ಕುಕ್ಕೆ: ಆಮೆಗತಿಯಲ್ಲಿ ಅಭಿವೃದ್ಧಿ ಕಾಮಗಾರಿ

ಭಕ್ತರು, ನಾಗರಿಕರು, ವ್ಯಾಪಾರಸ್ಥರು, ದೇಗುಲಕ್ಕೆ ಸಮಸ್ಯೆ

Team Udayavani, Oct 23, 2019, 5:21 AM IST

t-11

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ ಸಮಗ್ರ ಅಭಿವೃದ್ಧಿ ಯೋಜನೆಯಡಿ 180 ಕೋಟಿ ರೂ. ವೆಚ್ಚದ ಮಾಸ್ಟರ್‌ ಪ್ಲಾನ್‌ ಯೋಜನೆಯ 2ನೇ ಹಂತದ 68 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನಿಧಾನಗತಿ ಹಾಗೂ ವಿಳಂಬ ಕಾಮಗಾರಿಯ ಪರಿಣಾಮ ಭಕ್ತರು, ವ್ಯಾಪಾರಸ್ಥರು, ನಾಗರಿಕರು, ಸಾರ್ವಜನಿಕರಿಗೆ ಭಾರೀ ಸಮಸ್ಯೆಯಾಗುತ್ತಿದೆ.

ಕುಮಾರಧಾರಾ-ಕಾಶಿಕಟ್ಟೆ ನಡುವೆ ಚತುಷ್ಪಥ ರಸ್ತೆ ವಿಸ್ತರಣೆ ಮತ್ತು ಕಾಶಿಕಟ್ಟೆ-ನೂಚಿಲ, ಕಾರ್ತಿಕೇಯ ವಸತಿಗೃಹ – ಆದಿಸುಬ್ರಹ್ಮಣ್ಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕಳೆದ ಒಂದು ವರ್ಷದಿಂದ ನಿಧಾನಗತಿಯಲ್ಲಿ ನಡೆಯುತ್ತಿವೆ. ಕಾಮಗಾರಿಗೆ ನಗರದ ಕುಡಿಯುವ ನೀರು, ಒಳಚರಂಡಿ, ಬಿಎಸ್ಸೆನ್ನೆಲ್‌ ಭೂಗತ ಸಂಪರ್ಕ ಕೇಬಲ್‌ಗ‌ಳಿಗೆ ಹಾನಿಯಾಗಿ ಸಮಸ್ಯೆಯಾಗಿದೆ. ದಾರಿದೀಪವೂ ಸರಿಯಾಗಿಲ್ಲದೆ ಕತ್ತಲಲ್ಲಿ ಕಳೆಯುವಂತಾಗಿದೆ.

ಕುಮಾರಧಾರಾ-ಕಾಶಿಕಟ್ಟೆ ರಸ್ತೆಯ ಕಾಶಿಕಟ್ಟೆ, ಮೆಸ್ಕಾಂ ಬಳಿ ಬಿಎಸ್ಸೆನ್ನೆಲ್‌ನ ಕೋಟ್ಯಂತರ ರೂ. ವೆಚ್ಚದ ಭೂಗತ ಕೇಬಲ್‌ಗ‌ಳು ಆಹುತಿಯಾಗಿವೆ. ಕೇಬಲ್‌ಗ‌ಳು ತುಂಡಾಗಿ ನಷ್ಟ ಉಂಟಾಗಿದೆ. ಸಂಪರ್ಕ ಕಡಿತದ ಪರಿಣಾಮ ನಗರದ 7 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೆಟ್‌ವರ್ಕ್‌ ಸೇವೆಗಳು ಸ್ಥಗಿತಗೊಂಡಿವೆ. ಫೈಬರ್‌ ಟು ಹೋಮ್‌ ಸೇವೆಗಳು ಕಾರ್ಯಾಚರಿಸುತ್ತಿಲ್ಲ. ಆರ್ಥಿಕ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳು ನಡೆಯುತ್ತಿಲ್ಲ. ಸಾರ್ವಜನಿಕರು, ಉದ್ದಿಮೆದಾರರು, ಕ್ಷೇತ್ರದ ಅಸಂಖ್ಯಾತ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಏರುಪೇರಾಗಿದೆ.

