ಪಯಸ್ವಿನಿ ತೀರದಲ್ಲೊಂದು ಕಿರು ಮಂತ್ರಾಲಯ


Team Udayavani, Apr 12, 2018, 12:53 PM IST

12-April-9.jpg

ಸುಳ್ಯ : ಬೃಂದಾವನ ಸೇವಾ ಚಾರಿಟೆಬಲ್‌ ಟ್ರಸ್ಟ್‌ ಮತ್ತು ಶ್ರೀ ಗುರು ರಾಘವೇಂದ್ರ ಮಠ ನಿರ್ಮಾಣ ಸಮಿತಿ ಆಶ್ರಯದಲ್ಲಿ ನಿರ್ಮಾಣಗೊಂಡ ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ಮಹೋತ್ಸವ ಎ. 19ರಿಂದ 22ರ ತನಕ ದೇರೆಬೈಲು ತಂತ್ರಿ ಮುಕ್ಕೂರು ರಾಘವೇಂದ್ರ ಪ್ರಸಾದ ಶಾಸ್ತ್ರೀ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬೃಂದಾವನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎಂ.ಎನ್‌. ಶ್ರೀಕೃಷ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಪ್ರಥಮ ರಾಘವೇಂದ್ರ ಮಠ ಇದಾಗಿದ್ದು, ಪಯಸ್ವಿನಿ ನದಿ ತೀರದ ಶ್ರೀ ಚೆನ್ನಕೇಶವ ದೇವರ ಜಳಕದ ಕಟ್ಟೆಯ ಸಮೀಪ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಿಲಾಮಯ ಗರ್ಭಗುಡಿ, ವಿಶಾಲ ಅಂಗಣ, ಪ್ರತ್ಯೇಕ ಯಾಗ ಶಾಲೆ, ಕಚೇರಿ, ಸಭಾಭವನ, ಪಾಕ ಶಾಲೆ ಇತ್ಯಾದಿಗಳನ್ನೊಳಗೊಂಡ ಯೋಜನೆಯ ಮೊದಲ ಹಂತ ಕಾರ್ಯಗತಗೊಂಡಿದೆ ಎಂದು ವಿವರಿಸಿದರು.

ಹಿಂದೂ ಧರ್ಮದ ಅನುಸಾರ ಎಲ್ಲ ವಿಧಿ-ವಿಧಾನಗಳನ್ನು ಪೂಜಾ ಕೈಂಕರ್ಯಗಳನ್ನು (ಅಪರಕ್ರಿಯೆಗಳನ್ನು ಒಳಗೊಂಡಂತೆ) ನಡೆಸಲು ಅಗತ್ಯ ವ್ಯವಸ್ಥೆಗಳು ಇಲ್ಲಿದೆ. ಬೆಳಗ್ಗೆ ನಿತ್ಯ ಪೂಜೆಯೊಂದಿಗೆ ಪ್ರತಿ ಗುರುವಾರ ಹಾಗೂ ವರ್ಷದ ವಿಶೇಷಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅರ್ಚಕರ ಮನೆ, ಅತಿಥಿಗೃಹ, ಸ್ನಾನ ಘಟ್ಟ, ಹಿರಿಯರ ಚಟುವಟಿಕೆ ಕೇಂದ್ರ ನಿರ್ಮಿಸುವ ಉದ್ದೇಶವಿದೆ ಎಂದ ಅವರು, ಪರಿಸರ ಸಂರಕ್ಷಣೆಗಾಗಿ ಪಯಸ್ವಿನಿ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದರು.

