Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ
Team Udayavani, Jan 3, 2025, 6:11 AM IST
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ವೆುàಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೋಮವಾರ ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ ರೂಂನಲ್ಲಿ ಇರುವಾಗಲೇ ಬಾಲಕಿ ಜತೆ ತಗಾದೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಬೈಕಿನಲ್ಲಿ ಕರೆದೊಯ್ದು ಫರಂಗಿಪೇಟೆ ಬಳಿ ರಸ್ತೆ ಬದಿ ಬಿಟ್ಟು ಹೋಗಿದ್ದ. ಮನೆಯವರಿಗೆ ವಿಷಯ ತಿಳಿಸಿದ್ದ ಬಾಲಕಿಗೆ ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು.
ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
UP: ವಿವಾಹದ ಮಧ್ಯೆ ಬಾತ್ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.