ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನಿರ್ಧಾರವಾಗಿಲ್ಲ : ಸಿದ್ದರಾಮಯ್ಯ
Team Udayavani, May 10, 2017, 11:43 AM IST
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರವಾಗಿಲ್ಲ. ಈ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಬಳಿ ಪಕ್ಷದ ಕೆಲವು ಮುಖಂಡರು ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಅವರ ವಿರುದ್ಧ ದೂರು ನೀಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಇವೆಲ್ಲ ಮಾಧ್ಯಮಗಳ ಸೃಷ್ಟಿ. ಪಕ್ಷದ ನಾಯಕತ್ವ ಅಥವಾ ಅಧ್ಯಕ್ಷರ ವಿರುದ್ಧ ಯಾರೂ ದೂರು ನೀಡಿಲ್ಲ ಎಂದು ಪ್ರತಿಕ್ರಿಯಿಸಿದರು.
ವಿಧಾನ ಪರಿಷತ್‌ಗೆ ಮೂವರು ಸದಸ್ಯರ ಆಯ್ಕೆ ಸಂಬಂಧ ಮೂವರ ಹೆಸರು ಈಗಾಗಲೇ ಹೈಕಮಾಂಡಿಗೆ ಕಳುಹಿಸಿ ಕೊಡಲಾಗಿದೆ. ಅಲ್ಲಿ ಈ ಬಗ್ಗೆ
ಅಂತಿಮ ನಿರ್ಧಾರವಾದ ಬಳಿಕ ಸದಸ್ಯರ ನೇಮಕಾತಿ ನಡೆಸ ಲಾಗುವುದು ಎಂದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ರಾಜ್ಯ ಪಾಲರನ್ನು ಭೇಟಿ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಇರುವ ಪರಿಸ್ಥಿತಿ ಬಗ್ಗೆ ಅವರಿಗೆ ಸಮಗ್ರ ವಿವರ ನೀಡ
ಲಾಗಿದೆ ಎಂದು ಅವರು ಹೇಳಿದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿಬಿ. ರಮಾನಾಥ ರೈ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ಯರಾಜ್, ಮಾಜಿ ಸಚಿವ, ಶಾಸಕ ಕೆ. ಅಭಯಚಂದ್ರ, ಶಾಸಕ ಮೊದಿನ್ ಬಾವಾ, ಮಂಗಳೂರು ಮೇಯರ್ ಕವಿತಾ ಸನಿಲ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ ಉಪಸ್ಥಿತರಿದ್ದರು.
ಆರೋಪ ಆಧಾರರಹಿತ
ಪುತ್ರ ಡಾ| ಯತೀಂದ್ರ ಅವರ ಮೇಲೆ ಮಾಡಿರುವ ಬೇನಾಮಿ ವ್ಯವಹಾರ ಆರೋಪ ಆಧಾರ ರಹಿತವಾದುದು. ರಾಜಕೀಯ ಉದ್ದೇಶದಿಂದ ಈ ಆರೋಪ ಮಾಡಲಾಗಿದೆ. ಆತರಾಜಕೀಯದಲ್ಲಿ ಸಕ್ರಿಯನಾಗುತ್ತಾ ನೆಂಬ ಉದ್ದೇಶಕ್ಕಾಗಿ ಇದನ್ನೆಲ್ಲಾ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.