EXAM ಮಂಗಳೂರಿನಲ್ಲೇ ನ್ಯಾಯಾಂಗ ಪರೀಕ್ಷೆ ಬರೆದ ಗರ್ಭಿಣಿ
Team Udayavani, Nov 19, 2023, 11:55 PM IST
ಮಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ಅಭ್ಯರ್ಥಿಯೋರ್ವರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದಿದ್ದಾರೆ.
ಮಂಗಳೂರಿನ ನ್ಯಾಯವಾದಿ ನೇತ್ರಾವತಿ ಅವರು ನ್ಯಾಯಾಂಗ ಸೇವೆಯ ಮುಖ್ಯ ಪರೀಕ್ಷೆ ಬರೆಯಲು ಆಯ್ಕೆಯಾಗಿದ್ದರು. ಪರೀಕ್ಷೆ ಬೆಂಗ ಳೂರಿನಲ್ಲಿ ನಿಗದಿಯಾಗಿತ್ತು. ಆದರೆ ತಾನು ಗರ್ಭಿಣಿಯಾಗಿರುವ ಕಾರಣ ಮಂಗಳೂರಿನಲ್ಲಿಯೇ ಪರೀಕ್ಷೆ ಬರೆ ಯಲು ಅನುಮತಿ ನೀಡುವಂತೆ ಹೈ ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಸಂಬಂಧಿಸಿದ ಹೈಕೋರ್ಟ್ನ ಸಮಿತಿಯು ಈ ಅರ್ಜಿಯನ್ನು ಪುರಸ್ಕರಿಸಿ ಅಭ್ಯರ್ಥಿಯ ಮನವಿಯಂತೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು. ಮುಖ್ಯ ನ್ಯಾಯ ಮೂರ್ತಿ ಪ್ರಸನ್ನ ಬಿ. ವರಾಳೆ ಕೂಡ ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಲು ನಿರ್ದೇಶನ ನೀಡಿದ್ದರು. ಅದರಂತೆ ನೇತ್ರಾವತಿ ಅವರು ಶನಿವಾರ ಮತ್ತು ರವಿವಾರ ಪರೀಕ್ಷೆ ಬರೆದಿದ್ದಾರೆ. ಮುನ್ನೆಚ್ಚರಿಕೆಯಾಗಿ ನ್ಯಾಯಾ ಲಯ ದ ಆವರಣದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.