ಕಡಬ: ಪ್ರಯಾಣಿಕರ ತಂಗುದಾಣಕ್ಕೆ ಮೆಟ್ಟಿಲುಗಳೇ ಇಲ್ಲ!


Team Udayavani, Jul 13, 2017, 2:55 AM IST

1107kdb2-copy.jpg

ಕಡಬ: ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬ ಪೇಟೆಯಲ್ಲಿ ಮೊದಲೇ ಸರಿಯಾದ ಪ್ರಯಾಣಿಕರ ತಂಗುದಾಣವಿಲ್ಲ. ಇರುವ ಒಂದು ತಂಗುದಾಣದ ಮೆಟ್ಟಿಲನ್ನೂ ರಸ್ತೆ ಅಭಿವೃದ್ಧಿ ಕಾಮಗಾರಿಯ ವೇಳೆ ಕಿತ್ತು ತೆಗೆಯಲಾಗಿದ್ದು, ಮತ್ತೆ ನಿರ್ಮಿಸಿಕೊಟ್ಟಿಲ್ಲ.ಈ ಬಗ್ಗೆ ಸಾರ್ವಜನಿಕರ ಕೂಗಿಗೆ ಸ್ಥಳೀಯಾಡಳಿತವಾಗಲೀ,ಇಲಾಖೆ ಯಾಗಲೀ, ಜನಪ್ರತಿನಿಧಿಗಳಾಗಲೀ ಇದುವರೆಗೂ ಕಿವಿಗೊಟ್ಟಿಲ್ಲ. ಪೇಟೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪಂಜ ಕ್ರಾಸ್‌ ಬಳಿ ಗ್ರಾ.ಪಂ. ನಿರ್ವಹಣೆಯಲ್ಲಿರುವ ಪ್ರಯಾಣಿಕರ ತಂಗುದಾಣದಲ್ಲಿ  ಬೆಳಗ್ಗೆಯಿಂದ ಸಂಜೆಯ ತನಕವೂ ಪ್ರಯಾಣಣಿಕರು ಇರುತ್ತಾರೆ. 

ಈಗ ಮಳೆಗಾಲವಾಗಿರುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸಹಿತ ತಂಗುದಾಣದ ಪ್ರಯೋಜನ ಪಡೆಯುವವರ ಸಂಖ್ಯೆ ದೊಡ್ಡದು. ಹೆದ್ದಾರಿಯನ್ನು ಅಗಲಗೊಳಿಸಿ ಅಭಿವೃದ್ಧಿಪಡಿಸುವ ವೇಳೆ ತಂಗುದಾಣದ ಮೆಟ್ಟಿಲುಗಳನ್ನು ತೆಗೆಯಲಾಗಿತ್ತು.  ರಸ್ತೆ ಡಾಮರೀಕರಣ, ಚರಂಡಿ ಮುಚ್ಚುವ ಕಾರ್ಯ ಮುಗಿದು ಹಲವು ತಿಂಗಳುಗಳೇ ಕಳೆದರೂ ತಂಗುದಾಣಕ್ಕೆ ಮೆಟ್ಟಿಲು ನಿರ್ಮಿಸುವ ಕೆಲಸವನ್ನು ಮಾಡಿಲ್ಲ ಎಂಬುದು ಸಾರ್ವಜನಿಕರ ಬೇಸರ.

ಇದರಿಂದಾಗಿ ವಯಸ್ಸಾದವರು,  ಅನಾರೋಗ್ಯ ಪೀಡಿತರು, ವಿದ್ಯಾರ್ಥಿಗಳು ತಂಗುದಾಣದೊಳಗೆ ಹೋಗಲು  ಹರಸಾಹಸ ಪಡಬೇಕಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಿದವರು ತಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ಹೊರಟುಹೋಗಿದ್ದಾರೆ. ಇತ್ತ ಕಟ್ಟಡದಲ್ಲಿನ ಕೊಠಡಿಗಳ ಬಾಡಿಗೆ ಪಡೆಯುವ ಗ್ರಾ.ಪಂ. ಕೂಡ ಕಣ್ಮುಚ್ಚಿ ಕುಳಿತಿದೆ. ಇನ್ನಾದರೂ ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸ ಬೇಕು ಎನ್ನುವುದು ಸಾರ್ವಜನಿಕರ ಆಗ್ರಹ.

ಗ್ರಾ.ಪಂ.ನಿಂದ ಮೆಟ್ಟಿಲು 
ನಿರ್ಮಿಸಲು ನಿರ್ಧಾರ 

ರಸ್ತೆ ಕಾಮಗಾರಿಯ ವೇಳೆ ಮೆಟ್ಟಿಲು ಕಿತ್ತು ಹಾಕಿದವರು ಮರು ನಿರ್ಮಾಣ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡಿಲ್ಲ.  ಇದೀಗ  ಗ್ರಾ.ಪಂ.ನಿಂದ ಮೆಟ್ಟಿಲು ನಿರ್ಮಿಸಲು ನಿರ್ಧರಿಸಿದ್ದೇವೆ. ಈ ಬಗ್ಗೆ ಅಂದಾಜುಪಟ್ಟಿ ತಯಾರಿಸಿ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು.
– ಬಾಬು ಮುಗೇರ ತುಂಬೆತಡ್ಕ,
ಅಧ್ಯಕ್ಷರು, ಕಡಬ ಗ್ರಾ.ಪಂ

ಟಾಪ್ ನ್ಯೂಸ್

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

14-aranthodu

Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.