Kukke Subrahmanya: ಕಿರುಷಷ್ಠಿ ರಥೋತ್ಸವ
Team Udayavani, Jan 5, 2025, 10:41 PM IST
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಕಿರುಷಷ್ಠಿ ದಿನವಾದ ರವಿವಾರ ಶ್ರೀ ದೇವರ ಕಿರುಷಷ್ಠಿ ರಥೋತ್ಸವ ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ ಉತ್ಸವ ನೆರವೇರಿತು.
ರಥಾರೋಹಣದ ಬಳಿಕ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ರಥೋತ್ಸವ ನೆರವೇರಿತು. ಅನಂತರ ದೇಗುಲದ ರಥಬೀದಿಯಿಂದ ಕಾಶಿಕಟ್ಟೆ ತನಕ ರಥೋತ್ಸವ ನೆರವೇರಿತು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು. ಬಳಿಕ ದೇಗುಲದ ಹೊರಾಂಗಣದಲ್ಲಿ ಪಾಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ಕಿರುಷಷ್ಠಿ ಉತ್ಸವದ ಸಂದರ್ಭ ದೇವರಿಗೆ ಅವಳಿ ಉತ್ಸವ ನಡೆಯು ವುದು ವಿಶೇಷ. ರಥೋತ್ಸವದ ಬಳಿಕ ವಿವಿಧ ಸಂಗೀತ ಸುತ್ತುಗಳು ನೆರವೇರಿದವು. ಬಳಿಕ ಮಾಮೂಲಿನಂತೆ ರಾತ್ರಿ ಮಹಾಪೂಜೆ ನಡೆದು, ಅನಂತರ ದೇವರ ಬಂಡಿ ಮತ್ತು ಪಾಲಕಿ ಉತ್ಸವ, ಸಂಗೀತ ಸುತ್ತುಗಳು ನೆರವೇರಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.