ನಗರದಲ್ಲಿ ಕನ್ನಡ ಪ್ರೇಮ ಅನಾವರಣ


Team Udayavani, Nov 2, 2017, 9:37 AM IST

2-Mng-1.jpg

ಮಹಾನಗರ: ಜಿಲ್ಲಾಡಳಿತದ ವತಿಯಿಂದ ಬುಧವಾರ ನಗರದಲ್ಲಿ ಜರಗಿದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ನಾಡು, ನುಡಿ ಬಗೆಗಿನ ಪ್ರೇಮ ಅನಾವರಣಗೊಂಡಿತು.

ನಗರದ ಜ್ಯೋತಿ ಜಂಕ್ಷನ್‌ನಿಂದ ನೆಹರೂ ಮೈದಾನ್‌ ತನಕ ಆಕರ್ಷಕ ಸ್ತಬ್ಧ ಚಿತ್ರಗಳೊಂದಿಗೆ ವಿದ್ಯಾರ್ಥಿಗಳು ಮತ್ತು ಗಣ್ಯರ ಮೆರವಣಿಗೆ, ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರಿಂದ ರಾಷ್ಟ್ರ ಧ್ವಜಾರೋಹಣ, ಪರೇಡ್‌ ವೀಕ್ಷಣೆ ಹಾಗೂ ರಾಜ್ಯೋತ್ಸವ ಸಂದೇಶ, ವಿವಿಧ ಘಟಕಗಳಿಂದ ಪಥ ಸಂಚಲನ, ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ ಮತ್ತು ಕವಾಯತು ಪ್ರದರ್ಶನ, ನಾಡ ಗೀತೆಗಳ ಗಾಯನ ನೆರವೇರಿತು.

ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ, ಸಂಸದ ನಳಿನ್‌ ಕುಮಾರ್‌ ಕಟೀಲು, ಮೇಯರ್‌ ಕವಿತಾ
ಸನಿಲ್‌, ಮುಡಾ ಅಧ್ಯಕ್ಷ ಕೆ. ಸುರೇಶ್‌ ಬಲ್ಲಾಳ್‌, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಉಪ ಮೇಯರ್‌ ರಜನೀಶ್‌, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ತಾ.ಪಂ. ಅಧ್ಯಕ್ಷ ಮಹಮದ್‌ ಮೋನು, ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ ಮತ್ತು ಇತರ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿದ್ದರು.

ಅತ್ಯುತ್ತಮ ತಂಡಕ್ಕೆ ಪ್ರಶಸ್ತಿ
ಅತ್ಯುತ್ತಮ ಪಥ ಸಂಚಲನಕ್ಕಾಗಿ ಬಾಲಕಿಯರ ರಸ್ತೆ ಸುರಕ್ಷಾ ಮತ್ತು ಗಸ್ತು ದಳ
(ಆರ್‌.ಎಸ್‌.ಪಿ.) ಪ್ರಥಮ ಹಾಗೂ ಭಾರತ್‌ ಸೇವಾ ದಳದ ಸೀನಿಯರ್‌ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ರಾಜ್ಯೋತ್ಸವ ಪ್ರಶಸ್ತಿ
ಉದಯವಾಣಿಯ ಮಂಗಳೂರಿನ ಹಿರಿಯ ವರದಿಗಾರ ಕೇಶವ ಕುಂದರ್‌ ಸಹಿತ 15 ಮಂದಿ ಸಾಧಕರು ಮತ್ತು ನಾಲ್ಕು ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರತಿಭಾ ಪುರಸ್ಕಾರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 12 ಮಂದಿ ಮಕ್ಕಳಿಗೆ ಅಸಾಧಾರಣ ಪ್ರತಿಭಾ ಪುರಸ್ಕಾರ ಹಾಗೂ 2017 ಎಪ್ರಿಲ್‌ನಲ್ಲಿ ಜರಗಿದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಜಿಲ್ಲೆಯ 11 ಮಂದಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಮತ್ತು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಸಮ್ಮಾನಿಸಲಾಯಿತು.

ನಾಡ ಗೀತೆ, ಕವಾಯತು
ಉರ್ವ ಕೆನರಾ ಹೈಸ್ಕೂಲ್‌ ವಿದ್ಯಾರ್ಥಿನಿಯರಿಂದ ನಾಡಗೀತೆ ಗಾಯನ, ಗಾಂಧಿ ನಗರ ಸರಕಾರಿ ಶಾಲೆ, ಗುಜರಾತಿ ಆಂಗ್ಲ ಮಾಧ್ಯಮ ಶಾಲೆ, ಬೋಳಾರ ಸೈಂಟ್‌ ಆ್ಯನ್ಸ್‌ ಶಾಲೆ, ಕುದ್ರೋಳಿ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ ಮತ್ತು ಬಲ್ಮಠ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಸಾಮೂಹಿಕ ನೃತ್ಯ/ಕವಾಯತು  ಪ್ರದರ್ಶನ ನಡೆಯಿತು. 

