KSRTC ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ
Team Udayavani, Jul 1, 2020, 6:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಕೋವಿಡ್ 19 ಸೋಂಕಿನ ಕಾರಣ ರಾಜ್ಯದಲ್ಲಿ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ವಿಧಿಸಿದ್ದರೂ ದೂರದ ಊರುಗಳಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.
ರಾತ್ರಿ 9.30ರವರೆಗೆ ಮಂಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಿಸಲಿವೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ‘ಉದಯವಾಣಿ’ಗೆ ತಿಳಿಸಿದ್ದಾರೆ. ಸ್ಥಳೀಯ ಬಸ್‌ಗಳು ಸಂಜೆ 6.30ರವರೆಗೆ ಸಂಚರಿಸಲಿವೆ.
ಖಾಸಗಿ ಬಸ್ ಮಾಲಕರ ಮನವಿ
ದೂರ ಸಂಚಾರದ ಖಾಸಗಿ ಬಸ್‌ಗಳು ಕೂಡ ಈಗಿರುವಂತೆಯೇ ಸಂಚರಿಸಲಿವೆ. ದ.ಕ., ಉಡುಪಿಯಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದರೂ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ
ಇರುವ ಕಾರಣ ರಸ್ತೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು, ಟಿಕೆಟ್ ದರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಲಾಗುವುದು ಎಂದು ಬಸ್‌ಗಳ ಮಾಲಕರು ತಿಳಿಸಿದ್ದಾರೆ.