Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Team Udayavani, Nov 2, 2024, 3:44 PM IST
ಸುರತ್ಕಲ್: ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನ.10 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ರಂಗ ಸವ್ಯಸಾಚಿ ಕಿಶೋರ್ ಡಿ ಶೆಟ್ಟಿ ಅವರನ್ನು 2024 ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಚಲನ ಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ, ಶ್ರೀ ಡೆವಲಪರ್ಸ್ ಕಟೀಲು ಸಂಸ್ಥೆಯ ಮಾಲಕ ಗಿರೀಶ್ ಎಂ ಶೆಟ್ಟಿ ಕಟೀಲು, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಥಾಣೆ ಬಂಟ್ಸ್ ಎಸೋಸಿಯೇಶನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಜಗಧೀಶ್ ಶೆಟ್ಟಿ ಪೆರ್ಮುದೆ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎಂ ಲೋಕಯ್ಯ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಪೇರ್ ಅಸೋಸಿಯೇಶನ್ (ರಿ ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಲಕುಮಿ ತಂಡದ ವ್ಯವಸ್ಥಾಪಕ, ರಂಗಸವ್ಯಸಾಚಿ ನಿರ್ದೇಶಕ, ಸಂಘಟಕ ಕಿಶೋರ್ ಡಿ ಶೆಟ್ಟಿ ಅವರನ್ನು ರಂಗಚಾವಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಬಳಿಕ ಕಲಾವಿದರಿಂದ ಗಾನ ಲಹರಿ ಮತ್ತು ಶ್ರೀ ಲಲಿತೆ ನಾಟಕ ತಂಡದಿಂದ “ಶನಿ ಮಹಾತ್ಮೆ” ನಾಟಕ ಪ್ರದರ್ಶನಗೊಳ್ಳಲಿದೆ ಎಂದು ರಂಗಚಾವಡಿಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.