ಕನ್ನಡ ಸಾಹಿತ್ಯ ಜಾತ್ರೆಗೆ ಸಜ್ಜಾಗುತ್ತಿದೆ ಕರಾವಳಿ
Team Udayavani, Jan 11, 2021, 3:28 AM IST
ಮಂಗಳೂರು: ಕನ್ನಡ ನಾಡು ನುಡಿಯ ಸಾಹಿತ್ಯ ಜಾತ್ರೆಗೆ ಕರಾವಳಿ ಸಿದ್ಧಗೊಳ್ಳುತ್ತಿದೆ. ಜನವರಿ 26ರಂದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿದ್ದು, ಫೆಬ್ರವರಿ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ತಾಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಸಾಹಿತ್ಯ ಪರಿಷತ್ತು ಸಮಿತಿಗಳ ಸಭೆ ನಡೆದಿದೆ. ಸದ್ಯದ ತೀರ್ಮಾನದಂತೆ ಫೆಬ್ರವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮೂರು ದಿನಗಳ ಕಾಲ ದ.ಕ. ಜಿಲ್ಲಾ ಮಟ್ಟದ ಸಮ್ಮೇಳನ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.
ತಾಲೂಕು ಸಮ್ಮೇಳನಗಳು :
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಬಳಿಕ ತಾಲೂಕು ಮಟ್ಟದ ಸಮ್ಮೇಳನಗಳು ನಡೆಯುವ ನಿರೀಕ್ಷೆ ಇದೆ. ಅದರಂತೆ ಫೆ. 9ರಂದು ಮಂಗಳೂರು ತಾಲೂಕು ಸಮ್ಮೇಳನ, ಫೆ. 20ರಂದು ಬಂಟ್ವಾಳದ ಕನ್ನಡ ಭವನದ ಉದ್ಘಾಟನೆ ಮತ್ತು ಫೆ. 21ರಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಸಾಧ್ಯತೆ ಇದೆ. ಮಾರ್ಚ್ ಎರಡನೇ ವಾರದಲ್ಲಿ ಪುತ್ತೂರಿನಲ್ಲಿ ಪುಸ್ತಕ ಮೇಳ ಆಯೋಜನೆ ಮಾಡುವ ಯೋಜನೆಯನ್ನು ಜಿಲ್ಲಾ ಕಸಪಾ ಆಯೋಜಿಸಲಿದೆ.
ಕೋವಿಡ್ ನಿಯಮದ ಪ್ರಕಾರವೇ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆಯಲಿವೆ. ಆನ್‌ಲೈನ್, ಜಾಲತಾಣಗಳ ಮೂಲಕ ನೇರಪ್ರಸಾರ ಮಾಡುವ ಯೋಚನೆಯನ್ನು ಮಾಡಲಾಗುತ್ತಿದೆ. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದ್ದು, ಶೀಘ್ರದಲ್ಲಿ ಹೆಸರು ಪ್ರಕಟವಾಗಲಿದೆ.
ಮಂಗಳೂರಿನಲ್ಲೇ ಜಿಲ್ಲಾ ಸಮ್ಮೇಳನ :
ಈ ಬಾರಿಯ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಂಗಳೂರಿನಲ್ಲಿಯೇ ನಡೆಯಲಿದೆ. ಜಿಲ್ಲಾ ಕೇಂದ್ರವಾದ ಮಂಗಳೂರು ನಗರದಲ್ಲಿಯೇ ಸಮ್ಮೇಳನ ನಡೆಸಲು ಸಾಹಿತ್ಯಾಸಕ್ತರು ಇಚ್ಛೆ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣಕ್ಕೆ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆದಿರಲಿಲ್ಲ. 23ನೇ ಸಮ್ಮೇಳನವು ಮಂಗಳೂರಿನ ಪುರಭವನದಲ್ಲಿ ಯಶಸ್ವಿಯಾಗಿ ನಡೆದಿತ್ತು.
ಜ. 26: ಉಡುಪಿ ಜಿಲ್ಲಾ ಸಮ್ಮೇಳನ :
ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ “ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಚೇತನಾ ಪ್ರೌಢ ಶಾಲೆಯಲ್ಲಿ ಜ. 26ರಂದು ಉಡುಪಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಕಾಪು ತಾಲೂಕಿನಲ್ಲಿ ತಾಲೂಕು ಸಮ್ಮೇಳನ ನಡೆಸಲು ಈಗಾಗಲೇ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ. ಕಳೆದ ವರ್ಷ ಮಾ. 14ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಮುಂದೂಡಬೇಕಾಯಿತು. ಈ ವರ್ಷ ಜ. 26ರಂದು ಸಾಹಿತಿ ವೈದೇಹಿ ಅವರ ಅಧ್ಯಕ್ಷತೆಯಲ್ಲಿ ಕೊರೊನಾ ನಿಯಮ ಪಾಲಿಸಿ ಜಿಲ್ಲಾ ಮಟ್ಟದ ಸಮ್ಮೇಳನಕ್ಕೆ ನಡೆಯಲಿದೆ’ ಎಂದಿದ್ದಾರೆ.
ಪರಿಷತ್ತಿನ ಸೂಚನೆಯಂತೆ ಈ ಬಾರಿ ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನ ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿದೆ. ಜತೆಗೆ ತಾಲೂಕು ಮಟ್ಟದಲ್ಲಿಯೂ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಸಭೆ ನಡೆಸಿದ್ದು, ಸದ್ಯದಲ್ಲಿಯೇ ಅಧ್ಯಕ್ಷರ ಆಯ್ಕೆ ನಡೆಯಲಿದೆ.– ಪ್ರದೀಪ್ ಕುಮಾರ್ ಕಲ್ಕೂರ, ಕಸಾಪ ದ.ಕ. ಜಿಲ್ಲಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.