ಕಚೇರಿ ಕೆಲಸಗಳು ಬಾಕಿ
ದೇವಸ್ಥಾನದ 12 ಸ್ಥಿರ ದೂರವಾಣಿಗಳು, ಬ್ರಾಡ್‌ಬ್ಯಾಂಡ್‌ ಸೇವೆಗಳು ಕಡಿತಗೊಂಡಿವೆ. ಭಕ್ತರಿಗೆ ದೇಗುಲ ಸಂಪರ್ಕವೂ ಸಾಧ್ಯವಾಗುತ್ತಿಲ್ಲ. ಕಚೇರಿ ಮಾಹಿತಿಗಳನ್ನು ಕಳುಹಿಸಲು, ಪಡೆಯಲು ಆಗುತ್ತಿಲ್ಲ. ಭಕ್ತರಿಗೆ ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆ, ಕೊಠಡಿ ಕಾಯ್ದಿರಿಸುವಿಕೆ ಸಾಧ್ಯವಾಗದೆ ದೇಗುಲದ ಆದಾಯದ ಮೇಲೂ ಪರಿಣಾಮ ಬೀರುತ್ತಿದೆ.

ಸೇವೆಗಳೆಲ್ಲವೂ ಸ್ಥಗಿತ
ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಮಠ ಇವೆರಡು ಪ್ರಮುಖ ಕ್ಷೇತ್ರಗಳು ಇಲ್ಲಿವೆ. ಬ್ಯಾಂಕಿಂಗ್‌, ಬ್ರಾಂಡ್‌ಬ್ಯಾಂಡ್‌ ಎಟಿಎಂ ಮೊದಲಾದ ಸೇವೆಗಳು ಸಿಗುತ್ತಿಲ್ಲ. ದೂರದ ಊರುಗಳಿಂದ ಬರುವವರು, ಸ್ಥಳೀಯರು, ಸಂಘ ಸಂಸ್ಥೆಯವರು, ಸರಕಾರಿ ನೌಕರರು ಸರಕಾರಿ ಸ್ವಾಮ್ಯದ ಮೊಬೈಲ್‌ ಸೇವೆಯನ್ನು ಅವಲಂಬಿಸಿರುತ್ತಾರೆ. ಅವರೆಲ್ಲ ಇಲ್ಲಿ ತೊಂದರೆಗೆ ಒಳಗಾಗುತ್ತಿದ್ದಾರೆ. ಒಎಫ್ಸಿ ಸಂಪರ್ಕ ಹೊಂದಿರುವ ಇತರೆ 23 ಮೊಬೈಲ್‌ ಟವರ್‌ಗಳು ಇಲ್ಲಿ ಏಕಕಾಲದಲ್ಲಿ ಸ್ಥಗಿತವಾಗುತ್ತಿವೆ. ವಿದ್ಯುತ್ತಿದ್ದರೂ ಸಿಗ್ನಲ್‌ ಇರುವುದಿಲ್ಲ. 23 ಕಡೆಗಳ ಗ್ರಾಮಗಳಲ್ಲಿ ಪಂಚಾಯತ್‌ ಕಚೇರಿ ಕೆಲಸ – ಕಾರ್ಯಗಳು ಸೂಕ್ತ ಸಮಯದಲ್ಲಿ ನಡೆಯುತ್ತಿಲ್ಲ. ಸೇವೆಗಳು ವ್ಯತ್ಯಯವಾಗುತ್ತಿವೆ.

ನೀರು ಪೋಲು
ನಗರಕ್ಕೆ ಕುಡಿಯುವ ನೀರು ಒದಗಿಸುವ ಮುಖ್ಯ ಪೈಪ್‌ ಅಲ್ಲಲ್ಲಿ ಒಡೆದಿರುವುದರಿಂದ ನಗರದ ಮುಖ್ಯ ಪೇಟೆ ಸಹಿತ ಎಲ್ಲ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಎರಡು ತಿಂಗಳಿನಿಂದ ಈ ಸಮಸ್ಯೆ ಆಗುತ್ತಿದೆ. ಶಿಕ್ಷಣ ಸಂಸ್ಥೆಗಳಿಗೂ ನೀರಿನ ಕೊರತೆ ತಟ್ಟಿದೆ. ಚರಂಡಿ ನೀರು ಸರಿಯಾಗಿ ಹರಿಯದೇ ಚರಂಡಿಯಲ್ಲಿ ನಿಂತು ರಸ್ತೆ ಮೇಲೆ ಹರಿಯುತ್ತಿವೆ. ಕಾಂಕ್ರೀಟು ರಸ್ತೆಯಲ್ಲಿ ಅಂಚಿಗೆ ಮಣ್ಣು ತುಂಬದೆ ಸಂಚಾರದಲ್ಲೂ ಸಮಸ್ಯೆಯಾಗಿದೆ.

