ತೆರೆಮರೆಯಲ್ಲಿ ಮಿಂಚುತ್ತಿರುವ ಕರಾಟೆಪಟು ದಿಲ್‌ನಾಜ್‌

Team Udayavani, Aug 15, 2017, 9:17 PM IST

Karate-15-8.jpg

ಮಡಂತ್ಯಾರು: ಸಾಧನೆಗೆ ಯಾವ ಬೇಲಿ ಕೂಡ ಇಲ್ಲ. ಸಾಧಿಸುವ ಛಲ ಇರಬೇಕು ಅಷ್ಟೆ. ಸಮಾಜದಲ್ಲಿ ನಮಗೆ ಸ್ಥಾನಮಾನ ಸಿಗಬೇಕಾದರೆ ಸಾಧನೆಯ ಶಿಖರ ಏರಬೇಕು. ಪ್ರತಿಯೊಬ್ಬ ವ್ಯಕ್ತಿಯ ಸ್ಥಾನಮಾನ ನಿರ್ಧಾರವಾಗುವುದು ಅವರವರ ಸಾಧನೆಯಿಂದ. ಸಾಧನೆಗೆ ತಕ್ಕ ಫಲ ನೀಡುವಲ್ಲಿ ಸಹಕಾರಿ ಆಗುವುದು ಅವರಲ್ಲಿರುವ ಶ್ರಮ ಮತ್ತು ನಂಬಿಕೆ. ಇಷ್ಟಿದ್ದರೆ ಸಾಧನೆ ಎಂಬುದು ಕಷ್ಟದ ಮಾತಲ್ಲ ಎನ್ನುವುದಕ್ಕೆ ಉದಾಹರಣೆ ವಾಮದ ಪದವಿನ ದಿಲ್‌ನಾಜ್‌.

ಬಂಟ್ವಾಳ ತಾಲೂಕಿನ ಬಡತನದ ಒಂದು ಕುಟುಂಬದಲ್ಲಿ ಜನಿಸಿದ ಬಾಲಕಿ ಇಂದು ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಹೆಣ್ಣುಮಕ್ಕಳು ಕೂಡ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾಳೆ. ತಾಲೂಕಿನ ಕುಡಂಬೆಟ್ಟು ಗ್ರಾಮದ ಬಸ್ತಿಕೋಡಿ ಮನೆಯ ಮೊಹಮ್ಮದ್‌ ಇಕ್ಬಾಲ್‌ ಮತ್ತು ಶಮೀಮ ದಂಪತಿ ಪುತ್ರಿಯಾದ ದಿಲ್‌ನಾಜ್‌ ಬಾಲ್ಯದಿಂದಲೇ ಚುರುಕಾಗಿದ್ದಳು. ಪ್ರಾಥಮಿಕ ಶಿಕ್ಷಣವನ್ನು ವಾಮದಪದವು ಚೆನ್ನೈತ್ತೋಡಿಯಲ್ಲಿ ಮಾಡಿದ್ದು ಅನಂತರ ಪ್ರೌಢಶಿಕ್ಷಣವನ್ನು ಕಲ್ಲಬಾಗಿಲು ಬುರೂಜ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಡೆದಿದ್ದು ಪ್ರಾಥಮಿಕ ಶಾಲೆಯಲ್ಲಿ ಇರುವಾಗಲೇ ಕರಾಟೆಯಲ್ಲಿ ಆಸಕ್ತಿ ಹೊಂದಿದ್ದಳು. ಆದರೆ ಬಡತನ ಎನ್ನುವ ಬೇಲಿ ಅಡ್ಡಬರುತ್ತಿತ್ತು. ತಂದೆ ಕೂಲಿ ಕಾರ್ಮಿಕನಾಗಿದ್ದು ಮೂವರು ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತಿದ್ದರು. ಕಳೆದ ನಾಲ್ಕು ವರ್ಷದ ಹಿಂದೆ ಬುರೂಜ್‌ ಶಾಲೆಯಲ್ಲಿ ಕರಾಟೆ ಅಭ್ಯಾಸ ಆರಂಭಿಸಿದ್ದು ಸಾಧನೆ ಮಾಡಲೇಬೇಕೆನ್ನುವ ಛಲ ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗುವಲ್ಲಿ ಯಶಸ್ವಿಯಾಗಿದೆ.

