ಕನ್ನಡ ಹಬ್ಬಕ್ಕೆ ಕಡಬ ಪಟ್ಟಣ ಸಿಧ್ಧ 

Team Udayavani, Dec 16, 2017, 9:43 AM IST

1Dec-1.jpg

ಕಡಬ: ಶನಿವಾರ ನಡೆಯಲಿರುವ ಪುತ್ತೂರು ತಾಲೂಕಿನ 17ನೇ ಅಕ್ಷರ ಜಾತ್ರೆಗೆ ಇಡೀ ಪಟ್ಟಣ ಸಿದ್ಧಗೊಂಡಿದ್ದು, ಕ್ಷಣಗಣನೆ ಆರಂಭವಾಗಿದೆ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಸಮ್ಮೇಳನ ನಡೆಯುತ್ತಿದ್ದು, ಹಿರಿಯ ಸಾಹಿತಿ ನಾ. ಕಾರಂತ ಪೆರಾಜೆ ಸಮ್ಮೇಳನಾಧ್ಯಕ್ಷತೆ ವಹಿಸುವರು. ಬೆಳಗ್ಗೆ 8ಕ್ಕೆ ಕನ್ನಡ ಭುವನೇಶ್ವರಿಯ ಮೆರವಣಿಗೆ ಸೈಂಟ್‌ ಜೋಕಿಮ್ಸ್‌ ಶಾಲಾ ಆವರಣದಿಂದ ಆರಂಭ ವಾಗಲಿದೆ. ಬಳಿಕ 9.15ಕ್ಕೆ ರಾಷ್ಟ್ರ ಧ್ವಜಾರೋಹಣ, ಕಸಾಪ ಧ್ವಜಾರೋಹಣ ಹಾಗೂ ಸಮ್ಮೇಳನದ ಧ್ವಜಾರೋಹಣ ನೆರವೇರಲಿದೆ.

ಬೆಳಗ್ಗೆ 9.45 ಕ್ಕೆ ನಾಡೋಜ ಡಾ| ಮಹೇಶ್‌ ಜೋಷಿ ಸಮ್ಮೇಳನವನ್ನು ಉದ್ಘಾಟಿಸುವರು. ಸುಳ್ಯ ಶಾಸಕ ಎಸ್‌.ಅಂಗಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪುಸ್ತಕ ಪ್ರದರ್ಶನ ಉದ್ಘಾಟಿಸುವರು. ವಸ್ತು ಪ್ರದರ್ಶನವನ್ನು ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಲಾ ಪ್ರದರ್ಶನವನ್ನು ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಅವರು ಉದ್ಘಾಟಿಸುವರು. 

ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಉಪನ್ಯಾಸ ಹಾಗೂ ಸಾಧಕರಿಗೆ ಸಮ್ಮಾನ ನಡೆಯಲಿದೆ. ಸಾಹಿತಿ ಗೋಪಾಲರಾವ್‌ ಅವರ ಸಂಸ್ಮರಣೆಯನ್ನೂ ಆಯೋಜಿಸಲಾಗಿದೆ. ಕವಿಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ಕವಿ ಟಿ.ಜಿ. ಮುಡೂರು ವಹಿಸುತ್ತಿರುವುದು ವಿಶೇಷ.

ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭ ಸಂಜೆ 4.30 ಕ್ಕೆ ಆರಂಭವಾಗಲಿದೆ. ಕಸಾಪ ಜಿಲ್ಲಾಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಅಧ್ಯಕ್ಷತೆ ವಹಿಸುವರು. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ| ಸದಾನಂದ ಪೆರ್ಲ ಸಮಾರೋಪ ಭಾಷಣ ಮಾಡುವರು. ಸಮ್ಮೇಳನಾಧ್ಯಕ್ಷ ನಾ| ಕಾರಂತ ಪೆರಾಜೆ ಸಮ್ಮೇಳನದ ವಿಮರ್ಶೆ ಮಾಡುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ವೇದಿಕೆ ಸಜ್ಜು
ಅಕ್ಷರ ಜಾತ್ರೆಗೆ ಇಲ್ಲಿಯ ಸರಕಾರಿ ಪ.ಪೂ. ಕಾಲೇಜು ಆವರಣದ ಬಿ.ಟಿ.ಆರಿಗ ಜೈನ್‌ ಸಭಾಂಗಣದಲ್ಲಿ ಕುಲ್ಕುಂದ ಶಿವರಾವ್‌ ವೇದಿಕೆ ಸಜ್ಜಾಗಿದೆ. ಸಮ್ಮೇಳನದ ಸಿದ್ಧತೆಯಲ್ಲಿ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಒಳಗೊಂಡಿದ್ದು,ಯುವಜನರನ್ನು ಕನ್ನಡದೊಂದಿಗೆ ಬೆಸೆಯುವ ಕೆಲಸ ನಡೆದಿದೆ. ವಿದ್ಯಾರ್ಥಿಗಳೇ ಸಭಾಂಗಣ, ವೇದಿಕೆ ಹಾಗೂ ಕಾಲೇಜಿನ ಪರಿಸರವನ್ನು ಸಿಂಗರಿಸಿದ್ದಾರೆ. ಈಗಾಗಲೇ ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನಕ್ಕೆ ಮಳಿಗೆಗಳು ಸಿದ್ಧಗೊಂಡಿವೆ.

ಟಾಪ್ ನ್ಯೂಸ್

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.