ಕೊಡಿಯಾಲ್‌ ಬೈಲಿನ ಶಾರದಾ ವಿದ್ಯಾಲಯಕ್ಕೆ ರಜತ ಸಂಭ್ರಮ

Team Udayavani, Jan 19, 2018, 12:12 PM IST

19-Jan-9.jpg

ಮಹಾನಗರ: ಕೊಡಿಯಾಲ್‌ ಬೈಲ್‌ನಲ್ಲಿ 1992ರಲ್ಲಿ ಸ್ಥಾಪನೆಗೊಂಡ ತುಳುನಾಡು ಎಜುಕೇಶನಲ್‌ ಟ್ರಸ್ಟ್‌ನ ಆಶ್ರಯದಲ್ಲಿ ಆರಂಭವಾದ ವಿದ್ಯಾಸಂಸ್ಥೆ ಶಾರದಾ ವಿದ್ಯಾಲಯವು ಇಪ್ಪತ್ತೈದು ಸಂವತ್ಸರವನ್ನು ಪೂರೈಸಿ ರಜತಪರ್ವದ ಸಂಭ್ರಮದಲ್ಲಿದೆ.

‘ನಹಿ ಜ್ಞಾನೇನ ಸದೃಶಂ’ ಎಂಬು ದು ಇದರ ಧ್ಯೇಯ ವಾಕ್ಯ. ಜ್ಞಾನ ದಾಸೋಹದೊಂದಿಗೆ ಇಂದು ನಾಡಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾಗಿ ಬೆಳೆದಿದೆ. ಭಾರತೀಯ ಸಂಸ್ಕೃತಿ, ಜೀವನ ಮೌಲ್ಯಗಳ ಆಧಾರಿತ ಪರಿಕಲ್ಪನೆಗಳಿಂದ ಒಡಗೂಡಿ ಯೋಗ, ಸಂಗೀತ, ಕ್ರೀಡೆ, ಸಂಸ್ಕೃತ, ನೈತಿಕ ಶಿಕ್ಷಣ ಎಂಬ ಪಂಚಮುಖೀ ಶಿಕ್ಷಣ ಕ್ರಮಗಳನ್ನು ಅನುಸರಿಸಿ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಶ್ರಮಿಸುತ್ತಿದೆ.

ಶೇ. 100 ಫ‌ಲಿತಾಂಶ
ಆರಂಭದಲ್ಲಿ ಬೆರಳೆಣಿಕೆಯ ವಿದ್ಯಾರ್ಥಿಗಳೊಂದಿಗೆ ಆರಂಭವಾದ ಈ ವಿದ್ಯಾಲಯದಲ್ಲಿ ಇಂದು 2,250ಕ್ಕೂ
ಹೆಚ್ಚು ಮಂದಿ ಕಲಿಯುತ್ತಿದ್ದಾರೆ. ಹದಿನೆಂಟು ವರ್ಷಗಳಿಂದ ಸಿಬಿಎಸ್‌ಸಿ ಪಠ್ಯಕ್ರಮದಲ್ಲಿ ಎಸೆಸೆಲ್ಸಿಯಲ್ಲಿ ಶೇ.100
ರಷ್ಟು ಫ‌ಲಿತಾಂಶವನ್ನು ದಾಖಲಿಸುತ್ತಿರುವ ಹೆಗ್ಗಳಿಕೆ ಇದರದ್ದು.

ಭಾರತೀಯ ಕಲ್ಪನೆಯಲ್ಲಿ ಶಿಕ್ಷಣ
ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸೇವಾ ಚಟುವಟಿಕೆಗಳಲ್ಲಿ ನಿರತರಾದ ವಿದ್ಯಾ ಭಾರತಿಯ ಧ್ಯೇಯೋದ್ದೇಶಗಳನ್ನು
ಅಳವಡಿಸಿಕೊಂಡಿರುವ ಶಾರದಾ ವಿದ್ಯಾಸಂಸ್ಥೆಯು, ದೇಶಭಕ್ತಿ ಹಾಗೂ ಸಂಸ್ಕಾರದೊಂದಿಗೆ ಆಧುನಿಕ ಶಿಕ್ಷಣವನ್ನು
ನೀಡುತ್ತಿದೆ. ಇಲ್ಲಿಯ ವಿದ್ಯಾರ್ಥಿಗಳು ಶೈಕ್ಷಣಿಕವಲ್ಲದೇ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಿಕ ಕ್ಷೇತ್ರದಲ್ಲೂ ಸಾಧನೆ ಮಾಡಿ
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳನ್ನು ಗಳಿಸಿದ್ದಾರೆ. 2017ರ ಜು. 30ರಿಂದ ಆಗಸ್ಟ್‌ 8ರ ವರೆಗೆ ಇಂಗ್ಲೆಂಡ್‌ನ‌ ಚರ್ನ್ವುಡ್‌ ಎಂಬಲ್ಲಿ ನಡೆದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ದೇಶದಿಂದ ಭಾಗ
ವಹಿಸಿದ್ದ 82 ವಿದ್ಯಾರ್ಥಿಗಳ ಪೈಕಿ 24 ಮಂದಿ ಈ ವಿದ್ಯಾಸಂಸ್ಥೆಯವರು ಎಂಬುದು ಉಲ್ಲೇಖನೀಯ. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್‌ ನಡೆಸುವ ರಾಜ್ಯ, ರಾಷ್ಟ್ರಮಟ್ಟದ ವಿವಿಧ ಆಟೋಟ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಲಾಗಿದೆ. ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸುವ ರಾಮಾಯಣ, ಮಹಾಭಾರತ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ‘ಅನ್ನಮಯ, ಪ್ರಾಣ ಮಯ, ಮನೋಮಯ, ವಿಜ್ಞಾನಮಯ, ಆನಂದಮಯ ಎಂಬ ಪಂಚಕೋಶ ಶಿಕ್ಷಣ ಪರಿಕಲ್ಪನೆ ಇಲ್ಲಿಯದು.

