ಕೆಎಫ್ ಡಿಸಿ : ಧರಣಿ ಮುಂದುವರಿಕೆ

Team Udayavani, Nov 22, 2017, 2:48 PM IST

22-Nov-11.jpg

ಸುಳ್ಯ : ನಗರ ಸಮೀಪದ ಮೇದಿನಡ್ಕ ರಬ್ಬರ್‌ ಕಾರ್ಖಾನೆ ಎದುರು ನಡೆಯುತ್ತಿರುವ  ಕೆ ಎಫ್ ಡಿಸಿ  ನೌಕರರ ಅನಿರ್ದಿಷ್ಟಾವದಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಇಲಾಖೆ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರ ಭೇಟಿ ಮಾತುಕತೆ ಬಳಿಕವೂ ನ. 29ರ ವರೆಗೆ ಮುಂದುವರಿಯಲಿದೆ.

ಸೋಮವಾರ ಕೆ ಎಫ್ ಡಿಸಿ ಆಡಳಿತ ನಿರ್ದೇಶಕರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಧರಣಿ ನಿರತ ಕೆ ಎಫ್ ಡಿಸಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು. ಮಂಗಳವಾರ ನಿಗಮದ ಕಚೇರಿಯಲ್ಲಿ ಕಾರ್ಮಿಕ ಸಂಘಗಳೊಂದಿಗೆ ಕುಂದುಕೊರತೆ ಸಭೆ ನಡೆದಿದ್ದು, ಅದಕ್ಕೂ ಮೊದಲು ರಬ್ಬರ್‌ ಕಾರ್ಖಾನೆಯ ಕಚೇರಿಯಲ್ಲಿ ಮಾತುಕತೆ ನಡೆದಿತ್ತು. ಇಲಾಖೆಯ ಆಡಳಿತ ನಿರ್ದೇಶಕರಾಗಿರುವ ಐಎಫ್ಎಸ್‌ ಅಧಿಕಾರಿ ವಿದ್ಯಾಸಾಗರ್‌ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಐಎಫ್ಎಸ್‌ ಅಧಿಕಾರಿ ಕಮಲಾ ಮತ್ತು ಸ್ಥಳೀಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ನಡುವೆ ಜಿಲ್ಲಾ ಕಾಂಗ್ರೆಸ್‌ ಕಾರ್ಮಿಕ ಘಟಕದ ಅಧ್ಯಕ್ಷ ಪುರಂದರ ಹೆಗ್ಡೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಜಯಪ್ರಕಾಶ ರೈ, ಕೆಪಿಸಿಸಿ ಸದಸ್ಯ ಡಾ| ರಘು, ನ.ಪಂ. ಸದಸ್ಯ ಗೋಕುಲದಾಸ್‌ ಮತ್ತಿತರನ್ನೊಳಗೊಂಡ ನಿಯೋಗ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಳಿಕ ಅಧಿಕಾರಿಗಳು ತಿಳಿಸಿದ ನಿರ್ಧಾರದೊಂದಿಗೆ ಧರಣಿ ನಿರತರಲ್ಲಿಗೆ ಆಗಮಿಸಿ ಮಾತುಕತೆ ನಡೆಸಿದರು. ನ. 29ರಂದು ಸಚಿವರು ಮತ್ತು ಕೆಎಫ್ಡಿಸಿನ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲು ಒಪ್ಪಿಕೊಂಡಿದ್ದು, ಧರಣಿ ಕೈಬಿಡುವಂತೆ ಮನವೊಲಿಸಿದರು. ಆದರೆ ತೋಟ ತೊಳಿಲಾಲಿರ್‌ ಸಂಘದ ಅಧ್ಯಕ್ಷ ಚಂದ್ರಲಿಂಗಂ ಮತ್ತು ತೋಟ ಮಜ್ದೂರ್‌ ಸಂಘದ ಅಧ್ಯಕ್ಷ ಸುಂದರಲಿಂಗಂ ಅವರು, ಸಚಿವರು ಭೇಟಿ ನೀಡುವ ಭರವಸೆ ನೀಡಿದರೂ, ಭೇಟಿಯಾಗುವರೆಗೆ ಧರಣಿ ಮುಂದುವರಿಸುವುದಾಗಿ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು.

ನಿಗಮ ಕಚೇರಿಗೆ ಭೇಟಿ
ಧರಣಿ ನಿರತ ಕಾರ್ಮಿಕ ಸಂಘಟನೆಯವರನ್ನು ನಿಗಮ ಕಚೇರಿಯಲ್ಲಿ ಕರೆದ ಕುಂದುಕೊರತೆ ಸಭೆಗೆ ಪಾಲ್ಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದರು. ಅದರಂತೆ ತೆರಳಿದ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಸಭೆಯಲ್ಲಿ ತಮ್ಮ ಬೇಡಿಕೆಯನ್ನು ಮಂಡಿಸಿ 16 ಮಂದಿ ಕಾರ್ಮಿಕರನ್ನು ಮರುನಿಯೋಜಿಸುವಂತೆ ಒತ್ತಾಯಿಸಿದರು.

ಕೆ ಎಫ್ ಡಿಸಿ ರಬ್ಬರ್‌ ಕಾರ್ಖಾನೆಯ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 16 ಮಂದಿ ಖಾಯಂ ಕಾರ್ಮಿಕರನ್ನು ನೆಡುತೋಪುಗಳಿಗೆ ವರ್ಗಾವಣೆಗೊಳಿಸಿರುವುದರ ಹಿಂಪಡೆಯುವಂತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ. 16ರಿಂದ ಈ ಪ್ರತಿಭಟನೆ ನಡೆಯುತ್ತಿದೆ

ತುರ್ತು ಸಭೆ: ಪ್ರಯತ್ನ 
16 ಮಂದಿ ಕಾರ್ಮಿಕರ ವರ್ಗಾವಣೆಗೊಳಿಸಿದ್ದನ್ನು ಹಿಂಪಡೆದು ಮರುನಿಯೋಜಿಸಲು ಸಕಾರಣ ನೀಡಬೇಕಾಗಿರುವುದರಿಂದ ಹಾಗೂ ಒತ್ತಡಗಳ ಕಾರಣ ಅಧಿಕಾರಿಗಳು ನಿರ್ಧಾರ ಪ್ರಕಟಿಸಿಲ್ಲ. ಧರಣಿ ನಿರತರು ಮುಷ್ಕರ ಮುಂದುವರಿಸಿರುವುದರಿಂದ ನ. 29ರ ಮೊದಲು ದಿನ ನಿಗದಿಪಡಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಸಮ್ಮುಖ ಮತ್ತು ಕೆಎಫ್ಡಿಸಿ ಆಡಳಿತ ನಿರ್ದೇಶಕರು, ಕಾರ್ಯವಾಹ ನಿರ್ದೇಶಕರ ಉಪಸ್ಥಿತಿಯಲ್ಲಿ ಧರಣಿ ನಿರತ ಸಂಘಟನೆಗಳ ಮುಖಂಡರ ಸಭೆ ಕರೆಯಲು ಪ್ರಯತ್ನ ನಡೆಯುತ್ತಿವೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.