ಎ. 19ರಂದು ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮ, ಸಂಜೆ ಭಜನೆ, ಅರಂಬೂರು ಶ್ರೀ ಕಾಂಚಿ ಕಾಮಕೋಟಿ ವೇದ ವಿದ್ಯಾಲಯ ಭಾರದ್ವಾಜಾಶ್ರಮದ ವಿದ್ಯಾರ್ಥಿಗಳಿಂದ ವೇದಘೋಷ ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ಬೃಂದಾವನ ಸೇವಾ ಚಾರಿಟೆಬಲ್‌ ಟ್ರಸ್ಟ್‌ನ ಅಧ್ಯಕ್ಷ ಶ್ರೀಕೃಷ್ಣ ಎಂ.ಎನ್‌. ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮತ್ತು ಶ್ರೀ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಲೆಪ್ಪಾಡಿ ಗಣಪಯ್ಯ ಭಟ್‌, ಮೂಡಬಿದಿರೆ ಶ್ರೀ ಗುರು ರಾಘವೇಂದ್ರ ಮಠದ ಅಧ್ಯಕ್ಷ ಪಿ. ಗೋವಿಂದ ಭಟ್‌, ಕೊಡಗು ಶ್ರೀಕ್ಷೇ. ಧ. ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಸೀತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ. ಬಳಿಕ ಹರಿಕಥಾ ಕಾಲಕ್ಷೇಪ ನಡೆಯಲಿದೆ.

ಧಾರ್ಮಿಕ ಸಭೆ
ಎ. 20ರಂದು ಪೂರ್ವಾಹ್ನ ವೈದಿಕ ಕಾರ್ಯಕ್ರಮ, ಸಂಜೆ ಭಜನೆ, ಭಕ್ತಿ ಸಂಗೀತ, ವೇದಘೋಷ ನಡೆಯಲಿದೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ರಾಘವೇಂದ್ರ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳಿಕೃಷ್ಣ ಡಿ.ಆರ್‌. ವಹಿಸಲಿದ್ದಾರೆ. ಶ್ರೀ ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಆಶೀರ್ವಚನ ನೀಡಲಿದ್ದಾರೆ.

ಅತಿಥಿಗಳಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಂಗಳೂರು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪ ಕುಲಪತಿ
ಡಾ| ಎಂ.ಎಸ್‌. ಮೂಡಿತ್ತಾಯ, ಸುಳ್ಯ ಚೆನ್ನಕೇಶವ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ, ಸುಳ್ಯ ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ಸುಳ್ಯ ಕೆವಿಜಿ ಮೆಡಿಕಲ್‌ ಕಾಲೇಜಿನ ಡಾ| ವಿದ್ಯಾಶಾಂಭವ ಪಾರೆ ಭಾಗವಹಿಸಲಿದ್ದಾರೆ. ರಾತ್ರಿ ಯಕ್ಷಗಾನ ಪ್ರದರ್ಶನವಿದೆ.

ಎ. 21ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ
ಎ. 21ರಂದು ವೈದಿಕ ಕಾರ್ಯಕ್ರಮ, ಸಂಜೆ ಯಕ್ಷಗಾನ ತಾಳಮದ್ದಳೆ, ನೃತ್ಯ ಭಜನೆ, ವೇದಘೋಷ ನಡೆಯಲಿದೆ.
ರಾತ್ರಿ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶಕುಮಾರ್‌ ಮೇನಾಲ
ವಹಿಸಲಿದ್ದಾರೆ. ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಆಶೀರ್ವಚನ ನೀಡಲಿದ್ದಾರೆ.

ಅತಿಥಿಗಳಾಗಿ ಶಾಸಕ ಎಸ್‌. ಅಂಗಾರ, ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತ ಭೀಮೇಶ್ವರ ಜೋಶಿ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಎಂ.ಕೆ. ಜಗನ್ನಿವಾಸ ರಾವ್‌, ಪುತ್ತೂರು ಕಲ್ಲಾರೆ ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಸಮಿತಿ ಕಾರ್ಯದರ್ಶಿ ಯು. ಪೂವಪ್ಪ ಭಾಗವಹಿಸಲಿದ್ದಾರೆ. ರಾತ್ರಿ ಭರತನಾಟ್ಯ ‘ಕೃಷ್ಣಾಂತರಂಗ’ ನೃತ್ಯ ರೂಪಕ ಹಾಗೂ ಶಿಲಾಬಾಲಿಕಾ ನರ್ತನ ನಡೆಯಲಿದೆ.