ಸಭೆ ಕರೆಯಲು ಆಗ್ರಹ
ರಸ್ತೆ ಕಾಮಗಾರಿ ಕಳಪೆಯಾಗಿದೆ. ಮಾಸ್ಟರ್‌ ಪ್ಲಾನ್‌ ಅಂದಾಜು ಪಟ್ಟಿಯಂತೆ ಕಾಮಗಾರಿ ನಡೆಸಿಲ್ಲ. ರಸ್ತೆ ವಿಸ್ತರಣೆಯಲ್ಲಿ ಖಾಸಗಿ ಭೂಮಿಗೆ ಪರಿಹಾರ ಮೊತ್ತದ ಹಣ ನೀಡಿದ್ದರೂ ಕೆಲವೆಡೆ ಒತ್ತುವರಿ ತೆರವು ನಡೆಸಿಲ್ಲ. ಅವೈಜ್ಞಾನಿಕ ಮತ್ತು ಬೇಕಾಬಿಟ್ಟಿ ಮಾಸ್ಟರ್‌ ಪ್ಲಾನ್‌ ಕಾಮಗಾರಿಯಿಂದ ಸಾರ್ವಜನಿಕರು, ಭಕ್ತರು ಪರದಾಡುವಂತಾಗಿದೆ. ಸಮಿತಿ ಸಭೆ ಕರೆಯದೇ ವರ್ಷಗಳೇ ಕಳೆದಿವೆ. ಮೂಲ ಸ್ವರೂಪ ಬದಲಿಸಿ ಕಾಮಗಾರಿ ನಡೆಸುತ್ತಿರುವುದೆ ಇಷ್ಟೆಲ್ಲ ಅವಾಂತರಕ್ಕೆ ಕಾರಣ. ಶೀಘ್ರವೇ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರು, ಕಮಿಷನರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಸುಬ್ರಹ್ಮಣ್ಯದಲ್ಲೇ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾ.ಪಂ. ಸದಸ್ಯ ಹರೀಶ್‌ ಇಂಜಾಡಿ ಆಗ್ರಹಿಸಿದ್ದಾರೆ.

ಸಮೀಪಿಸುತ್ತಿದೆ ಚಂಪಾ ಷಷ್ಠಿ
ಕೆಟ್ಟು ಹೋದ ಬಿಎಸ್ಸೆನ್ನೆಲ್‌ ಹಾಗೂ ನೀರು ಸರಬರಾಜು ಕೊಳವೆಗಳ ಮರುಜೋಡಣೆ ಕಾರ್ಯ ಆರಂಭಗೊಂಡಿದೆ. ಸ್ಥಿರ ದೂರವಾಣಿ ವ್ಯವಸ್ಥೆ ಮರಳಿ ಯಥಾಸ್ಥಿತಿಗೆ ಬರಲು ಇನ್ನೂ ಕೆಲವು ದಿನಗಳು ಬೇಕು. ಅಲ್ಲಿಯ ತನಕ ಪರ್ಯಾಯ ವ್ಯವಸ್ಥೆ ಕಡೆ ಗಮನ ಹರಿಸಬೇಕಿದೆ. ಕಾಮಗಾರಿ ಯೋಜನೆಯ ಅವಧಿ 18 ತಿಂಗಳು. 10 ತಿಂಗಳಾದರೂ ಕಾಮಾಗಾರಿ ಶೇ. 25 ಕೂಡ ಪ್ರಗತಿ ಸಾಧಿಸಿಲ್ಲ. ಈಗ ನಡೆಯುತ್ತಿರುವ ಕಾಮಗಾರಿ ವೇಗ ಗಮನಿಸಿದರೆ ಇನ್ನು ಈ ಕಾಮಗಾರಿ ಪೂರ್ಣಗೊಳ್ಳಲು 3 ವರ್ಷ ಹಿಡಿಯಬಹುದು. ಡಿಸೆಂಬರ್‌ನಲ್ಲಿ ಚಂಪಾ ಷಷ್ಠಿಯೂ ನಡೆಯಲಿದ್ದು, ಈ ಸಂದರ್ಭ ಸಮಸ್ಯೆಯಾಗುವ ಸಾಧ್ಯತೆ ಇದೆ.

ಇಲಾಖೆ ಸಹಕರಿಸುತ್ತಿಲ್ಲ
ಕಾಮಗಾರಿ ಮುಂಚಿತ ಭೂಗತ ಕೇಬಲ್‌ ಸ್ಥಳಾಂತರಿಸುವಂತೆ ದೂರಸಂಪರ್ಕ ಇಲಾಖೆಯ ಬಿಎಸ್ಸೆನ್ನೆಲ್‌ಗೆ ಸೂಚಿಸಲಾಗಿದೆ. ಕಾಮಗಾರಿ ನಡೆಯವ ಸ್ಥಳದಲ್ಲಿ ಸಿಬಂದಿ ಇಲ್ಲದೆ ಇರುವುದು ಸಮಸ್ಯೆಗೆ ಕಾರಣ. ನೀರಿನ ವಿಚಾರದಲ್ಲೂ ಇದೇ ಆಗಿದೆ.
– ಸುನೀಲ್‌, ಕಾಮಗಾರಿ ಗುತ್ತಿಗೆ ಮೇಲ್ವಿಚಾರಕ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.