ಕಿನ್ನಿಗೋಳಿ:ನಿತ್ಯ ಟ್ರಾಕ್ ಜಾಮ್ ಕಿರಿಕಿರಿ
Team Udayavani, May 21, 2022, 9:33 AM IST
ಕಿನ್ನಿಗೋಳಿ: ಕಿನ್ನಿಗೋಳಿ ಬಸ್ ನಿಲ್ದಾಣದಲ್ಲಿ ಪತ್ರೀ ನಿತ್ಯ ಬೆಳಗ್ಗೆ, ಅಪರಾಹ್ನ, ಸಂಜೆಯ ಸಮಯದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ನಿರಂತರವಾಗಿ ಹೆಚ್ಚಾಗುತ್ತಿದ್ದು, ಆಡಳಿತ ಇನ್ನೂ ಇದಕ್ಕೆ ಪರಿಹಾರ ಕಂಡುಕೊಂಡಿಲ್ಲ.
ಬೆಳೆಯುತ್ತಿರುವ ಕಿನ್ನಿಗೋಳಿ ಪಟ್ಟಣಕ್ಕೆ ಪ್ರತಿನಿತ್ಯ ಸುಮಾರು 200 ಟ್ರಿಪ್ ಗಳ ಮೂಲಕವಾಗಿ 100 ಕ್ಕೂ ಮಿಕ್ಕಿ ಬಸ್ ಗಳು ಸಂಚರಿಸುತ್ತಿವೆ. ಕೆಲವು ಸಂದರ್ಭಗಳಲ್ಲಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಒಂದೆ ಹೊತ್ತಿನ ಸಮಯಕ್ಕೆ 20 ಕ್ಕೂ ಹೆಚ್ಚು ಬಸ್‌ಗಳು ಬಸ್ ನಿಲ್ದಾಣಕ್ಕೆ ಆಗಮಿಸಿ ನಿರ್ಗಮಿಸುತ್ತದೆ. ಇದರಿಂದ ಬಸ್ ನಿಲ್ಲಲು ಜಾಗವಿಲ್ಲದೆ ಟ್ರಾಫಿಕ್ ಜಾಮ್ ಸಮಸ್ಯೆಯಾಗುತ್ತಿದೆ.
ಬಸ್ ನಿಲ್ದಾಣದ ಆವರಣದಲ್ಲಿ ಅಂಚೆ ಕಚೇರಿ, ಬ್ಯಾಂಕ್, ಕ್ಲಿನಿಕ್, ಮೆಡಿಕಲ್ ಮುಂತಾದವುಗಳು ಇರುವುದರಿಂದ ಈ ಪ್ರದೇಶದಲ್ಲಿ ವಾಹನ ದಟ್ಟಣೆ, ಪಾರ್ಕಿಂಗ್ ನಿಂದ ಸಮಸ್ಯೆ ಉಂಟಾಗಿದೆ.
ಅವ್ಯವಸ್ಥಿತವಾಗಿ ವಾಹನ ಪಾರ್ಕಿಂಗ್ ಮಾಡುವುದು ಕೂಡ ಈ ಸಮಸ್ಯೆಗೆ ಕಾರಣವಾಗಿದೆ. ಗುತ್ತಕಾಡು, ಗೋಳಿಜೋರ ರಸ್ತೆ ಕಿನ್ನಿಗೋಳಿ ಬಸ್ ನಿಲ್ದಾಣ ಮೂಲಕವಾಗಿ ಗುತ್ತಕಾಡು, ಕವತ್ತಾರು ಹೋಗುವ ರಸ್ತೆ, ಗೋಳಿಜೋರ, ಪುನರೂರು, ಶಿಮಂತೂರು, ಪಂಜಿನಡ್ಕ, ಎಳತ್ತೂರು ಹೋಗಲು ಇದೇ ರಸ್ತೆಯನ್ನು ಬಳಸುವುದರಿಂದ ಮತ್ತಷ್ಟು ವಾಹನಗಳು ಈ ರಸ್ತೆಯಲ್ಲಿ ಸಂಚಾರ ಮಾಡುವುದರಿಂದ ರಸ್ತೆ ಬ್ಯುಸಿಯಾಗಿರುತ್ತದೆ. ಕೆಲವು ರಿಕ್ಷಾಗಳು, ದ್ವಿಚಕ್ರ ವಾಹನಗಳ ಸವಾರರು ಸಂಚಾರ ನಿಯಮ ಪಾಲಿಸದೆ ಬಸ್ ನಿಲ್ದಾಣದ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದೆ ಇದರಿಂದ ಅಪಘಾತ ಸಂಭವಿಸುತ್ತಿದೆ.
ಖಾಲಿ ಜಾಗ ನೀಡಲಾಗಿದೆ
ಕಿನ್ನಿಗೋಳಿ ಪೇಟೆಗೆ ಬರುವ ಖಾಸಗಿ ವಾಹನಗಳ ನಿಲುಗಡೆಗೆ ರಾಜಾಂಗಣ ಎದುರುಗಡೆಯ ಖಾಲಿ ಜಾಗವನ್ನು ಸಮ ತಟ್ಟುಗೊಳಿಸಿ ನಿಲುಗಡೆ ಅವಕಾಶ ನೀಡಲಾಗಿದೆ. ಬಸ್ ನಿಲ್ದಾಣದ ಒಳಗಡೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಂದು ಪ್ರಯಾಣಿಕರನ್ನು ಕರೆದೊಯ್ದರೆ ಟ್ರಾಫಿಕ್ ಕಡಿಮೆಯಾಗುತ್ತದೆ. ಈ ಬಗ್ಗೆ ಬಸ್ ಮಾಲಕರು, ಚಾಲಕರು ಸಾರ್ವಜನಿಕ ಹಿತಾಸಕ್ತಿಯಿಂದ ಕೆಲಸ ಮಾಡಬೇಕಾಗಿದೆ. –ಸಾಯೀಶ್ ಚೌಟ, ಮುಖ್ಯಾಧಿಕಾರಿ ಕಿನ್ನಿಗೋಳಿ ಪ.ಪಂ
-ರಘುನಾಥ್ ಕಾಮತ್ ಕೆಂಚನಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.