Kateel Mela: ರಾತ್ರಿ ಇಡೀ ಯಕ್ಷಗಾನ ಪ್ರದರ್ಶನ
Team Udayavani, Jan 9, 2024, 7:00 AM IST
ಕಟೀಲು/ಮಂಗಳೂರು: ಕಾಲಮಿತಿ ಪದ್ಧತಿಯಲ್ಲಿ ನಡೆಯುತ್ತಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ. 14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.
ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಉಚ್ಚ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ. 14ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ಕೃಷ್ಣಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ಪೂರ್ಣರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ, ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು. ಶಬ್ದಮಾಲಿನ್ಯ ಉಂಟಾಗಲಾರದು, ಧ್ವನಿವರ್ಧಕ ಬಳಕೆಯಿಂದ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ,ನಗರದಲ್ಲಿ ಅದರ ಶಬ್ದಮಿತಿಯನ್ನು ನೋಡಿಕೊಳ್ಳಲಾಗುವುದು, ಇದು ಹರಕೆಯ ಆಟವಾದ್ದರಿಂದ ಜನರಿಗೆ ಯಾವುದೇ ಸಮಸ್ಯೆಯೂ ಆಗಲಾರದು ಎಂದು ಸನತ್‌ಕುಮಾರ್ ಶೆಟ್ಟಿ “ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.