ಈ ಬಾರಿ ಕಂಬಳ ನಡೆದೀತೆ?


Team Udayavani, Feb 14, 2017, 8:41 AM IST

kambala.jpg

ಮಂಗಳೂರು: ಕಂಬಳಕ್ಕೆ ಅವಕಾಶವಾಗುವಂತೆ ವಿಧಾನಸಭೆಯಲ್ಲಿ ಮಸೂದೆ ಅನುಮೋದನೆಗೊಂಡಿದ್ದು, ವಿಧಾನ ಪರಿಷತ್‌ನಲ್ಲಿ ಮಂಗಳವಾರ ಅಂಗೀಕಾರಧಿಗೊಳ್ಳುವ ನಿರೀಕ್ಷೆ ಇದೆ. ಅಲ್ಲಿಂದ ಮುಂದೆ ರಾಜ್ಯಪಾಲರ ಅಂಕಿತ ದೊರೆಯಬೇಕಿದೆ. ಇದು ಆದಷ್ಟು ಬೇಗನೆ ನಡೆದರೆ ಮಾತ್ರ ಇನ್ನು ಬಾಕಿ ಉಳಿದಿರುವ ಈ ಋತುವಿನ ಕೆಲವು ಕಂಬಗಳಾದರೂ ನಡೆಸಲು ಸಾಧ್ಯವಿದೆ. 

ಕಂಬಳ, ಹೋರಿ ಓಟ ಹಾಗೂ ಎತ್ತಿನಗಾಡಿ ಓಟದ ಸ್ಪರ್ಧೆಗೆ ಅವಕಾಶವಾಗುವಂತೆ ಪ್ರಾಣಿಹಿಂಸೆ ತಡೆ (ಕರ್ನಾಟಕ ತಿದ್ದುಪಡಿ) ಮಸೂದೆ 2017 ವಿಧಾನಸಭೆಯಲ್ಲಿ ಅಂಗೀಕೃತಗೊಂಡು ವಿಧಾನ ಪರಿಷತ್‌ಗೆ ಹೋಗಿದ್ದು ಅಲ್ಲಿ ಮಂಗಳವಾರ ಅಂಗೀಕೃತಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.

