Kerala Bird Flu: ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ನಿಗಾ

Team Udayavani, Apr 22, 2024, 1:19 AM IST

Kerala Bird Flu: ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ನಿಗಾ

ಮಂಗಳೂರು: ಕೇರಳದ ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲೂ ವಿಶೇಷ ನಿಗಾ ಇರಿಸಲಾಗಿದೆ.

ಗಡಿ ಭಾಗವಾದ ತಲಪಾಡಿ, ಜಾಲ್ಸೂರು, ಸಾರಡ್ಕ ಗಡಿಯಲ್ಲಿ ವಿಶೇಷ ಚೆಕ್‌ಪೋಸ್ಟ್‌ ನಿರ್ಮಿಸಲು ತೀರ್ಮಾನಿಸಿದ್ದು, ಅದರಂತೆ ಸೋಮವಾರದಿಂದಲೇ ಇವು ಕಾರ್ಯಾಚರಣೆ ಆರಂಭಿಸಲಿವೆ. ಕೋಳಿಗಳನ್ನು ಹೊತ್ತ ಕೆಲವು ವಾಹನಗಳು ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತವೆ. ಮರಳಿ ಬರುವ ವೇಳೆ ಆ ವಾಹನಗಳಿಗೆ ಸ್ಯಾನಿಟೈಸರ್‌ ಸಿಂಪಡಣೆ ಮಾಡಲು ತೀರ್ಮಾನಿಸಲಾಗಿದೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ| ಅರುಣ್‌ ಕುಮಾರ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಕೇರಳದ ಆಲಪ್ಪುಳದಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಪ್ರದೇಶ ಮಂಗಳೂರಿನಿಂದ ಸುಮಾರು 400 ಕಿ.ಮೀ. ದೂರದಲ್ಲಿದೆ. ಆ ಭಾಗದಲ್ಲಿ ಸದ್ಯ ಎರಡನೇ ಬಾರಿ ಹಕ್ಕಿ ಜ್ವರ ಕಂಡುಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಆದರೂ ನಾವು ಸನ್ನದ್ಧರಾಗಿದ್ದೇವೆ. ಜಿಲ್ಲೆಯ ಮೂರು ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಾಣ ಮಾಡುತ್ತೇವೆ. ಸಾಮಾನ್ಯವಾಗಿ ಹಕ್ಕಿ ಜ್ವರವು ವಲಸೆ ಹಕ್ಕಿಗಳ ಮೂಲಕ ಒಂದು ಊರಿನಿಂದ ಮತ್ತೂಂದು ಊರಿಗೆ ಹರಡುತ್ತದೆ. ಈಗ ಬೇಸಗೆ ಕಾಲವಾದ್ದರಿಂದ ಹಕ್ಕಿಗಳು ಒಂದು ಕಡೆಯಿಂದ ಮತ್ತೂಂದು ಕಡೆಗೆ ವಲಸೆ ಹೋಗುವುದಿಲ್ಲ. ಈ ರೋಗಕ್ಕೆ ಕಾರಣವಾಗುವ ವೈರಸ್‌ ಕೋಳಿಯಿಂದ ಕೋಳಿಗೆ ಮತ್ತು ಕೋಳಿಯಿಂದ ಮನುಷ್ಯರಿಗೆ ಹರಡುವ ಸಾಧ್ಯತೆ ಇರುತ್ತದೆ. ಕೋಳಿ ಫಾರ್ಮ್ಗಳಲ್ಲಿ ಕೆಲಸ ಮಾಡುವವರು, ಮಾಂಸ ಸಂಸ್ಕರಣ ಘಟಕಗಳಲ್ಲಿ ಕೆಲಸ ಮಾಡುವವರು ಎಚ್ಚರಿಕೆ ವಹಿಸಬೇಕು. ಇದು ಮನುಷ್ಯರಲ್ಲಿ ಪರಸ್ಪರ ಹರಡುವುದಿಲ್ಲ’ ಎಂದಿದ್ದಾರೆ.

“ಗ್ಲ್ಯಾಂಡರ್ಸ್‌’ ಸೋಂಕು: ಜಿಲ್ಲೆಯಲ್ಲಿ ನಿಗಾ
“ರಾಜ್ಯದ ಕೆಲವು ಕಡೆ ಪ್ರಾಣಿಜನ್ಯ ಗ್ಲ್ಯಾಂಡರ್ಸ್‌ ಸಾಂಕ್ರಾಮಿಕ ರೋಗ ಕುದುರೆಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆ ಯಲ್ಲಿಯೂ ದ.ಕ. ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸದ್ಯ 18 ಕುದುರೆಗಳಿವೆ. ಬೇರೆ ಊರುಗಳಿಂದ ಕುದುರೆ ಖರೀದಿಸಬಾರದು ಅಥವಾ ತರಬಾರದು ಎಂಬ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಲಾಗಿದೆ’ ಎಂದು ಡಾ| ಅರುಣ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.