ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಅನುಷ್ಠಾನ: ಶ್ರೀನಿವಾಸ ಪೂಜಾರಿ
Team Udayavani, Nov 2, 2019, 4:40 AM IST
ಮಂಗಳೂರು: ರಾಜ್ಯದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಪ್ರಸ್ತಾವಿತ ರಾಷ್ಟ್ರೀಯ ಶಿಕ್ಷಣ ನೀತಿ ಆಶಾದಾಯಕವಾಗಿದೆ. ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನಗೊಳಿಸಲು ಅವಕಾಶ ಸಿಗಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಕನ್ನಡ ಭಾಷೆಯನ್ನು ಶ್ರೀಮಂತ ಗೊಳಿಸುವುದರೊಂದಿಗೆ ನಮ್ಮದೇ ತುಳು, ಕೊಡವ, ಬ್ಯಾರಿ ಭಾಷೆಗಳ ಸಾಹಿತ್ಯ ಸಂಸ್ಕೃತಿಗಳ ಉತ್ತೇಜನಕ್ಕೂ ಮುಂದಾಗಬೇಕು. ಈ ಜಿಲ್ಲೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿರುವ ಕೊಡುಗೆ ಅನನ್ಯವಾದುದು. ಕನ್ನಡದ ಅನೇಕ ಶ್ರೇಷ್ಠ ಸಾಹಿತಿಗಳು, ಚಿಂತಕರು ಈ ನೆಲದವರು ಎಂಬುದು ನಮ್ಮೆಲ್ಲರ ಹೆಮ್ಮೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಾ| ಭರತ್ ಶೆಟ್ಟಿ, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಪೊಲೀಸ್ ಆಯುಕ್ತ ಡಾ|ಹರ್ಷ, ಎಸ್‌ಪಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.
ಕೆಲವೆಡೆ ಹಾರಾಡಿದ ಅನ್ಯ ಧ್ವಜ
ಮಂಗಳೂರು/ ಉಡುಪಿ: ಕರ್ನಾಟಕ ರಾಜ್ಯೋತ್ಸವದ ನಡುವೆಯೇ ಬೆಳ್ತಂಗಡಿಯ ಬಸ್‌ನಿಲ್ದಾಣ ಮತ್ತು ಉಡುಪಿಯ ಶಿರಿಬೀಡಿನಲ್ಲಿ ಅನ್ಯ ಧ್ವಜಗಳು ಹಾರಾಡಿದ ಘಟನೆ ವರದಿಯಾಗಿವೆ.
ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಸಂಭ್ರಮ
ನಗರದ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ತಾಯಿ ಭುವನೇಶ್ವರಿಯ ಮೆರವಣಿಗೆ ಹಲವು ಸ್ತಬ್ಧಚಿತ್ರಗಳ ಸಹಿತ ನಡೆಯಿತು. ಪಥಸಂಚಲನದಲ್ಲಿ ಎರಡು ಪೊಲೀಸ್ ಬ್ಯಾಂಡ್ ಸೇರಿದಂತೆ ಒಟ್ಟು 13 ತಂಡಗಳು ಭಾಗವಹಿಸಿದವು.
ಮುಂದಿನ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮನಪಾ ಚುನಾವಣೆ ಘೋಷಣೆ ಆಗಿರುವುದರಿಂದ ನಗರ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಆಯೋಜಿಸಿರಲಿಲ್ಲ. ಮುಂದಿನ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜತೆಯಾಗಿ ನೀಡಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.