ಸಾಂಸ್ಕೃತಿಕ ಸೊಬಗಿಗೆ ಅಗ್ರ ವೇದಿಕೆ: ಗುರುಕಿರಣ್‌


Team Udayavani, Dec 22, 2018, 9:48 AM IST

2112mlr25.jpg

ಮಂಗಳೂರು: ಕರಾವಳಿಯ ಸಮಗ್ರ ಸಾಂಸ್ಕೃತಿಕ ಸೊಬಗನ್ನು ಬಿತ್ತರಿಸುವುದಕ್ಕೆ ಕರಾವಳಿ ಉತ್ಸವ ಅಗ್ರ ವೇದಿಕೆ ಎಂದು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾಡಳಿತದ ನೇತೃತ್ವದಲ್ಲಿ ಡಿ.30ರ ವರೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿರುವ “ದ.ಕ. ಜಿಲ್ಲಾ ಕರಾವಳಿ ಉತ್ಸವ’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಉತ್ಸವದ ಮೆರವಣಿಗೆಯಲ್ಲಿಯೇ ಕರ್ನಾಟಕದ ದರ್ಶನವಾಗಿದೆ. ಹಬ್ಬದ ವಾತಾವರಣ ನಗರದಲ್ಲಿ ಮೂಡಿದ್ದು, ತುಳುನಾಡಿನ ವೈಭವ ನಮ್ಮೆಲ್ಲರಿಗೆ ದಾರಿದೀಪ ಎಂದವರು ಹೇಳಿದರು.

ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಯು.ಟಿ. ಖಾದರ್‌, ಕರಾವಳಿಯ ಸಂಸ್ಕೃತಿ, ಆಚಾರ ವಿಚಾರಗಳು ಜಗತ್ತಿಗೆ ದಿಕ್ಸೂಚಿ. ಇಲ್ಲಿನ ಸಾಂಸ್ಕೃತಿಕ ನೆಲೆಯನ್ನು ಕರಾವಳಿ ಉತ್ಸವದ ಮೂಲಕ ಕಟ್ಟಿಕೊಡುವ ವಿನೂತನ ಪ್ರಯತ್ನ ನಡೆಯುತ್ತಿದೆ ಎಂದರು.

ಮೇಯರ್‌ ಭಾಸ್ಕರ್‌ ಕೆ. ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಸದಸ್ಯರಾದ ಶಾಹುಲ್‌ ಹಮೀದ್‌, ಮಮತಾ ಡಿ.ಎಸ್‌. ಗಟ್ಟಿ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌, ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ, ಮನಪಾ ಆಯುಕ್ತ ಮೊಹಮ್ಮದ್‌ ನಝೀರ್‌, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ, ಕರಾವಳಿ ಉತ್ಸವ ಸಾಂಸ್ಕೃತಿಕ ಸಮಿತಿಯ ನರೇಂದ್ರ ನಾಯಕ್‌, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಮುಖರಾದ ಶಿವರಾಮಯ್ಯ, ರವಿಚಂದ್ರ ನಾಯಕ್‌ ಉಪಸ್ಥಿತರಿದ್ದರು. 

