ಕೆದಿಲ: ಕಾಂತುಕೋಡಿ ಮುಳುಗು ಸೇತುವೆಯಲ್ಲಿ ಸಿಲುಕಿಕೊಂಡ ಪಿಕಪ್ ವಾಹನ
Team Udayavani, Jul 23, 2023, 4:05 PM IST
ಬಂಟ್ವಾಳ: ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಪಿಕಪ್ ವಾಹನವೊಂದು ಸಿಲುಕಿ ಹಾಕಿಕೊಂಡಿರುವ ಘಟನೆ ರವಿವಾರ ನಡೆದಿದೆ.
ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿದೆ. ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕರೋರ್ವರು ತಮ್ಮ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ.
ಕ್ಷಣದಿಂದ ಕ್ಷಣಕ್ಕೆ ನೀರಿನಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಅದರೊಳಗಡೆ ಸಿಲುಕಿರುವವರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪಿಕಪ್ ವಾಹನವು ಪಡೀಲು ಭಾಗದಿಂದ ಕೆದಿಲ ಭಾಗಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಪ್ರತೀ ವರ್ಷ ಮಳೆ ಬಂದಾಗ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಸಾರ್ವಜನಿಕರುತೊಂದರೆ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯತ್ ನಿಂದ ಪ್ರತೀ ವರ್ಷ ಮಳೆಗಾಲದ ಸಂದರ್ಭದಲ್ಲಿ ಜೆಸಿಬಿ ತರಿಸಿ ಸೇತುವೆಯ ಕೆಳಭಾಗದಲ್ಲಿರುವ ಕಸಗಳನ್ನು ಕ್ಲೀನಿಂಗ್ ಮಾಡಲಾಗುತ್ತಿದೆ. ಆದರೂ ಸೇತುವೆ ಮಳೆಗಾಲದಲ್ಲಿ ನಿತ್ಯ ನಿರಂತರವಾಗಿ ಮುಳುಗಡೆಯಾಗುತ್ತಿದೆ. ಶಾಸಕರ ಸಹಿತ ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಇದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕಾಗಿ ಸಾರ್ವಜನಿಕರು ಒಕ್ಕೊರಳಿನಿಂದ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.