ಕೋಡಿಂಬಾಳ: ನಿಯಂತ್ರಣಕ್ಕೆ ಬಾರದ ಜ್ವರ
ಡೆಂಗ್ಯೂ ಶಂಕೆ: ಕಡಬ ಆಸ್ಪತ್ರೆಯಲ್ಲಿ ನಿತ್ಯ 400 ಹೊರ ರೋಗಿಗಳು
Team Udayavani, Jul 1, 2019, 5:13 AM IST
ಕಡಬ: ಎರಡು ತಿಂಗಳಿನಿಂದ ತಾಲೂಕಿನ ಕೋಡಿಂಬಾಳ ಗ್ರಾಮದ ಕೆಲವು ಪ್ರದೇಶಗಳಲ್ಲಿ ಜನರು ವ್ಯಾಪಕವಾಗಿ ಶಂಕಿತ ಡೆಂಗ್ಯೂ ಜ್ವರದ ಬಾಧೆಯಿಂದ ಬಳಲುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಇಲ್ಲಿನ ಕುಕ್ಕೆರೆಬೆಟ್ಟು ನಿವಾಸಿ ಗೃಹಿಣಿ ವೀಣಾ ಅವರು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವುದು ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ನಿರ್ಮಿಸಿದೆ.
ಆರೋಗ್ಯ ಇಲಾಖೆಯ ಸಿಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಜ್ವರ ಪೀಡಿತ ಪ್ರದೇಶಗಳಲ್ಲಿ ಮನೆ ಮನೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ, ಚಿಕಿತ್ಸೆಗೆ ಮಾರ್ಗದರ್ಶನ ನೀಡುವ ಮೂಲಕ ಜ್ವರದ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೂ ಫಲ ನೀಡಿಲ್ಲ. ಕೋಡಿಂಬಾಳದ ಪಾಲಪ್ಪೆ, ಮುಳಿಯ, ಕೊಠಾರಿ, ಉದೇರಿ, ನೆಲ್ಲಿ ಪಡ್ಡು, ಕುಕ್ಕೆರೆಬೆಟ್ಟು ಪ್ರದೇಶಗಳ 50ಕ್ಕೂ ಹೆಚ್ಚು ಮನೆಗಳಲ್ಲಿ ಬಹುತೇಕ ಎಲ್ಲರೂ ಜ್ವರದ ಬಾಧೆಗೆ ಒಳಗಾಗಿದ್ದಾರೆ. ಕೆಲವು ರೋಗಿಗಳು ಮಂಗಳೂರು ಹಾಗೂ ಪುತ್ತೂರಿನ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಸಮುದಾಯ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ದಿನಕ್ಕೆ 400ಕ್ಕೂ ಹೆಚ್ಚು ರೋಗಿಗಳು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ.
ಕಳೆದ ವರ್ಷವೂ ಕಾಡಿತ್ತು ಜ್ವರ
ಕಳೆದ ವರ್ಷ ಇದೇ ಅವಧಿಯಲ್ಲಿ ಕೋಡಿಂಬಾಳದ ಮಜ್ಜಾರು, ಮಡ್ಯಡ್ಕ ಪ್ರದೇಶಗಳಲ್ಲಿ ಇದೇ ರೀತಿ ಜ್ವರ ಕಾಣಿಸಿತ್ತು. ಅದಕ್ಕೂ ಹಿಂದಿನ ವರ್ಷ ಕಡಬ ವ್ಯಾಪ್ತಿಯ ನೂಜಿಬಾಳ್ತಿಲ, ಮೀನಾಡಿ, ಕಲ್ಲುಗುಡ್ಡೆ, ಕೋಡಿಂಬಾಳ, ಹೊಸ್ಮಠ, ಮರ್ದಾಳ, ಐತ್ತೂರು ಪ್ರದೇಶಗಳಲ್ಲಿ ಹೆಚ್ಚಿನ ಜನರು ಶಂಕಿತ ಡೆಂಗ್ಯೂ ಜ್ವರದ ಬಾಧೆಗೊಳಗಾಗಿದ್ದರು. ಈ ವರ್ಷವೂ ಖಾಸಗಿ ಪ್ರಯೋಗಾಲಯಗಳ ವರದಿಯ ಪ್ರಕಾರ ಎರಡು ತಿಂಗಳ ಅವಧಿಯಲ್ಲಿ 150ಕ್ಕೂ ಹೆಚ್ಚು ಮಂದಿ ಶಂಕಿತ ಡೆಂಗ್ಯೂ ಜ್ವರ ಪೀಡಿತರು ಕಡಬ ಪರಿಸರದಲ್ಲಿ ಪತ್ತೆಯಾಗಿದ್ದಾರೆ.
ಆಸ್ಪತ್ರೆಗೆ ರೋಗಿಗಳ ದಂಡು
ಜ್ವರದ ತೀವ್ರತೆ ಪರಿಸರದ ಜನರನ್ನು ತೀವ್ರವಾಗಿ ಕಾಡುತ್ತಿದ್ದು, ಕಡಬ ಸಮು ದಾಯ ಆರೋಗ್ಯ ಕೇಂದ್ರಕ್ಕೆ ನಿತ್ಯ 400ಕ್ಕೂ ಮಿಕ್ಕಿ ಹೊರ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆ ಮಾತ್ರವಲ್ಲದೆ ಖಾಸಗಿ ಚಿಕಿತ್ಸಾಲಯಗಳಲ್ಲೂ ಜನ ಬೆಳಗ್ಗಿನಿಂದಲೇ ಚಿಕಿತ್ಸೆಗೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಮಡ್ಯಡ್ಕ ಸರಕಾರಿ ಶಾಲೆಯಲ್ಲಿ ತಾತ್ಕಾಲಿಕ ಜ್ವರ ಪರಿವೀಕ್ಷಣ ಕೇಂದ್ರ ನಾಲ್ಕು ದಿನಗಳಿಂದ ಮಧ್ಯಾಹ್ನದ ವರೆಗೆ ಕಾರ್ಯಾಚರಿಸುತ್ತಿದೆ. ಅಲ್ಲಿ ಓರ್ವ ವೈದ್ಯ ಮತ್ತು ಶುಶ್ರೂಷಕಿ ಸೇವೆಗೆ ಲಭ್ಯರಿರುತ್ತಾರೆ. ಕಡಬ ಸಮು ದಾಯ ಆಸ್ಪತ್ರೆಯ ವ್ಯಾಪ್ತಿಗೊಳಪಟ್ಟ 25 ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರು ತಲಾ ಇಬ್ಬರ ತಂಡ ವನ್ನು ರಚಿಸಿಕೊಂಡು ಮನೆ ಮನೆ ಭೇಟಿ ಮಾಡಿ, ಮನೆಯ ಸುತ್ತಮುತ್ತ ನೀರು ಶೇಖರಣೆ ಆಗದಂತೆ ಮತ್ತು ಸೊಳ್ಳೆಗಳಿಂದ ಆದಷ್ಟು ರಕ್ಷಣೆ ಪಡೆಯುವ ಬಗ್ಗೆ ಜಾಗೃತಿ, ಅನಾರೋಗ್ಯ ಕಂಡುಬಂದರೆ ಕೂಡಲೇ ಆರೋಗ್ಯ ಕೇಂದ್ರಕ್ಕೆ ಬರುವಂತೆ ಗ್ರಾಮಸ್ಥರಿಗೆ ಮನವರಿಕೆ ಮಾಡುತ್ತಿದ್ದಾರೆ.
ಮನೆ ಮನೆ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.