ಮೂಲ ಸೌಕರ್ಯವಿಲ್ಲದೆ‌ ಕಡಬ ಮೀನು ಮಾರುಕಟ್ಟೆ ಕ್ಷೀಣ


Team Udayavani, Nov 2, 2018, 10:34 AM IST

2-november-3.gif

ಕಡಬ: ತಾಲೂಕು ಕೇಂದ್ರ ಕಡಬದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಇಲ್ಲ. ಪ್ರಸ್ತುತ ಇರುವ ಹಸಿ ಮೀನು ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಿಲ್ಲದೇ ಮೀನು ವ್ಯಾಪಾರ ನಡೆಯುತ್ತಿಲ್ಲ. ಆದರೆ ಹರಾಜಿನಲ್ಲಿ ಮೀನು ಮಾರಾಟದ ಹಕ್ಕು ಪಡೆದು ಪಂಚಾಯತ್‌ಗೆ 8 ಲಕ್ಷ ರೂ. ಪಾವತಿಸಿದರೂ ಟೆಂಡರ್‌ ಪಡೆದವರು ರಸ್ತೆಯ ಬದಿಯಲ್ಲೇ ಮೀನು ಮಾರಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಸ್ತುತ ಸಂತಕಟ್ಟೆಯ ಒಳಗೆ ಇರುವ ಮೀನು ಮಾರುಕಟ್ಟೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ. ಮಾರುಕಟ್ಟೆಯಿಂದ ತ್ಯಾಜ್ಯ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆಗಳಿಲ್ಲ. ತ್ಯಾಜ್ಯ ನೀರು ಸಂಗ್ರಹವಾಗಲು ನಿರ್ಮಿಸಲಾಗಿದ್ದ ಸಣ್ಣ ಗುಂಡಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ದುರ್ವಾಸನೆ ಬೀರಲು ಆರಂಭವಾದ ಕಾರಣದಿಂದಾಗಿ ಕಳೆದ ವರ್ಷ ಮೀನು ಮಾರಾಟಗಾರರು ಮಾರುಕಟ್ಟೆಯಲ್ಲಿ ಮೀನು ಮಾರಲು ಸಾಧ್ಯವಿಲ್ಲ ಎಂದು ಪಂಚಾಯತ್‌ಗೆ ದೂರು ನೀಡಿದ್ದರು.

ಅನಂತರ ರಸ್ತೆಯ ಬದಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಮೀನು ಮಾರಲು ಪಂಚಾಯತ್‌ ಅವಕಾಶ ನೀಡಿತ್ತು. ಆದರೆ ವರ್ಷ ಕಳೆದು ಹೊಸ ಹರಾಜು ಪ್ರಕ್ರಿಯೆ ನಡೆದರೂ ಮೀನು ಮಾರುಕಟ್ಟೆಯ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಮೀನು ಮಾರಾಟದ ಹಕ್ಕಿಗಾಗಿ ನಡೆಯುವ ಹರಾಜಿನಲ್ಲಿ ಪಂಚಾಯತ್‌ಗೆ ಲಕ್ಷಾಂತರ ರೂ. ಆದಾಯ ಇದೆ. ಆದರೂ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಚ್ಛ ಗ್ರಾಮ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಕಡಬ ಗ್ರಾ.ಪಂ. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ.

ಪಂಚಾಯತ್‌ಗೆ ಹೆಚ್ಚಿನ ಆದಾಯ
ಈ ಬಾರಿ 1 ವರ್ಷದ ಅವಧಿಗೆ ಕಡಬ ಪೇಟೆಯಲ್ಲಿ ಹಸಿಮೀನು ಮಾರಾಟದ ಹಕ್ಕಿಗಾಗಿ ನಡೆದ ಹರಾಜಿನಲ್ಲಿ ಪಂಚಾಯತ್‌ ಗೆ 8,01,600 ರೂ. ಆದಾಯ ಬಂದಿದೆ. ಕಡಬದ ಸಂತೆ ಮಾರು ಕಟ್ಟೆಯ ಬಳಿಯ ಹಸಿಮೀನು ಮಾರಾಟದ ಜಾಗದ ಹಕ್ಕು ಉಪ್ಪಿನಂಗಡಿಯ ಯು.ಕೆ. ಯೂಸುಫ್‌ ಅವರಿಗೆ 4.01 ಲಕ್ಷ ರೂ.ಗೆ (ಕಳೆದ ಬಾರಿ 8.10 ಲಕ್ಷ ರೂ.) ಹಾಗೂ ಕಡಬದ ರೈತ ಸಂಪರ್ಕ ಕೇಂದ್ರದ ಬಳಿಯ ಜಾಗದ ಹಕ್ಕು ಉಪ್ಪಿನಂಗಡಿಯ ಮುಸ್ತಾಫ ಕೆಂಪಿ ಅವರಿಗೆ 4,00,600 ರೂ.ಗಳಿಗೆ (ಕಳೆದ ಬಾರಿ 6.21 ಲಕ್ಷ ರೂ.) ಸಿಕ್ಕಿದೆ. ಕಳೆದ ಬಾರಿ ಮೀನು ವ್ಯಾಪಾರಿಗಳ ಪೈಪೋಟಿಯಿಂದಾಗಿ ಮೇಲಿನ ಎರಡೂ ಸ್ಟಾಲ್‌ಗ‌ಳು ಒಟ್ಟು 14.31 ಲಕ್ಷ ರೂ. ಗೆ ಹರಾಜಾಗಿತ್ತು.

ಪ್ರತ್ಯೇಕ ಜಾಗಕ್ಕೆ ಪ್ರಯತ್ನ
ಕಡಬ ಪೇಟೆಯಲ್ಲಿ ಹೊಸದಾಗಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಿಸಲು ಪೇಟೆಯ ಹತ್ತಿರದಲ್ಲಿ ಪ್ರತ್ಯೇಕ ಜಾಗಕ್ಕೆ ಪ್ರಯತ್ನಿಸಲಾಗುತ್ತಿದೆ. ಸರಕಾರಿ ಜಾಗವನ್ನು ಪಂಚಾಯತ್‌ನ ವಶಕ್ಕೆ ಪಡೆದು ಮೀನು ಮಾರುಕಟ್ಟೆ ನಿರ್ಮಿಸಲು ಕೊಂಚ ಕಾಲಾವಕಾಶದ ಅಗತ್ಯವಿದೆ. ಸಂತೆಕಟ್ಟೆಯ ಬಳಿ ಈಗ ಇರುವ ಮೀನು ಮಾರುಕಟ್ಟೆ ಹಾಗೂ ಹಳೆಯ ವಾಣಿಜ್ಯ ಕಟ್ಟಡಗಳನ್ನು ಕೆಡವಿ ಹೊಸದಾಗಿ ವಾಣಿಜ್ಯ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ.
– ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಪಿಡಿಒ

 ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.