ಮಂಗಳೂರು ಮಹಾನಗರ ಪಾಲಿಕೆ ಕವಿತಾ ಮೇಯರ್‌, ರಜನೀಶ್‌ ಉಪಮೇಯರ್‌

Team Udayavani, Mar 10, 2017, 7:27 AM IST

10-REPORTER-6.jpg

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 30ನೇ ಮೇಯರ್‌ ಆಗಿ ಕಾಂಗ್ರೆಸ್‌ನ ಕವಿತಾ ಸನಿಲ್‌ ಹಾಗೂ ಉಪಮೇಯರ್‌ ಆಗಿ ರಜನೀಶ್‌ ಆಯ್ಕೆಯಾಗಿದ್ದಾರೆ.

ಪಾಲಿಕೆ ಪರಿಷತ್‌ 19ನೇ ಅವಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಕವಿತಾ ಸನಿಲ್‌ ಹಾಗೂ ಬಿಜೆಪಿಯಿಂದ ಪೂರ್ಣಿಮಾ ಸ್ಪರ್ಧಿಸಿದ್ದರು. ಕವಿತಾ ಅವರು ಪೂರ್ಣಿಮಾ ವಿರುದ್ಧ 18 ಮತಗಳ ಅಂತರದಿಂದ ಜಯ ಸಾಧಿಸಿ ಮೇಯರ್‌ ಆಗಿ ಚುನಾಯಿತರಾದರು.

60 ಸದಸ್ಯಬಲದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಓರ್ವ ಸಂಸದ, ಇಬ್ಬರು ಶಾಸಕರು ಹಾಗೂ ಇಬ್ಬರು ವಿ. ಪರಿಷತ್‌ ಸದಸ್ಯರು ಸೇರಿ ಒಟ್ಟು 65 ಮಂದಿಗೆ ಮತದಾನ ಮಾಡಲು ಅವಕಾಶವಿದೆ. ಇದರಲ್ಲಿ ಸಂಸದ ನಳಿನ್‌ ಹಾಗೂ ವಿ. ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಗೈರು ಹಾಜರಾಗಿದ್ದರು. ವಿ. ಪರಿಷತ್‌ ಮುಖ್ಯಸಚೇತಕ ಐವನ್‌ ಡಿ’ಸೋಜಾ, ಶಾಸಕರಾದ ಜೆ.ಆರ್‌. ಲೋಬೋ, ಮೊದಿನ್‌ ಬಾವ ಮತದಾನ ಮಾಡಿದರು. 

ಕವಿತಾ ಸನಿಲ್‌ ಪರವಾಗಿ ಒಟ್ಟು 38 ಮತಗಳು ಚಲಾವಣೆಯಾದರೆ, ಪೂರ್ಣಿಮಾ ಅವರ ಪರವಾಗಿ 20 ಮತಗಳು ಚಲಾವಣೆಯಾದವು. ಒಟ್ಟು 60 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್‌-35, ಬಿಜೆಪಿ-20, ಜೆಡಿಎಸ್‌-2, ಎಸ್‌ಡಿಪಿಐ-1, ಸಿಪಿಎಂ-1 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಜೆಡಿಎಸ್‌, ಎಸ್‌ಡಿಪಿಐ, ಸಿಪಿಎಂ ಹಾಗೂ ಪಕ್ಷೇತರ ಸದಸ್ಯರು ತಟಸ್ಥರಾಗಿ ಉಳಿದಿದ್ದರು. 

ನೂತನ ಮೇಯರ್‌ ಕವಿತಾ ಸನಿಲ್‌ ಕರಾಟೆ ಹಾಗೂ ಪವರ್‌ಲಿಫ್ಟಿಂಗ್‌ನಲ್ಲಿ ರಾಷ್ಟ್ರೀಯ- ಅಂತಾರಾಷ್ಟ್ರೀಯವಾಗಿ ಹಲವು ಪ್ರಶಸ್ತಿ ಪಡೆದಿದ್ದಾರೆ. 1992ರಿಂದ 2008ರ ವರೆಗೆ ಕರಾಟೆಯಲ್ಲಿ ರಾಷ್ಟ್ರೀಯ ಪದಕಗಳನ್ನು ಪಡೆದಿದ್ದಾರೆ. ಅವರು ಒಟ್ಟು 58 ಚಿನ್ನದ ಪದಕ, 18 ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ.

ಉಪಮೇಯರ್‌ ಅವಿರೋಧ ಆಯ್ಕೆ
ಉಪಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ನ ರಜನೀಶ್‌ ಅವರ ಏಕಮಾತ್ರ ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾದರು. ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆ ಬಳಿಕ, ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೆ ಸದಸ್ಯರ ಅವಿರೋಧ ಆಯ್ಕೆ ನಡೆಯಿತು. 

ನೂತನ ಮೇಯರ್‌, ಉಪ ಮೇಯರ್‌ ಅಧಿಕಾರಾವಧಿ 2018ರ ಮಾ. 8ರ ವರೆಗೆ ಇರಲಿದೆ.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.