ಆಕರ್ಷಕ ಮೆರವಣಿಗೆ
ಉದ್ಘಾಟನೆಗೂ ಮುನ್ನ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಾಂಸ್ಕೃತಿಕ ಮೆರ
ವಣಿಗೆ ಸಾಗಿಬಂತು. 40ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು. ಕರಾವಳಿ ಉತ್ಸವ ಜತೆಗೆ ಪಣಂಬೂರು ಬೀಚ್‌ನಲ್ಲಿ ಬೀಚ್‌ ವಾಲಿಬಾಲ್‌, ಗಾಳಿಪಟ ತಯಾರಿ ಪ್ರಾತ್ಯಕ್ಷಿಕೆ, ಮರಳಿನಿಂದ ಶಿಲ್ಪ ರಚನೆ, ಆಹಾರೋತ್ಸವ, ಡ್ರಮ್‌ ಜಾಮ್‌, ಸಂಜೆ ಸಂಗೀತ ವೈವಿಧ್ಯ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಕರಾವಳಿ ಮೈದಾನದಲ್ಲಿ ಡಿ.28ರಂದು ಹ್ಯಾಂಡ್‌ಬಾಲ್‌ ಪಂದ್ಯಾಟ, ವಿಕಲಚೇತನರಿಗೆ ಪಂದ್ಯಾವಳಿ, ಮುಕ್ತ ಲಗೋರಿ ಸ್ಪರ್ಧೆ ಹಾಗೂ 29ರಂದು ಡಾನ್‌ಬಾಸ್ಕೋದಲ್ಲಿ ವೇಟ್‌ ಲಿಫ್ಟಿಂಗ್‌ ಸ್ಪರ್ಧೆ ನಡೆಯಲಿದೆ. ಅಲ್ಲದೆ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಉದ್ಯಾನವನದಲ್ಲಿ ಪ್ರತೀ ದಿನವೂ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ. 

ಉದ್ಘಾಟನೆ ವೇದಿಕೆಯಲ್ಲಿಯೇ ಪ್ರತಿಭಟನೆ!
ಉದ್ಘಾಟನ ಕಾರ್ಯಕ್ರಮದಲ್ಲಿ ಮೇಯರ್‌ ಭಾಸ್ಕರ್‌ ಭಾಷಣ ಮಾಡುತ್ತಿರುವಾಗ ವೇದಿಕೆ ಮುಂಭಾಗಕ್ಕೆ ಏಕಾಏಕಿ ಆಗಮಿಸಿದ ವಿದ್ಯಾ ದಿನಕರ್‌ ನೇತೃತ್ವದ ಎಂಆರ್‌ಪಿಎಲ್‌ ಹೋರಾಟಗಾರರ ತಂಡ, “ಕರಾವಳಿ ಉಳಿಸಿ ಎಂಆರ್‌ಪಿಎಲ್‌ ವಿಸ್ತರಣೆ ನಿಲ್ಲಿಸಿ’ ಎಂಬ ಬರಹದ ಪೋಸ್ಟರ್‌ ಪ್ರದರ್ಶಿಸಿದರು. ಈ ವೇಳೆ ಸಚಿವ ಖಾದರ್‌ ಪ್ರತಿಭಟನ ನಿರತರನ್ನು ಸಮಾಧಾನಿಸಿ, ವೇದಿಕೆಯಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾದರು. ಬಳಿಕ, ಸಚಿವ ಖಾದರ್‌ ಸಭೆಯನ್ನುದ್ದೇಶಿಸಿ ಮಾತನಾಡಿ, ಕರಾವಳಿ ಉತ್ಸವಕ್ಕೆ ಹೋರಾಟಗಾರರ ಮೂಲಕ ಚೆಲುವು ಬಂದಿದೆ. ಅವರಿಗೆ ಧನ್ಯವಾದ. ಎಂಆರ್‌ಪಿಎಲ್‌ನ ಕೆಲವು ವಿಚಾರ ನ್ಯಾಯಾಲಯದಲ್ಲಿವೆ. ಮುಖ್ಯಮಂತ್ರಿಯಾದಿಯಾಗಿ ಸಚಿವರು, ಅಧಿಕಾರಿಗಳ ಜತೆಗೆ ಮಾತನಾಡಲಾಗಿದೆ. ಮುಂದೆ ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಇದಕ್ಕೆ ಸಮಾಧಾನಗೊಳ್ಳದ ಪ್ರತಿಭಟನನಿರತರು ಧಿಕ್ಕಾರ ಕೂಗಿದರು. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಹೋರಾಟಗಾರರನ್ನು ಕರೆದೊಯ್ದರು.  

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.