ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 57 ಜೋಡಿಗಳಿಗೆ ವಿವಾಹ
Team Udayavani, Dec 18, 2022, 11:11 PM IST
ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರವಿವಾರ 57 ಜೋಡಿಗಳಿಗೆ ಸರಳ ರೀತಿಯಲ್ಲಿ ವಿವಾಹ ನೆರವೇರಿತು.
ಬೆಳಗ್ಗೆ 8ರಿಂದ ಆರಂಭವಾದ ವಿವಾಹ ಮುಹೂರ್ತ 1 ಗಂಟೆಯ ತನಕ ನಡೆಯಿತು. 25 ಸಾವಿರಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಲ್ಲದೆ, ಸುಮಾರು 10 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.
ನಾಲ್ಕು ಕೌಂಟರ್
ಮದುವೆಗಳು ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ 8 ಜನ ಪುರೋಹಿತರು, ನೋಂದಣಿಗೆ 4 ಕೌಂಟರ್‌ಗಳು ಮತ್ತು ಪ್ರತ್ಯೇಕ ಸಿಬಂದಿಯನ್ನು ನಿಯೋಜಿಸಲಾಗಿತ್ತು. ರವಿವಾರ ಮತ್ತು ಹೆಚ್ಚಿನ ವಿವಾಹಗಳಿದ್ದ ಕಾರಣ ಕಟೀಲು ಪೇಟೆ ಹಾಗೂ ರಥಬೀದಿ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗದಂತೆ ಉತ್ತಮ ವ್ಯವಸ್ಥೆ ಮಾಡಲಾಗಿತ್ತು. ವಾಹನ ನಿಲುಗಡೆಗೂ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿತ್ತು ಎಂದು ಆಡಳಿತ ಮೊಕ¤ೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು ತಿಳಿಸಿದ್ದಾರೆ.
ಶುಚಿತ್ವಕ್ಕೆ ಒತ್ತು
ದೇವಸ್ಥಾನದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ. ಛತ್ರದಲ್ಲಿಯೂ ಭಕ್ತರ ಅನ್ನಪ್ರಸಾದಕ್ಕೆ ನೀಡುವ ಊಟದ ತಟ್ಟೆಗಳನ್ನು ಬಿಸಿನೀರಿನಂದ ತೊಳೆದು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.