ವಿಧಾನ ಪರಿಷತ್‌ನಲ್ಲಿ ಮಂಜೂರಾದ ಬಳಿಕ ಅದು ಸಚಿವ ಸಂಪುಟಕ್ಕೆ ಹೋಗಿ ರಾಜ್ಯಪಾಲರ ಅಂಗೀಕಾರಕ್ಕೆ ಹೋಗಲಿದೆ. ರಾಜ್ಯಪಾಲರು ಅದನ್ನು ಪರಿಶೀಲಿಸಿ ಸಹಿ ಮಾಡಿದ ಬಳಿಕ ಅದು ಕಾನೂನು ಆಗಿ ರೂಪುಗೊಳ್ಳುತ್ತದೆ. ಸಂಪ್ರದಾಯ, ಸಂಸ್ಕೃತಿ ಅನುಸರಿಸುವ ಮತ್ತು ಕೋಣಗಳ ದೇಸಿ ತಳಿ ಉಳಿಸಿ ಬೆಳೆಸುವ ಅಂಶಗಳನ್ನು ಒಳಗೊಂಡು ರಾಜ್ಯ ಪಶುಸಂಗೋಪನಾ ಇಲಾಖೆ ಈ ಮಸೂದೆಯನ್ನು ಮಂಡಿಸಿರುವುದರಿಂದ ರಾಜ್ಯಕ್ಕೆ ಸಂಬಂಧಪಟ್ಟದ್ದಾಗಿರುತ್ತದೆ. ಇದೇ ವೇಳೆ ರಾಜ್ಯಪಾಲರಿಗೆ ಇದರಲ್ಲಿ ಸಂವಿಧಾನಾತ್ಮಕ ವಿಚಾರಗಳು ಕಂಡುಬಂದರೆ ಈ ಮಸೂದೆಯನ್ನು ರಾಷ್ಟ್ರಪತಿಗಳಿಗೂ ಕಳುಹಿಸಿಕೊಡುವ ಅಧಿಕಾರವನ್ನು ಹೊಂದಿರುತ್ತಾರೆ. ಇದು ಅವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಈ ಹಿಂದೆಯೂ ಕೆಲವು ಮಸೂದೆಗಳು ವಿಧಾನಮಂಡಲದಲ್ಲಿ ಮಂಜೂರಾಗಿದ್ದರೂ ರಾಜ್ಯಪಾಲರು ರಾಷ್ಟ್ರಪತಿಗಳ ಬಳಿಗೆ ಕಳುಹಿಸಿಕೊಟ್ಟ ಉದಾಹರಣೆಗಳಿವೆ. ಆದರೆ ಪ್ರಸ್ತುತ ಮಂಡಿಸಿರುವ ಮಸೂದೆಯಲ್ಲಿ ಇಂತಹ ಸಾಧ್ಯತೆಗಳು ಕಡಿಮೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇನ್ನು ಕೆಲವು ಕಂಬಳ ಮಾತ್ರ ಸಾಧ್ಯ
ಸಾಮಾನ್ಯವಾಗಿ ಅವಿಭಜಿತ ದ.ಕನ್ನಡ ಜಿಲ್ಲೆಯಲ್ಲಿ ನವೆಂಬರ್‌ ತಿಂಗಳ ಕೊನೆಯ ವಾರದಿಂದ ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳ ಪ್ರಥಮಾರ್ಧದವರೆಗೆ ಕಂಬಳಗಳು ಆಯೋಜನೆಗೊಳ್ಳುತ್ತವೆ. ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಈಗಾಗಲೇ ಹಲಧಿವಾರು ಕಂಬಳಗಳ ದಿನಾಂಕಗಳು ಮುಗಿದಿವೆ. ಪ್ರಸ್ತುತದ ಕಂಬಳ ಮಸೂದೆ ಫೆಬ್ರವರಿ ತಿಂಗಳ ಅಂತ್ಯಕ್ಕೆ ಅನುಷ್ಠಾನವಾಗಬಹುದು. ಒಂದು ಕಂಬಳಕ್ಕೆ ಸಿದ್ಧತೆ ಮಾಡಲು ಕನಿಷ್ಠ 10 ದಿನಗಳು ಬೇಕಾಗುತ್ತವೆ. ಆದುದರಿಂದ ವಾರಕ್ಕೆ ಒಂದು ಕಂಬಳವಷ್ಟೇ ಆಯೋಜಿಸಲು ಸಾಧ್ಯ. ಆದುದರಿಂದ ಈ ಬಾರಿ ಕೆಲವು ಕಂಬಳಗಳು ಮಾತ್ರ ನಡೆಯಬಹುದು ಎಂದು ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ ಅವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಎಲ್ಲಿ ಕಂಬಳ?
ದ.ಕ.ಜಿಲ್ಲೆಯಲ್ಲಿ ಕಂಬಳ ಸೀಸನ್‌ ಇನ್ನು ಒಂದೂವರೆ ತಿಂಗಳು ಮಾತ್ರ ಉಳಿದಿವೆ. ಮೂಡಬಿದಿರೆ, ಮಿಯಾರು, ಪುತ್ತೂರು, ಉಪ್ಪಿನಂಗಡಿ, ಅಡ್ವೆ ನಂದಿಕೂರು, ತಲಪಾಡಿ, ಜಪ್ಪಿನಮೊಗರು, ವೇಣೂರು, ಬಂಗಾಡಿ ಕಂಬಳಗಳು ಆಯೋಜನೆಗೊಳ್ಳುವ ಸಾಧ್ಯತೆಗಳಿವೆ ಎಂದು ಕಂಬಳ ಸಂಘಟಕರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.