Karnataka Polls ಜೆಡಿಎಸ್ ಗೆ ಮೊಯ್ದಿನ್ ಬಾವ: ಮಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ
Team Udayavani, Apr 20, 2023, 11:31 AM IST
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ ಪೈಪೋಟಿ ಇತ್ತು. ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದ್ದು, ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ:ಮೋದಿ ಉಪನಾಮ ಪ್ರಕರಣದಲ್ಲಿ Rahul ಗೆ ಮತ್ತೆ ಸಂಕಷ್ಟ: ತಡೆಯಾಜ್ಞೆ ನೀಡಲು ಕೋರ್ಟ್ ನಕಾರ
ಟಿಕೆಟ್ ಕೈ ತಪ್ಪಿದ ಬಳಿಕ ವಿಡಿಯೋ ಸಂದೇಶ ಕಳುಹಿಸಿದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ನನ್ನನ್ನು ಕಾಂಗ್ರೆಸ್ ಪಕ್ಷ ಉಪಯೋಗಿಸಿ ಹಣದ ಆಸೆಗಾಗಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ನನ್ನ ಹೆಸರಿಗಾಗಿದ್ದ ಬಿಫಾರಂ ಅನ್ನು ಎರಡು ಬಾರಿ ತಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.