ಕಿಂಡಿ ಅಣೆಕಟ್ಟು ಕಾಮಗಾರಿ ಪುನರಾರಂಭ
ಹಲವು ಗ್ರಾಮಗಳಿಗೆ ಜಲನಿಧಿ
Team Udayavani, Dec 24, 2020, 11:59 AM IST
ಪುತ್ತೂರು, ಡಿ. 23: ಹತ್ತಾರು ಗ್ರಾಮಗಳಿಗೆ ನೀರೋದಗಿಸಲು ಪೂರಕ ವಾಗಿ ಶಾಂತಿಮೊಗರು ಬಳಿ ಕುಮಾರಧಾರಾ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಪುನರಾರಂಭ ಗೊಂಡಿದ್ದು, ಮುಂದಿನ ಮೇ ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.
ಮೂರು ದಶಕಗಳ ಜನರ ಬೇಡಿಕೆಗೆ ಶಾಸಕ ಎಸ್. ಅಂಗಾರ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಮುಖಾಂತರ ಅನುದಾನದ ಒದಗಿಸಿದ್ದು, ಪಶ್ಚಿಮ ವಾಹಿನಿ ಯೋಜನೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.
ಕಾಮಗಾರಿ ಪುನರಾರಂಭ :
ಎರಡು ವರ್ಷಗಳ ಹಿಂದೆ ಕಾಮಗಾರಿ ಆರಂಭಗೊಂಡು ತಳಪಾಯದ ಕೆಲಸ ನಡೆದಿದೆ. 2020ರೊಳಗೆ ಕಾಮಗಾರಿ ಮುಗಿಸಲು ಅವಧಿ ನಿಗದಿಯಾಗಿತ್ತು. ಆದರೆ ಬೇಸಗೆಯಲ್ಲಿಯು ನದಿ ನೀರಿನ ಹರಿವಿನ ಪ್ರಮಾಣ ಕಡಿಮೆ ಆಗದ ಕಾರಣ ಕಾಮಗಾರಿ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಸಾಗಿರಲಿಲ್ಲ. ಈಗ ಮತ್ತೆ ಕಾಮಗಾರಿ ಪ್ರಾರಂಭಗೊಂಡಿದ್ದು, ಒಂದು ಭಾಗದಲ್ಲಿ ಪಿಲ್ಲರ್ ಅಳವಡಿಕೆಗೆ ಪೂರಕವಾಗಿ ಯಂತ್ರ ಗಳಿಂದ ಅಗೆತ, ನೀರಿನ ಹರಿವು ತಡೆಗಟ್ಟಲು ಮಣ್ಣಿನ ಕಟ್ಟದ ಕಾಮಗಾರಿ ಪ್ರಗತಿಯಲ್ಲಿದೆ. 2021 ಮೇ ಒಳಗೆ ಅಣೆ ಕಟ್ಟು ಪೂರ್ಣಗೊಳ್ಳಲಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿ ದ್ದಾರೆ.
ಹತ್ತಾರು ಪ್ರದೇಶಗಳಿಗೆ ಅನುಕೂಲ :
ಕಿಂಡಿ ಅಣೆಕಟ್ಟೆ ನಿರ್ಮಾಣವಾದರೆ ನದಿ ಪಾತ್ರದ ಎರಡು ಭಾಗದ ಮೂರು ಕಿ.ಮೀ. ಸುತ್ತಳತೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಬಹು ಗ್ರಾಮದ ಯೋಜನೆ ಅನುಷ್ಠಾನಗೊಳಿಸಿ ಕಡಬ ತಾಲೂಕಿನ ಕುದ್ಮಾರು, ಸವಣೂರು, ಬೆಳಂದೂರು, ಕಾಣಿಯೂರು, ಪುಣc ಪ್ಪಾಡಿ, ಆಲಂಕಾರು, ಪೆರಾಬೆ, ಕುಂತೂರು ಗ್ರಾಮ ಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶ ಹೊಂದಲಾಗಿದೆ.
7.5 ಕೋ.ರೂ. ಯೋಜನೆ :
ಈ ಕಿಂಡಿ ಅಣೆಕಟ್ಟು ಯೋಜನೆಗೆ 7.5 ಕೋಟಿ ರೂ. ಅನುದಾನ ಮಂಜೂರುಗೊಂಡಿದೆ. ಕಾಮಗಾರಿ ಶಾಂತಿಮೊಗರು ಹೊಸ ಸೇತುವೆಯ ಸನಿಹದಲ್ಲಿ ನಿರ್ಮಾಣಗೊಳ್ಳುತ್ತಿದೆ. ನದಿ ತಳಮಟ್ಟದಿಂದ 4 ಮೀ. ಎತ್ತರಕ್ಕೆ ನಿರ್ಮಾಣವಾಗುವ ಈ ಅಣೆಕಟ್ಟು 221 ಮೀಟರ್ ಉದ್ದ ಹಾಗೂ ಮೂರು ಮೀಟರ್ ಅಗಲವಿರಲಿದೆ. 56 ಕಿಂಡಿಗಳನ್ನು ಒಳಗೊಂಡಿದೆ. ಇದರಲ್ಲಿ 18.56 ಎಂಸಿಎಫ್‌ಟಿ ನೀರು ಶೇಖರಣೆಯಾಗಲಿದೆ. ಡಿಸೆಂಬರ್ ಆರಂಭದಿಂದ ನದಿಯ ನೀರಿನ ಮಟ್ಟವನ್ನು ಗಮನಿಸಿ ಹಲಗೆಗಳನ್ನು ಜೋಡಣೆ ಮಾಡಲಾಗುತ್ತದೆ. ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ವೇಳೆ ಹಲಗೆಗಳನ್ನು ತೆಗೆದು ನೀರು ಹೊರಬಿಡಲಾಗುತ್ತದೆ. ಮಳೆಗಾಲದಲ್ಲಿ ನದಿಯ ನೀರನ್ನು ಯಾವುದೇ ಅಡೆತಡೆಗಳಿಲ್ಲದೆ ಹರಿಯ ಬಿಡುವುದು ಈ ಕಿಂಡಿ ಅಣೆಕಟ್ಟಿನ ಬಳಕೆ ವಿಧಾನ.
ನೀರಿನ ಹರಿವು ಕಡಿಮೆಯಾಗದ ಕಾರಣ ನಿರೀಕ್ಷಿತ ಅವಧಿಯಲ್ಲಿ ಕಾಮಗಾರಿ ಪೂರ್ಣಕ್ಕೆ ತೊಡಕು ಉಂಟಾಗಿತ್ತು. ಕಾಮಗಾರಿ ಆರಂಭಗೊಂಡಿದ್ದು, 2021 ರ ಮೇ ತಿಂಗಳೊಳಗೆ ಅಣೆಕಟ್ಟು ನಿರ್ಮಾಣ ಪೂರ್ಣಗೊಳ್ಳಲಿದೆ. -ಗೋಕುಲ್‌ದಾಸ್, ಕಾರ್ಯಪಾಲಕ ಅಭಿಯಂತ ಸಣ್ಣ ನೀರಾವರಿ ವಿಭಾಗ, ದ.ಕ.
– ಕಿರಣ್ ಪ್ರಸಾದ್ ಕುಂಡಡ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.