ಸಮೂಹ ವಿದ್ಯಾಸಂಸ್ಥೆಗಳು
ಇಪ್ಪತ್ತೈದು ವರ್ಷಗಳಲ್ಲಿ ಶಾರದಾ ಸಮೂಹ ವಿದ್ಯಾ ಸಂಸ್ಥೆಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಪ್ರಸ್ತುತ ವಿದ್ಯಾಲಯದಲ್ಲಿ ಸಿಬಿಎಸ್‌ಸಿ ಶಿಕ್ಷಣ ಕ್ರಮದಡಿ ಪೂರ್ವ ಪ್ರಾಥಮಿಕದಿಂದ ಎಸೆಸೆಲ್ಸಿ, ಶಾರದಾ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಶಿಕ್ಷಣ, ಶಾರದಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ., ಬಿಬಿಎಂ, ಬಿಬಿಎ ಮತ್ತು ಬಿಎಸ್ಸಿ(ಆ್ಯನಿಮೇಶನ್‌ ಆ್ಯಂಡ್‌ ವಿಶ್ಯುವಲ್‌) ಪದವಿ ಶಿಕ್ಷಣಕ್ಕೆ ಅವಕಾಶವಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಶಿಕ್ಷಣ ನೀಡಲು ಮೂಡುಶೆಡ್ಡೆ ಬಳಿ ಶಿವನಗರದಲ್ಲಿ ಶುಭೋದಯ ವಿದ್ಯಾಲಯದಲ್ಲಿ ಸಿಬಿಎಸ್‌ಸಿ ಪಠ್ಯಕ್ರಮ
ಬೋಧಿಸಲಾಗುತ್ತಿದೆ.

ತಲಪಾಡಿಯ ದೇವಿನಗರದಲ್ಲಿ ಗ್ರಾಮೀಣ ಮತ್ತು ಉದ್ಯೋಗಿ ಪೋಷಕರಿಗೆ ಪೂರಕವಾಗಿ ಪಬ್ಲಿಕ್‌ ವಸತಿ ಶಾಲೆ ಮತ್ತು ಡೇ ಬೋರ್ಡಿಂಗ್‌ ಶಾಲೆಯಲ್ಲಿ ಎಸೆಸೆಲ್ಸಿವರೆಗೆ ಮತ್ತು ಪ.ಪೂ. ಶಿಕ್ಷಣ ಕಲ್ಪಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೂ ಕಾಲಿಟ್ಟಿರುವ ಸಂಸ್ಥೆಯು, ತಲಪಾಡಿಯಲ್ಲಿ ಶಾರದಾ ಆಯುರ್ವೇದಿಕ್‌ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಸೇವೆ ಒದಗಿಸುತ್ತಿದೆ.

ರಜತ ಮಹೋತ್ಸವ ಆಚರಣೆ ನಾಳೆ
ಶಾರದಾ ವಿದ್ಯಾಲಯದ ರಜತ ಮಹೋತ್ಸವ ಸಂಭ್ರಮ ಜ. 20ರಂದು ಕೊಡಿಯಾಲ್‌ ಬೈಲಿನ ಶಾಲಾ ಕ್ಯಾಂಪಸ್‌ನಲ್ಲಿ ನಡೆಯಲಿದ್ದು ಸಂಜೆ 5 ಗಂಟೆಗೆ ರಾಜ್ಯಪಾಲ ವಜೂಭಾಯಿ ರುಡಾಬಾಯಿ ವಾಲಾ ಉದ್ಘಾಟಿಸಲಿದ್ದಾರೆ. ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ತಿಳಿಸಿದ್ದಾರೆ.

ತುಳುನಾಡು ಎಜುಕೇಶನಲ್‌ ಟ್ರಸ್ಟ್ 
ಶಾರದಾ ವಿದ್ಯಾ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ತುಳುನಾಡು ಎಜುಕೇಶನಲ್‌ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷರಾದ ದಿ| ಜಿ. ಹರಿದಾಸ ಆಚಾರ್ಯ. ಅವರ ಆಶಯದಂತೆ ಪ್ರಸಕ್ತ ಖ್ಯಾತ ಶಿಕ್ಷಣ ತಜ್ಞರಾದ ಪ್ರೊ| ಎಂ.ಬಿ. ಪುರಾಣಿಕ್‌ ಅವರ ಅಧ್ಯಕ್ಷತೆಯಲ್ಲಿ, ಉಪಾಧ್ಯಕ್ಷ ಕೆ.ಎಸ್‌. ಕಲ್ಲೂರಾಯ, ಕಾರ್ಯದರ್ಶಿ ಎಂ.ಎಸ್‌. ಶಾಸ್ತ್ರೀ, ಟ್ರಸ್ಟಿಗಳಾದ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಹಾಗೂ ಎಚ್‌. ಸೀತಾರಾಮ್‌ ಇವರ ಸಮರ್ಥ ಆಡಳಿತ ಮಂಡಳಿಯ ಮಾರ್ಗದರ್ಶನದೊಂದಿಗೆ ಅಪೂರ್ವ ಹಾಗೂ ಆದರ್ಶ ವಿದ್ಯಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.