ಚುಂಬನ ಪ್ರಕರಣ: ಐವರು ವಿದ್ಯಾರ್ಥಿಗಳ ಬಂಧನ
Team Udayavani, Jul 23, 2022, 12:45 AM IST
ಮಂಗಳೂರು: ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ (ಪಿಜಿ) ನಲ್ಲಿ ನಡೆದ ವಿದ್ಯಾರ್ಥಿಗಳ ಚುಂಬನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾ ಲಯವು ಅವರನ್ನು ಹೆತ್ತವರಿಗೆ ಒಪ್ಪಿಸಿದೆ. ಅಗತ್ಯ ಬಿದ್ದಾಗ ತನಿಖಾಧಿಕಾರಿ ಯವರ ಮುಂದೆ ಹಾಜರಾಗುವಂತೆ ಆದೇಶ ನೀಡಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಬಂಧಿತರಲ್ಲಿ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನು ಕೂಡ ಸೇರಿದ್ದಾರೆ. ಒಟ್ಟು ಸುಮಾರು 8 ಮಂದಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದು, ಈ ಪೈಕಿ ಓರ್ವ ಈಗಾಗಲೇ ವಿದೇಶಕ್ಕೆ ತೆರಳಿದ್ದಾನೆ. ಮೂವರು ವಿದ್ಯಾರ್ಥಿನಿಯರು ದೌರ್ಜನ್ಯಕ್ಕೊಳಗಾಗಿದ್ದು, ಅವರು ಕೂಡ ಅಪ್ರಾಪ್ತ ವಯಸ್ಕರು ಎಂದು ತಿಳಿದುಬಂದಿದೆ.
ಸಿಸಿಬಿ ತನಿಖೆ
ಕೃತ್ಯಕ್ಕೆ ಸಂಬಂಧಿಸಿ ಪೋಕೊÕ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದೀಗ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಸಿಸಿಬಿಗೆ (ನಗರ ಅಪರಾಧ ಪತ್ತೆದಳ) ವಹಿಸಲಾಗಿದೆ.
“ಬೇರೆ ವೀಡಿಯೋಗಳಿಲ್ಲ’
ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸುಮಾರು 20 ಸೆಕೆಂಡ್‌ಗಳ ವೀಡಿಯೋ ಹೊರತುಪಡಿಸಿ ಬೇರೆ ಯಾವುದೇ ವೀಡಿಯೋಗಳಿಲ್ಲ. ಇತರ ಕೆಲವು ಅಶ್ಲೀಲ ವೀಡಿಯೋಗಳನ್ನು ಕೆಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಆ ವೀಡಿಯೋ ಮತ್ತು ಚುಂಬನ ಪ್ರಕರಣಕ್ಕೂ ಸಂಬಂಧವಿಲ್ಲ. ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವೀಡಿಯೋ ಹರಿಯಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಒತ್ತಾಯ
ವಿದ್ಯಾರ್ಥಿಗಳ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಘಟನೆಯ ಹಿಂದೆ ಡ್ರಗ್ಸ್, ಸೆಕ್ಸ್ ಜಾಲ ಇರುವ ಸಂಶಯವಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ದೇಶ-ವಿದೇಶದ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಆದರೆ ಇದೀಗ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ನಡೆಸಿರುವ ಕೃತ್ಯದಿಂದ ಮಂಗಳೂರಿನ ಹೆಸರಿಗೆ ಕಳಂಕ ಬರುತ್ತಿದೆ. ಹಾಗಾಗಿ ಕಾಲೇಜು ಆಡಳಿತ ಮಂಡಳಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು. ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.