ಗಿರಿಜನ ಉಪಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನೆ : ಕೋಟ ಶ್ರೀನಿವಾಸ ಪೂಜಾರಿ

ನಿವೇಶನ ವಂಚಿತ ಪರಿಶಿಷ್ಟರ ಸರ್ವೇ

Team Udayavani, May 31, 2022, 6:20 AM IST

ಗಿರಿಜನ ಉಪಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನೆ : ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು : ಪರಿಶಿಷ್ಟ ಜಾತಿಯ 28 ಲಕ್ಷ ಕುಟುಂಬಗಳ ಪೈಕಿ ಬಹುತೇಕ ಮಂದಿ ನಿವೇಶನ ವಂಚಿತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಲವು ಮಂದಿ ಇದ್ದು, ಈ ನಿಟ್ಟಿನಲ್ಲಿ ಸರ್ವೇ ನಡೆಸಿ ವರದಿ ನೀಡಬೇಕು ಎಂದು ಸ. ಕಲ್ಯಾಣ ಮತ್ತು ಹಿಂ. ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಅವರು ಸೋಮವಾರ ದ.ಕ. ಜಿ.ಪಂ. ಸಭಾಂಗಣದಲ್ಲಿ ಇಲಾಖೆಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡುವುದರೊಂದಿಗೆ ಅರ್ಹರು ಸವಲತ್ತು ವಂಚಿತರಾಗದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಪ. ಜಾತಿ ಮತ್ತು ಸಮುದಾಯದಲ್ಲಿ ಒಳನಾಡು ಮತ್ತು ಸಾಂಪ್ರದಾಯಿಕ ಮೀನುಗಾರಿಕೆ ನಡೆಸುವವರು ಎಷ್ಟು ಮಂದಿ ಇದ್ದಾರೆ ಎಂಬ ಸರ್ವೇಯಾಗಬೇಕು. ಪ್ರತೀ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 100 ಮಂದಿ ಮೀನುಗಾರರಿಗೆ ಇಲಾಖೆಯಿಂದ ದ್ವಿಚಕ್ರ ವಾಹನ ಒದಗಿಸುವ ಸೌಲಭ್ಯವಿದ್ದು, ಅರ್ಹರ ಸರ್ವೇಯಾಗಬೇಕಿದೆ ಎಂದರು.

ಸ.ಕಲ್ಯಾಣ ಮತ್ತು ಹಿಂ. ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಡಿ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆ ಯಾಗಬೇಕು. ಅಧಿ ಕಾರಿಗಳು ನಿರ್ಲಕ್ಷ್ಯ ತೋರದೆ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನ ಕುಂಠಿತವಾಗಿದೆ, ಮುಂದೆ ಇದಕ್ಕೆ ಅವಕಾಶ ನೀಡಬಾರದು ಎಂದರು.

ಇದನ್ನೂ ಓದಿ : ಎಲ್ಲೋ ಅಲರ್ಟ್‌; ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಸಾಧ್ಯತೆ

ಸಿಎಂ ಈಗಾಗಲೇ ಘೋಷಿಸಿದಂತೆ ಬಿಪಿಎಲ್‌ ಕಾರ್ಡ್‌ ಹೊಂದಿರುವ 24.5 ಲಕ್ಷ ಮಂದಿಗೆ 75 ಯುನಿಟ್‌ ವಿದ್ಯುತ್‌ ಉಚಿತವಾಗಿ ದೊರೆಯಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲೆಯ ಅಧಿಕಾರಿಗಳು ವಿಶೇಷ ಒತ್ತು ನೀಡಬೇಕು. ಅಲ್ಲದೆ ಪ. ಜಾತಿ ಮತ್ತು ಪ. ಪಂಗಡದವರನ್ನು ಸಂಪೂರ್ಣವಾಗಿ ಯಶಸ್ವಿನಿ ಯೋಜನೆಯಡಿ ಯಾವ ರೀತಿಯಾಗಿ ತರಲು ಸಾಧ್ಯ ಎಂಬ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಅಂಗನವಾಡಿಯಿಂದ ಹೊರ ಗುಳಿಯದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಸ್ವಂತ ಕಟ್ಟಡಕ್ಕಾಗಿ ಜಾಗ ಗುರುತಿಸಬೇಕು. ಇಲಾಖೆ ಸೂಕ್ತ ನೆರವು ನೀಡಲು ಸಿದ್ಧವಿದೆ ಎಂದು ಸ.ಕ. ಇಲಾಖಾ ಆಯುಕ್ತ ಆಕಾಶ್‌ ಕುಮಾರ್‌ ತಿಳಿಸಿದರು.

ಹಿಂ.ವ. ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆಕಾಶ್‌ ಕುಮಾರ್‌, ಡಿಸಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್‌, ಅಪರ ಡಿಸಿ ಡಾ| ಕೃಷ್ಣಮೂರ್ತಿ, ಉಪಮೇಯರ್‌ ಸುಮಂಗಳಾ ರಾವ್‌ ಉಪಸ್ಥಿತರಿದ್ದರು.

ಕೇರಳಕ್ಕೆ ತಂಡ
ಕೇರಳದಲ್ಲಿ ಬಿಪಿಎಲ್‌ ಕಾರ್ಡ್‌ ದಾರರಿಗೆ ಕುಚ್ಚಲಕ್ಕಿ ವಿತರಿಸಲಾಗುತ್ತಿದೆ. ಅಲ್ಲಿ ಯಾವ ರೀತಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ತಿಳಿಯಲು ಆಹಾರ ಇಲಾಖಾ ಉಪನಿರ್ದೇಶಕರ ತಂಡದೊಂದಿಗೆ ಕೇರಳಕ್ಕೆ ಭೇಟಿ ನೀಡಲಾಗುವುದು. ಬಳಿಕ ರಾಜ್ಯದಲ್ಲಿಯೂ ಸಮರ್ಪಕ ಅನುಷ್ಠಾನವಾಗಲಿದೆ ಎಂದು ಸಚಿವ ಕೋಟ ವಿವರಿಸಿದರು.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.