ಅಂತಾರಾಷ್ಟ್ರೀಯ ಚಿನ್ನದ ಪದಕ

ಮೂಡಬಿದಿರೆಯ ಮೊಹಮ್ಮದ್‌ ನದೀಂ ಕರಾಟೆ ಶಿಕ್ಷರಾಗಿದ್ದು ಪ್ರತೀ ರವಿವಾರ ತರಬೇತಿ ನೀಡುತ್ತಿದ್ದಾರೆ. ನಾಲ್ಕು ವರ್ಷದಿಂದ ಹಲವಾರು ಕಡೆ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ದಿಲ್‌ನಾಜ್‌ 2013ರಲ್ಲಿ ಪುಣೆಯಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅಫ್ಘಾನಿಸ್ತಾನ, ಚೀನಾ, ನೇಪಾಳ, ಶ್ರೀಲಂಕಾ ದೇಶದ ಸ್ಪರ್ಧಿಗಳು ಭಾಗವಹಿಸಿದ್ದು ಅದರಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. 2017ರ ಆಗಸ್ಟ್‌ 5 ಮತ್ತು 6 ರಂದು ಆಂಧ್ರಪ್ರದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯ ಕುಮಿಟೆ 45ರಿಂದ 50ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆದ್ದುಕೊಂಡಿದ್ದು ಒಟ್ಟು 20 ಚಿನ್ನದ ಪದಕ, 2ಬೆಳ್ಳಿ ಪದಕ, 1ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಕಲಿಕೆಯಲ್ಲೂ ಮುಂದು
ಬಡ ಕುಟುಂಬವಾದರೂ ವಿದ್ಯೆಗೆ ಯಾವುದೇ ಕೊರತೆ ಬಾರದಂತೆ ಮಾಡಿದ ಹೆತ್ತವರು ಮಗಳ ಕನಸಿಗೂ ಉತ್ತೇಜನ ನೀಡುತ್ತಾ ಬಂದರು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.75 ಅಂಕ ಗಳಿಸಿದ್ದು  ಪ್ರಸ್ತುತ ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಪದವಿಪೂರ್ವ ಕಾಲೇಜಿನ  ಪ್ರಥಮ ಪಿಯುಸಿ ವಿದ್ಯಾರ್ಥಿ. ಕಾಲೇಜಿನ ಪ್ರಾಂಶುಪಾಲ ಜೆರೂಮ್‌ ಡಿ’ಸೋಜಾ ಕೂಡ ಉತ್ತಮ ಪ್ರೋತ್ಸಾಹ ನೀಡುತ್ತಿದ್ದಾರೆ ಎನ್ನುತಾರೆ ದಿಲ್‌ನಾಜ್‌.

ಡಾಕ್ಟರ್‌, ಕರಾಟೆ ಶಿಕ್ಷಕಿಯಾಗುವ ಆಸೆ
ಡಾಕ್ಟರ್‌ ಆಗಿ ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಕನಸು ಇದೆ. ಕರಾಟೆಯಲ್ಲಿ ಈಗಾಗಲೆ ಸೀನಿಯರ್‌ ರೆಫರಿ ಮಾಡುತ್ತಿದ್ದು ಕರಾಟೆ ಶಿಕ್ಷಕಿಯಾಗುವ ಆಸೆ ಇದೆ. ಮಡಂತ್ಯಾರು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಯೋಜನೆ ಇದೆ. ಕರಾಟೆ ಗುರುಗಳ ಅನುಮತಿ ಪಡೆದು ಇದನ್ನು ಮುಂದುವರಿಸುತ್ತೇನೆ.                
– ದಿಲ್‌ನಾಜ್‌, ಬಸ್ತಿಕೋಡಿ ಕರಾಟೆ ಪಟು

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.