಸೃಷ್ಟಿಯಾಗಿದೆ. ಮಾ. 21 ರಂದು ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಹೊಂಡಕ್ಕೆ ಸಿಲುಕಿ ನಿಯಂತ್ರಣ ತಪ್ಪಿ ಉರುಳಿಬಿದ್ದು ಗಾಯಗೊಂಡಿದ್ದಾರೆ.
ಇನ್ನಷ್ಟು ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುವುದರಿಂದ ಸಂಬಂಧ ಪಟ್ಟವರು ಕ್ರಮಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಕ್ರಮ ಕೈಗೊಳ್ಳ ಲಾಗುವುದು ಸ್ಥಳೀಯಾಡಳಿತದವರು ಪೈಪ್ ದುರಸ್ತಿಪಡಿಸಿ ಹೊಂಡವನ್ನು ಮುಚ್ಚಿಕೊಟ್ಟ ಬಳಿಕ ಇಲಾಖೆಯ ವತಿಯಿಂದ ಅಲ್ಲಿಗೆ ಡಾಮರು ಪ್ಯಾಚ್‌ವರ್ಕ್ ಮಾಡಿಸಲಾಗಿತ್ತು. ಹಾಕಿದ ಮಣ್ಣು ಜಗ್ಗಿ ಮತ್ತೆ ಹೊಂಡ ಸೃಷ್ಟಿಯಾಗಿದೆ. ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. -ರಾಜಾರಾಮ್, ಎಇಇ, ಲೋಕೋಪಯೋಗಿ ಇಲಾಖೆ, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.