ಕಡಬ: ಮಿನಿ ವಿಧಾನಸೌಧಕ್ಕೆ 10 ಕೋ. ರೂ. ಅಂದಾಜುಪಟ್ಟಿ
Team Udayavani, Sep 22, 2018, 10:37 AM IST
ಕಡಬ: ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ಇರಬೇಕು ಎನ್ನುವ ಸರಕಾರದ ಆಶಯದಂತೆ ನೂತನ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅಂದಾಜುಪಟ್ಟಿ ತಯಾರಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ.
ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 50 ತಾಲೂಕುಗಳಿಗೆ ವಿವಿಧ ಕಚೇರಿಗಳನ್ನು ಮಂಜೂರು ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವರು ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೆ. 19ರಂದು ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದು, ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.
ಕಾದಿರಿಸಲಾಗಿದೆ ಜಮೀನು
ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಕಡಬದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ತಹಶೀಲ್ದಾರ್ ಕಚೇರಿ ಬಳಿ ಸರ್ವೆ ನಂಬ್ರ 130/1ಎಪಿ2ರಲ್ಲಿ 1.60 ಎಕ್ರೆ ಜಮೀನು ಕಾದಿರಿಸಲಾಗಿದೆ. ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ಹಾಗೂ ಸದ್ರಿ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಗೆ ವಹಿಸಲು ಸೂಕ್ತ ಆದೇಶ ಹೊರಡಿಸಬೇಕೆಂದು ಸುಳ್ಯ ಶಾಸಕ ಎಸ್. ಅಂಗಾರ ಅವರು ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದ್ದು, ಅದರಂತೆ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಹಾಗೂ ರೇಖಾ ಅಂದಾಜು ಪಟ್ಟಿಯನ್ನು ಕರ್ನಾಟಕ ಗೃಹ ಮಂಡಳಿ ವತಿಯಿಂದ ತಯಾರಿಸಲಾಗಿದೆ.
ಕಡಬ ತಹಶೀಲ್ದಾರರ ಕೋರಿಕೆಯಂತೆ ತಹಶೀಲ್ದಾರರ ಕಚೇರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಶಾಸಕರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಸರ್ವೆ ಇಲಾಖೆ ಕಚೇರಿ ಹಾಗೂ ಪೀಠೊಪಕರಣಗಳಿಗೆ ಪೂರಕ ವಾದ ನಕ್ಷೆ ತಯಾರಿಸಿ ತಹಶೀಲ್ದಾರರ ಸಹಿ ಪಡೆದು ರೇಖಾ ಅಂದಾಜುಪಟ್ಟಿಯನ್ನು ತಯಾರಿಸಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ಪರಿಶೀಲಿಸಿರುವ ಅಂದಾಜು ಪಟ್ಟಿಯನ್ನು ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಮಕ್ಕೆ ಮನವಿ
ಕಡಬದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಎಲ್ಲ ಕಚೇರಿಗಳು ಲಭ್ಯವಾಗುವಂತೆ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಹಾಗೂ ರೇಖಾ ಅಂದಾಜುಪಟ್ಟಿ (10 ಕೋಟಿ ರೂ.) ಯನ್ನು ಕರ್ನಾಟಕ ಗೃಹ ಮಂಡಳಿ ವತಿಯಿಂದ ತಯಾರಿಸಲಾಗಿದೆ. ಈ ಅಂದಾಜು ಪಟ್ಟಿಯನ್ನು ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.
– ಎಸ್. ಅಂಗಾರ
ಸುಳ್ಯ ಶಾಸಕರು
ನಾಗರಾಜ್ ಎನ್.ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.