ಷರತ್ತಿಗೊಳಪಟ್ಟು ನಾಳೆಯಿಂದ ಕಾಸರಗೋಡು ಬಸ್ ಸಂಚಾರ ಆರಂಭ
Team Udayavani, Jul 18, 2021, 6:05 PM IST
ಮಂಗಳೂರು: ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಈ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಪ್ರಕಟಣೆಯಲ್ಲಿ,ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ನಾಳೆಯಿಂದ ಅನುಮತಿ ನೀಡಲಾಗಿದೆ. ಕೆಲವೊಂದು ಷರತ್ತುಗಳನ್ನು ಮುಂದಿಟ್ಟು ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಅವರ ಅನುಕೂಲಕ್ಕೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ:
- ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು
- ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.