ಕಂಬಳಕ್ಕೆ ಯುವ ಸಮುದಾಯದ ಆಸಕ್ತಿ ಅಗತ್ಯ
Team Udayavani, Dec 3, 2017, 1:59 PM IST
ಪಡುಪಣಂಬೂರು: ಕರಾವಳಿ ಜಿಲ್ಲೆಯ ಜಾನಪದ ಮತ್ತು ಸಂಸ್ಕೃತಿಯ ಪ್ರತೀಕವಾದ ಕಂಬಳ ಕ್ರೀಡೆಗೆ ಯುವ ಸಮುದಾಯವು ಆಸಕ್ತಿ ವಹಿಸಿರುವುದರಿಂದ ಪರಂಪರೆಯ ಕ್ರೀಡೆಯು ಭವಿಷ್ಯದಲ್ಲಿಯೂ ಮುಂದುವರಿಯುವಲ್ಲಿ ಸಂಶಯವೇ ಇಲ್ಲ. ದೂರದ ಮುಂಬಯಿ ಹಾಗೂ ವಿದೇಶದಲ್ಲಿರುವವರೂ ಸಹ ಕಂಬಳದ ಬಗ್ಗೆ ಅಪಾರ ಅಭಿಮಾನವನ್ನು ಹೊಂದಿದ್ದಾರೆ ಎಂದು ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಅಧ್ಯಕ್ಷ ಕೊಲ್ನಾಡುಗುತ್ತು ರಾಮಚಂದ್ರ ನಾಯಕ್ ಹೇಳಿದರು. ಪಡುಪಣಂಬೂರು ಗ್ರಾಮದ ಮೂಲ್ಕಿ ಅರಮನೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಅರಸು ಕಂಬಳದ ಕರೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಶ್ರಮದಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಿತಿಯ ಕಾರ್ಯಾಧ್ಯಕ್ಷ ವಿನೋದ್ ಎಸ್. ಸಾಲ್ಯಾನ್ ಬೆಳ್ಳಾಯರು ಮಾತನಾಡಿ, ಕಳೆದ ವರ್ಷ ಕಂಬಳದ ಬದಲಿಗೆ ಸ್ಥಳೀಯರ ಸಹಕಾರದಲ್ಲಿ ಕೆಸರುಗದ್ದೆ ಕ್ರೀಡೋತ್ಸವ ನಡೆಸಲಾಗಿತ್ತು. ಈ ಬಾರಿ ಕಂಬಳದ ಬಗ್ಗೆ ಯಾವುದೇ ಅಡ್ಡಿ ಇಲ್ಲದಿರುವುದರಿಂದ ಎಲ್ಲಾ ರೀತಿಯಲ್ಲೂ ವ್ಯವಸ್ಥೆ ಮಾಡಲಾಗಿದೆ ಕಳೆದ ಕೆಲವು ದಿನಗಳಿಂದ ಸ್ಥಳೀಯರ ಹಾಗೂ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಶ್ರಮದಾನ ಮೆಚ್ಚುವಂತದ್ದು ಎಂದರು. ತೋಕೂರು ತಪೋವನದ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.
ಮೂಲ್ಕಿ ಅರಮನೆಯ ಗೌತಮ್ ಜೈನ್, ಕಂಬಳ ಸಮಿತಿಯ ಸದಸ್ಯ ವಾಸುದೇವ ಶೆಣೈ, ಪಡುಪಣಂಬೂರು ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಆಚಾರ್ಯ, ಐಟಿಐನ ಪ್ರಮೋದ್ಕುಮಾರ್ ಕುಬೆವೂರು ಮತ್ತಿತರರು ಉಪಸ್ಥಿತರಿದ್ದರು. ತೋಕೂರು ಐಟಿಐ ವಿದ್ಯಾರ್ಥಿಗಳಿಂದ ಮೂಲ್ಕಿ ಸೀಮೆಯ ಅರಸು ಕಂಬಳದ ಕರೆಯಲ್ಲಿ ಶ್ರಮದಾನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.