ಕುಕ್ಕೆ, ಬಪ್ಪನಾಡಿನಲ್ಲಿ ಇಂದು 6 ಜೋಡಿ ವಿವಾಹ
"ಸಪ್ತಪದಿ'ಗಿಲ್ಲ ನೀತಿ ಸಂಹಿತೆ ಅಡ್ಡಿ
Team Udayavani, Dec 10, 2020, 12:55 AM IST
ಸಾಂದರ್ಭಿಕ ಚಿತ್ರ
ಮಂಗಳೂರು/ಸುಬ್ರಹ್ಮಣ್ಯ: ಧಾರ್ಮಿಕ ದತ್ತಿ ಇಲಾಖೆ ಮೂಲಕ ಜಿಲ್ಲೆಯ ಎರಡು ದೇವಸ್ಥಾನಗಳಲ್ಲಿ ಆಯೋಜಿಸಿರುವ “ಸಪ್ತಪದಿ’ ಸಾಮೂಹಿಕ ವಿವಾಹಕ್ಕೆ ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿಲ್ಲ. ನಿಗದಿತ ದಿನಾಂಕವಾದ ಡಿ. 10ರಂದೇ ವಿವಾಹಗಳು ನಡೆಯುತ್ತಿವೆ.
ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ನಾಲ್ಕು ಜೋಡಿ ಮತ್ತು ಮೂಲ್ಕಿಯ ಬಪ್ಪನಾಡು ದೇಗುಲದಲ್ಲಿ ಎರಡು ಜೋಡಿ “ಸಪ್ತಪದಿ’ಯಡಿ ಗುರುವಾರ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಚುನಾವಣೆ ಘೋಷಣೆಯಾಗುವುದಕ್ಕೆ ಮುನ್ನವೇ ದಿನಾಂಕ ನಿಗದಿಪಡಿಸಿದ್ದರಿಂದ ನಿಗದಿತ ದಿನಾಂಕದಂದೇ ವಿವಾಹ ನಡೆಯುತ್ತಿದೆ. ಜೋಡಿಗಳ ಹೆತ್ತವರ ಸಹಿತ ಕೆಲವೇ ಮಂದಿ ಭಾಗವಹಿಸಲಿದ್ದು ಕಾರ್ಯಕ್ರಮ ಸರಳವಾಗಿಯೇ ನಡೆಯಲಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ವೆಂಕಟೇಶ್ ತಿಳಿಸಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಸರಳ ಸಾಮೂಹಿಕ ವಿವಾಹವು ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಕಡಿಮೆಯಾದ ಬಳಿಕ ಡಿ. 10ರಂದು ಸಾಮೂಹಿಕ ವಿವಾಹಕ್ಕೆ ದಿನಾಂಕ ಗೊತ್ತು ಪಡಿಸಲಾಗಿತ್ತು.
ಕುಕ್ಕೆ: ನಾಲ್ಕು ಜೋಡಿ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮಸಮ್ಮೇಳನ ಮಂಟಪ ದಲ್ಲಿ ಸರಳ ಸಾಮೂಹಿಕ ವಿವಾಹ ಬೆಳಗ್ಗೆ 11.30ಕ್ಕೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗಿದ್ದು ದೇಗುಲದ ಆಡಳಿತಾಧಿಕಾರಿಗಳು, ಅಭಿವೃದ್ಧಿ ಸಮಿತಿಯವರು, ಅಧಿಕಾರಿಗಳು ಉಪಸ್ಥಿತ ರಿರಲಿದ್ದಾರೆ.
ವಿವಾಹದಲ್ಲಿ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. 55 ಸಾವಿರ ರೂ. ಮೌಲ್ಯದ ಅಂದಾಜು 8 ಗ್ರಾಂ ತೂಕದಲ್ಲಿ ವಧುವಿಗೆ ಚಿನ್ನದ ತಾಳಿ, 2 ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುತ್ತದೆ.
ಬಪ್ಪನಾಡು: ಎರಡು ಮದುವೆ
ಮೂಲ್ಕಿ: ಇಲ್ಲಿನ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಅನ್ನಪೂರ್ಣ ಸಭಾಗೃಹದಲ್ಲಿ ಎರಡು ಜೋಡಿಗಳ ವಿವಾಹ ಸರಕಾರದ ಆದೇಶದಂತೆ ನಡೆಯಲಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.
ಉಡುಪಿ: ಮುಹೂರ್ತ ಕೂಡಿ ಬಂದಿಲ್ಲ !
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸಪ್ತಪದಿ ಜನೆಯಂತೆ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳಲು 29 ಜೋಡಿಗಳು ಸಿದ್ಧ ಇವೆಯಾದರೂ ಮುಹೂರ್ತ ಕೂಡಿಬಂದಿಲ್ಲ. ಸರಕಾರ 40,000 ರೂ. ಮೊತ್ತವನ್ನು ಕರಿಮಣಿಗಾಗಿ ನಿಗದಿಪಡಿಸಿದ್ದು ಇದನ್ನು ಬೆಂಗಳೂರಿನ ಕರ್ನಾಟಕ ಕರಕುಶಲ ನಿಗಮ ದವರು ಮಾಡಿಕೊಡಬೇಕು. ಜಿಲ್ಲೆಯಿಂದ 29 ಕರಿಮಣಿ ಮಾಡಿ ಕಳುಹಿಸಲು ಸೂಚನೆ ನೀಡಲಾಗಿದೆ. ನಿಗಮದಿಂದ ಕರಿಮಣಿ ಬಂದ ಬಳಿಕ ಸೂಕ್ತ ದಿನವನ್ನು ನಿಗದಿಪಡಿಸಿ ಸಾಮೂಹಿಕ ವಿವಾಹವನ್ನು ನಡೆಸಲಾಗುವುದು ಎಂದು ಇಲಾಖೆ ಮೂಲಗಳು ತಿಳಿಸಿವೆ.
ಜಿಲ್ಲೆಯ ನಾಲ್ಕು ದೇಗುಲಗಳಲ್ಲಿ ವಿವಾಹ ಏರ್ಪಡಿಸಲು ಸಿದ್ಧತೆ ನಡೆದಿದೆ. ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗರಿಷ್ಠ 19, ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಆರು ಜೋಡಿ, ಕಾಪು ಹೊಸ ಮಾರಿಗುಡಿಯಲ್ಲಿ ಮೂರು ಮತ್ತು ಉಪ್ಪುಂದ ದುರ್ಗಾಪರಮೇಶ್ವರಿ ದೇಗುಲದಲ್ಲಿ ಒಂದು ಜೋಡಿ ಹಸೆಮಣೆಗೆ ಏರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.