ಎ. 22ರಂದು ಅಪರಾಹ್ನ ಸುಳ್ಯ ರಾಘವೇಂದ್ರ ಮಠ ನಿರ್ಮಾಣ ಸಮಿತಿ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀ ಕ್ಷೇತ್ರ ಮಂತ್ರಾಲಯದ ಶ್ರೀ ಸುಬುಧೇಂದ್ರ ಅವರು ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ಅರಣ್ಯ ಸಚಿವ ಬಿ. ರಮಾನಾಥ ರೈ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್‌, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಮಂಗಳೂರು ಶ್ರೀ ರಾಘವೇಂದ್ರ ಮಠದ ಪ್ರಧಾನ ಅರ್ಚಕ ಜಯರಾಮ ಉಡುಪ ಮತ್ತು ಲಕ್ಷ್ಮೀ ಪಾರೆ ಭಾಗವಹಿಸಲಿದ್ದಾರೆ. ಸಂಜೆ 4.30 ಭಜನೆ, ಭಕ್ತಿ ಸಂಗೀತ, ರಾತ್ರಿ ದಶಾವತಾರ ಯಕ್ಷ- ಭರತ-ನಾಟಕ ನಡೆಯಲಿದೆ.

ಮಹೋತ್ಸವ ಸಂಚಾಲಕ ಪ್ರಕಾಶ್‌ಮೂಡಿತ್ತಾಯ ಮಠದ ಯೋಜನೆಗಳ ಬಗ್ಗೆ, ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶ್‌ ಕುಮಾರ್‌ ಮೇನಾಲ ಉತ್ಸವದ ಬಗ್ಗೆ, ಮಠ ನಿರ್ಮಾಣ ಸಮಿತಿ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳೀಕೃಷ್ಣ ಡಿ.ಆರ್‌., ಟ್ರಸ್ಟ್‌ ಕಾರ್ಯದರ್ಶಿ ಪ್ರವೀಣ್‌ ಎಸ್‌. ರಾವ್‌, ಖಜಾಂಚಿ ರಮೇಶ ಸೋಮಯಾಜಿ, ಮಹೋತ್ಸವ ಸಮಿತಿ ಖಜಾಂಚಿ ಕೆ. ಪ್ರಭಾಕರ ನಾಯರ್‌, ಕಾರ್ಯದರ್ಶಿ ಶಶಿಧರ ಎಂ.ಜೆ., ವೈ.ವಿ. ಫಾಲಚಂದ್ರ, ಗೋಪಾಲ ರಾವ್‌, ಜಯರಾಮ ಶೆಟ್ಟಿ, ಕೇಶವ ಜಿ.ಪಿ., ಪ್ರಚಾರ ಸಮಿತಿ ಅಧ್ಯಕ್ಷೆ ಚಿತ್ರಾ ಮಟ್ಟಿ, ಸಂಚಾಲಕ ರಾಮಚಂದ್ರ ಯದುಗಿರಿ ಉಪಸ್ಥಿತರಿದ್ದರು.

ಎ. 22: ಮೂಲ ರಾಮ ದೇವರು, ಬೃಂದಾವನ ಪ್ರತಿಷ್ಠೆ
ಎ. 22ರಂದು ವೈದಿಕ ಕಾರ್ಯಕ್ರಮ ನಡೆದು, ಮಂತ್ರಾಲಯದ ಶ್ರೀ ಸುಬುಧೇಂದ್ರ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಶ್ರೀ ಮೂಲ ರಾಮ ದೇವರ ಪ್ರತಿಷ್ಠೆ, ಶ್ರೀ ಗುರು ರಾಘವೇಂದ್ರ ಯತಿಗಳ ಬೃಂದಾವನ ಪ್ರತಿಷ್ಠೆ, ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ಅಲಂಕಾರ ಮಹಾಪೂಜೆ, ನಿತ್ಯಾನುಷ್ಠಾನ ಪ್ರಾರ್ಥನೆ, ವೈದಿಕ ಮಂತ್ರಾಕ್ಷತೆ, ಆಶೀರ್ವಚನ ಪ್ರಸಾದ ವಿತರಣೆ, ಅನ್ನಸಂರ್ಪಣೆ ನಡೆಯಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.