ಸರಕಾರಿ ಗೌರವದೊಂದಿಗೆ ಕದ್ರಿ ಗೋಪಾಲನಾಥ್ ಅಂತ್ಯಕ್ರಿಯೆ
ಹುಟ್ಟೂರು ಬಂಟ್ವಾಳ ತಾಲೂಕಿನ ಸಜೀಪ
Team Udayavani, Oct 15, 2019, 5:46 AM IST
ಸಜೀಪದಲ್ಲಿ ಕದ್ರಿ ಗೋಪಾಲನಾಥ್ ಅವರ ಅಂತ್ಯಕ್ರಿಯೆ ಸರಕಾರಿ ಗೌರವಗಳೊಂದಿಗೆ ನಡೆಯಿತು.
ಬಂಟ್ವಾಳ: ಕಳೆದ ವಾರ, ಅ. 11ರಂದು ನಿಧನ ಹೊಂದಿದ ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸೋಮವಾರ ಅವರ ಹುಟ್ಟೂರು, ಬಂಟ್ವಾಳ ತಾಲೂಕಿನ ಸಜೀಪ ಮಿತ್ತಮಜಲು ಸಮೀಪದಲ್ಲಿ ಸರಕಾರಿ ಗೌರವಗಳೊಂದಿಗೆ ಹಲವು ಕ್ಷೇತ್ರಗಳ ಕುಟುಂಬದವರ ಸಮ್ಮುಖದಲ್ಲಿ ನಡೆಯಿತು.
ಸರಕಾರದ ಪರವಾಗಿ ಸಂಸದ ನಳಿನ್, ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಪುತ್ತೂರು ಡಿವೈಎಸ್‌ಪಿ ದಿನಕರ ಶೆಟ್ಟಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಪಿಎಸ್‌ಐಗಳಾದ ಚಂದ್ರಶೇಖರ್, ಡಾ| ಸುಧಾಕರ್ ತೋನ್ಸೆ, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ನಂದಾವರ ಕ್ಷೇತ್ರದ ಅಧ್ಯಕ್ಷ ಎ.ಸಿ. ಭಂಡಾರಿ ಗೌರವ ಸಲ್ಲಿಸಿದರು.
ಡಿವೈಎಸ್‌ಪಿ ದಿನಕರ ಶೆಟ್ಟಿ ಅವರ ನಿರ್ದೇಶನ, ಇನ್‌ಸ್ಪೆಕ್ಟರ್ ನಾರಾಯಣ ಪೂಜಾರಿ ಅವರ ನೇತೃತ್ವದಲ್ಲಿ ಪೊಲೀಸ್ ವಂದನೆಯೊಂದಿಗೆ ಮೂರು ಬಾರಿ ಕುಶಾಲು ತೋಪು ಹಾರಿಸಿ ಸರಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಜೋಗಿ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು.
ಕದ್ರಿ ಗೋಪಾಲನಾಥ್ ಅವರ ಪತ್ನಿ ಸರೋಜಿನಿ, ಪುತ್ರರಾದ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಗುರುಪ್ರಸಾದ್ ಕದ್ರಿ, ಪುತ್ರಿ ಅಂಬಿಕಾ, ಸಹೋದರರಾದ ಚಂದ್ರನಾಥ್, ರಮೇಶ್‌ನಾಥ್, ಗಣೇಶ್‌ನಾಥ್, ಕುಟುಂಬ ಸದಸ್ಯರು ಭಾಗವಹಿಸಿದ್ದರು. ಜಿ.ಪಂ. ಮಾಜಿ ಅಧ್ಯಕ್ಷ ಬಿ. ಸದಾನಂದ ಪೂಂಜ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಡಿ.ಎಸ್. ಮಮತಾ ಗಟ್ಟಿ, ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಬೆಳ್ಚಡ, ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಟಾಸ್ ಆಲಿ, ಸದಸ್ಯ ಕೆ. ಸಂಜೀವ ಪೂಜಾರಿ, ಪ್ರಮುಖರಾದ ಕೆ.ಪಿ. ಜಗದೀಶ್ ಅಧಿಕಾರಿ, ಹರಿಕೃಷ್ಣ ಬಂಟ್ವಾಳ್, ಸುದರ್ಶನ ಜೈನ್, ಯತೀಶ್ ಬೈಕಂಪಾಡಿ, ಬಿ. ದೇವದಾಸ ಶೆಟ್ಟಿ, ಕಿಶೋರ್ ರೈ, ಶ್ರೀಕಾಂತ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸುದೀಪ್‌ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ರೈ ಬೋಳಿಯಾರ್, ಸೀತಾರಾಮ ಶೆಟ್ಟಿ, ಜಯಶಂಕರ ಬಾಸ್ರಿತ್ತಾಯ, ಗಂಗಾಧರ ಭಟ್ ಕೊಳಕೆ, ಯಶವಂತ ದೇರಾಜೆ, ಪಿ.ಕೆ. ಗಣೇಶ್, ಕಂದಾಯ ಇಲಾಖೆಯ ರಾಮ ಕಾಟಿಪಳ್ಳ ಅಂತಿಮ ನಮನ ಸಲ್ಲಿಸಿದರು.
