ಚಿತ್ರದುರ್ಗ ಕಲುಷಿತ ನೀರು ಪ್ರಕರಣ: ತನಿಖಾ ಸಮಿತಿ ರಚನೆಗೆ ಶ್ರೀನಿವಾಸ ಪೂಜಾರಿ ಆಗ್ರಹ
Team Udayavani, Aug 6, 2023, 11:22 PM IST
ಮಂಗಳೂರು: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ತತ್‌ಕ್ಷಣ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಬೇಕು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಘಟನೆಗೆ ಮೂಲ ಕಾರಣ ಅವರು ಸೇವಿಸಿರುವ ಆಹಾರ ಅಥವಾ ನೀರು ಯಾವುದು ಎನ್ನುವುದನ್ನು ಪ್ರಯೋಗಾಲಯ ಪರೀಕ್ಷೆಯ ಮೂಲಕ ಕಂಡು ಹಿಡಿಯಬೇಕು. ಯಾರ್ಯಾರು ತಪ್ಪಿತಸ್ಥರು ಇದ್ದಾರೋ ಅವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದರು.
ಘಟನೆಗೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಾದೃಷ್ಟಕ್ಕೆ ಇಲ್ಲಿಯವರೆಗೆ ಸ್ಥಳಕ್ಕೆ ಪೌರಾಡಳಿತ ಸಚಿವರೇ ಭೇಟಿ ನೀಡಿಲ್ಲ. ಹೇಳುವವರು ಕೇಳುವವರು ಯಾರೂ ಇಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪೌರಾ ಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರೂ ಭೇಟಿ ನೀಡಿಲ್ಲ. ಆರೋಗ್ಯ ಮಂತ್ರಿಗಳು ಮಾತ್ರ ಆಸ್ಪತ್ರೆಗೆ ಭೇಟಿ ನೀಡಿ ಪರಿಹಾರ ವಿತರಿಸಿದ್ದಾರೆ.
ಮುಖ್ಯಮಂತ್ರಿಯವರು ತತ್‌ಕ್ಷಣ ಸಂಬಂಧಪಟ್ಟ ಪೌರಾಡಳಿತ ಸಚಿವರನ್ನು ಚಿತ್ರದುರ್ಗಕ್ಕೆ ತೆರಳಲು ಸೂಚಿಸಬೇಕು ಎಂದು ಶ್ರೀನಿವಾಸ ಪೂಜಾರಿ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.