ಕೋಟಿಗದ್ದೆ  ಸೇತುವೆ ದುರ್ಬಲ, ಹೊಸ ಸೇತುವೆಗೆ ಪ್ರಸ್ತಾವನೆ

Team Udayavani, Jul 6, 2018, 11:28 AM IST

6-july-6.jpg

ಈಶ್ವರಮಂಗಲ: ಪಂಚೋಡಿ-ಗಾಳಿಮುಖ ಜಿ.ಪಂ. ರಸ್ತೆಯ ಕೋಟಿಗದ್ದೆ ಎಂಬಲ್ಲಿರುವ ಕುಸಿಯುವ ಭೀತಿಯಲ್ಲಿರುವ ಸೇತುವೆಯನ್ನು ದ.ಕ.ಜಿ. ಪಂ. ಸ್ಥಾಯೀ ಸಮಿತಿಯ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಜಿ.ಪಂ. ಎಂಜಿನಿಯರ್‌ ಗೋವರ್ಧನ ವೀಕ್ಷಣೆ ಮಾಡಿ, ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು. ಜು. 6ರಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಖಾರಿ ಡಾ| ರವಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಪರಿಸ್ಥಿತಿ ಕುರಿತು ನೀಡುವಂತೆ ಎಂಜಿನಿಯರ್‌ಗೆ ಜಿ.ಪಂ. ಸದಸ್ಯರು ಸೂಚಿಸಿದರು.

ಜಿ.ಪಂ. ಎಂಜಿನಿಯರ್‌ ಗೋವರ್ಧನ ಮಾತನಾಡಿ, ಸೇತುವೆಯ ಕಂಬಿಗಳಿಗೆ ತುಕ್ಕು ಹಿಡಿದಿರುವುದರಿಂದ ಸಾಮರ್ಥ್ಯ ಕಡಿಮೆ ಇದೆ. ಯಾವುದೇ ಸಂದರ್ಭದಲ್ಲಿ ಕುಸಿಯುವ ಸಾಧ್ಯತೆ ಇದೆ. ಸೇತುವೆ ಅಪಾಯದಲ್ಲಿರುವ ಬಗ್ಗೆ ಎಂಜಿನಿಯರ್‌ ವಿಭಾಗದ ಮುಖ್ಯ ಕಾರ್ಯನಿರ್ವಾಹಕರಿಗೆ ವರದಿ ಸಲ್ಲಿಸುತ್ತೇನೆ. ಅಲ್ಲಿಂದ ಜಿಲ್ಲಾಧಿಕಾರಿಗಳಿಗೆ ಹೋಗಿ,
ಸರಕಾರಕ್ಕೆ ಸಲ್ಲಿಸಲಾಗುತ್ತದೆ. ಸರಕಾರ ಅನುದಾನ ಸಿಕ್ಕಿದರೆ ನೂತನ ಸೇತುವೆ ನಿರ್ಮಾಣ ಮಾಡಲಾಗುವುದು. ಸೇತುವೆ ಸಾಮರ್ಥ್ಯವನ್ನು ಗುರುತಿಸುವಂತೆ ಮೇಲಧಿಕಾರಿಗಳಿಗೆ ಮನವಿ ಮಾಡಲಾಗುವುದು. ಘನವಾಹನಗಳ ಸಂಚಾರ ನಿರ್ಬಂಧಿಸುವ ಹಕ್ಕು ಜಿ.ಪಂ.ಗೆ ಇಲ್ಲ ಎಂದು ಹೇಳಿದರು. ಕೇರಳದ ಲೋಕೋಪಯೋಗಿ ಇಲಾಖೆ ಪಳ್ಳತ್ತೂರು ಸೇತುವೆ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರ ನಿರ್ಬಂಧಿಸಿರುವುದರಿಂದ ಅನಿವಾರ್ಯವಾಗಿ ನೆರೆಯ ರಾಜ್ಯವನ್ನು ಸಂಪರ್ಕಿಸುವ ಪಂಚೋಡಿ- ಗಾಳಿ ಮುಖ ರಸ್ತೆ ಯಲ್ಲಿ ವಾಹನ ಸಂಚಾರ ಅಧಿಕವಾಗಿದೆ.

ಸುದಿನ ವರದಿ ಫಲಶ್ರುತಿ
‘ಕುಸಿಯುವ ಭೀತಿಯಲ್ಲಿ ಕರ್ನೂರು- ಕೋಟಿಗದ್ದೆ ಸೇತುವೆ’ ಎಂಬ ಶೀರ್ಷಿಕೆಯಲ್ಲಿ ಬುಧವಾರ ಉದಯವಾಣಿಯ ‘ಸುದಿನ’ ದಲ್ಲಿ ಸಚಿತ್ರವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ವೀಕ್ಷಿಸಿದ್ದು, ಮೇಲಧಿಕಾರಿಗಳಿಗೆ ವರದಿ ಕಳುಹಿಸಲಿದ್ದಾರೆ. ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಉಪಾಧ್ಯಕ್ಷ ಶ್ರೀರಾಮ್‌ ಪಕ್ಕಳ, ಅರಿಯಡ್ಕ ಗ್ರಾಮ ಪಂಚಾಯತ್‌ ಸದಸ್ಯೆ ಸಲ್ಮಾ, ಗುತ್ತಿಗೆದಾರ ಮಹಮ್ಮದ್‌ ಉಪಸ್ಥಿತರಿದ್ದರು.

ಬ್ಯಾನರ್‌ ಆಳವಡಿಕೆ
ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪಂಚೋಡಿ-ಗಾಳಿಮುಖ ಜಿ.ಪಂ.
ರಸ್ತೆಯ ಪಂಚೋಡಿ ಜಂಕ್ಷನ್‌, ಕರ್ನೂರು, ಗಾಳಿಮುಖ ಜಂಕ್ಷನ್‌ ಈ ರಸ್ತೆಯಲ್ಲಿ ಘನ ವಾಹನಗಳು, ಟಿಪ್ಪರ್‌, ಬೋರ್‌ವೆಲ್‌ ಲಾರಿಗಳ ಸಂಚಾರಗಳನ್ನು 2018 ಸೆಪ್ಟಂಬರ್‌ ವರೆಗೆ ನಿಷೇಧಿಸಲಾಗಿದೆ. ತಪ್ಪಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಆದರೆ ಇದಕ್ಕೆ ಬೆಲೆ ಕೊಡದೇ ದಿನನಿತ್ಯ ಹಲವಾರು ಘನ ವಾಹನಗಳು ಸಂಚರಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.