ಮಂಗಳೂರಿನಲ್ಲಿ ಅಂತಿಮ ದರ್ಶನ
ಸೋಮವಾರ ಬೆಳಗ್ಗೆ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರವನ್ನು ನಗರದ ಖಾಸಗಿ ಆಸ್ಪತ್ರೆಯಿಂದ ಪದವಿನಂಗಡಿ ದೇವಿಕಟ್ಟೆಯಲ್ಲಿರುವ ಮನೆಗೆ ಕೊಂಡೊಯ್ಯಲಾಯಿತು. ಅಲ್ಲಿ ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ನಗರದ ಮಿನಿ ಪುರಭವನಕ್ಕೆ ಕೊಂಡೊಯ್ಯಲಾಯಿತು.
ಪುರಭವನದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆ ತನಕ ಜನಪ್ರತಿನಿಧಿಗಳು, ಕಲಾಭಿಮಾನಿಗಳು, ಕದ್ರಿಯವರ ಸಹ ಕಲಾವಿದರು, ಶಿಷ್ಯಂದಿರು, ಅಭಿಮಾನಿಗಳು, ಹಿತೈಷಿಗಳು, ಸಂಗೀತ ಕಲಾವಿದರು, ಸ್ನೇಹಿತರು, ಸರಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಶ್ರದ್ಧಾಂಜಲಿ ಸಲ್ಲಿಸಿದರು. ತಮಿಳುನಾಡಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅವರ ಶಿಷ್ಯರು, ಕಲಾವಿದರು, ಅಭಿಮಾನಿಗಳು ಆಗಮಿಸಿದ್ದರು. ಸರಕಾರ ಮತ್ತು ಜಿಲ್ಲಾಡಳಿತದ ಪರವಾಗಿ ಅಂತಿಮ ನಮನ ಸಲ್ಲಿಸಲಾಯಿತು.
ಕದ್ರಿ ಗೋಪಾಲನಾಥ್ ಅವರ ಪತ್ನಿ ಸರೋಜಿನಿ, ಪುತ್ರರಾದ ಮಣಿಕಾಂತ್ ಕದ್ರಿ ಮತ್ತು ಗುರುಪ್ರಸಾದ್ ಕದ್ರಿ, ಪುತ್ರಿ ಅಂಬಿಕಾ ಮತ್ತು ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು. ಪುತ್ರ ಗುರುಪ್ರಸಾದ್ ಕುವೈಟ್‌ನಲ್ಲಿದ್ದ ಕಾರಣ ಅಂತ್ಯಕ್ರಿಯೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಗಿತ್ತು. ಅವರು ಸೋಮವಾರ ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು.
ಸ್ಮಾರಕ ನಿರ್ಮಾಣ: ಕದ್ರಿಯವರು ಸ್ಯಾಕ್ಸೋಫೋನ್ ವಾದನದ ಮೂಲಕ ವಿಶ್ವಕ್ಕೆ ಪರಿಚಿತರಾಗಿದ್ದಾರೆ. ಅವರ ಹೆಸರನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡುವ ಉದ್ದೇಶವಿದೆ. ಆದರೆ ಎಲ್ಲಿ, ಹೇಗೆ ಎಂಬುದನ್ನು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗಾರರಿಗೆ ತಿಳಿಸಿದರು.
ಶ್ರದ್ಧಾಂಜಲಿ ಸಭೆ: ಸಮಾಜದ ಎಲ್ಲರನ್ನು ಸೇರಿಸಿಕೊಂಡು ಸಾರ್ವಜನಿಕ ಶ್ರದ್ಧಾಂಜಲಿ ಸಭೆಯೊಂದನ್ನು ಮಂಗಳೂರಿನಲ್ಲಿ ನಡೆಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಕದ್ರಿ ಗೋಪಾಲನಾಥ್ ಅವರ ಕುಟುಂಬದವರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.