ಭುವನೇಶ್ವರಿ ಮೆರವಣಿಗೆ
ಕೆಂಪು-ಹಳದಿ ಬಣ್ಣದ ಚಿತ್ತಾರದ ಆಕರ್ಷಣೆ..ನಾಡಿನ ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳ ಸಮಾಗಮ..ಕನ್ನಡಾಂಬೆಯೇ ಆವಿರ್ಭವಿಸಿದಂತೆ ಭಾಸವಾಗುವ ತಾಯಿ ಭುವನೇಶ್ವರಿಯ ಪ್ರತಿರೂಪ..ನಗರದಲ್ಲೆಡೆ ಶೋಭಾಯಮಾನವಾಗಿ ವಿರಾಜಿಸಿದ ಕನ್ನಡದ ಕಂಪು..

ಇವು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಸಮಿತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನೇತೃತ್ವದಲ್ಲಿ ನಗರದ ಬಲ್ಮಠ ಜ್ಯೋತಿ ವೃತ್ತದಿಂದ ನೆಹರೂ ಮೈದಾನದ ತನಕ ಹಮ್ಮಿಕೊಂಡ ಭುವನೇಶ್ವರಿ
ಮೆರವಣಿಗೆಯಲ್ಲಿ ಕಂಡು ಬಂದ ನಾಡಿನ ಶ್ರೀಮಂತಿಕೆ ಸಾರುವ ದೃಶ್ಯಗಳು.

ಕೆಂಪು-ಹಳದಿ ಬಣ್ಣದ ದಿರಿಸು, ಶಾಲುಗಳು ಆಕರ್ಷಣೀಯವಾಗಿ ಹೊಸ ಮೆರುಗು ನೀಡಿತು. ನಾಡಿನ ಕಲಾ
ಶ್ರೀಮಂತಿಕೆ ಸಾರುವ ಸ್ತಬ್ಧಚಿತ್ರಗಳು, ಗೊಂಬೆ ಕುಣಿತ, ಯಕ್ಷಗಾನ ಕಲೆ ಸಾರುವ ಗೊಂಬೆಗಳು ಮೆರವಣಿಗೆಗೆ
ಕಳೆಗಟ್ಟಿದ್ದವು. 

ಪರಿಸರ ಸಂರಕ್ಷಣೆ ಕುರಿತಾದ ಅರಣ್ಯ ಇಲಾಖೆಯ ಸ್ತಬ್ಧಚಿತ್ರ, ಗ್ರಾಮ ಜೀವನ ಪರಿಕಲ್ಪನೆಯ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ತಬ್ಧ ಚಿತ್ರಗಳು ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದವು.

ದೇವಾಲಯಗಳ ಮಂಗಳವಾದ್ಯಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಭಾರತ ಸೇವಾದಳ, ಕನ್ನಡಪರ ಸಂಘಟನೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡವು.

ಉದ್ಘಾಟನೆ
ಕನ್ನಡ ಭುವನೇಶ್ವರಿಯ ಮೆರವಣಿಗೆಯನ್ನು ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕರ್‌ ಉದ್ಘಾಟಿಸಿದರು.

ಅಪರ ಜಿಲ್ಲಾಧಿಕಾರಿ ಕುಮಾರ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ,
ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ಆರೋಗ್ಯ ಇಲಾಖೆ ಅಧಿಕಾರಿ ಡಾ| ರಾಜೇಶ್‌
ಮತ್ತಿತರರು ಉಪಸ್ಥಿತರಿದ್ದರು.

ಆಕರ್ಷಕ ಪಥ ಸಂಚಲನ 
ವಿವಿಧ ಘಟಕಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್‌ಸ್ಪೆಕ್ಟರ್‌ ವಿಠಲ
ಶಿಂಧೆ ಅವರು ಪಥ ಸಂಚಲನದ ದಂಡ ನಾಯಕರಾಗಿ ಕಾರ್ಯನಿರ್ವಹಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌
ಆರ್‌ಪಿ, ನಗರ ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ, ಪೊಲೀಸ್‌ ವಾದ್ಯವೃಂದ, ಅಗ್ನಿಶಾಮಕ ದಳ, ಅರಣ್ಯ ಪಡೆ, ಎನ್‌ಸಿಸಿ ಏರ್‌ವಿಂಗ್‌ ಮತ್ತು ನೇವಲ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌, ಭಾರತ್‌ ಸೇವಾದಳ, ಬಾಲಕಿಯರ ರಸ್ತೆ ಸುರಕ್ಷತಾ ಮತ್ತು ಗಸ್ತು ದಳ ಸಹಿತ 14 ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದವು. 

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.