Kukke Subrahmanya: ದಿಢೀರ್ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ
Team Udayavani, Oct 21, 2024, 12:27 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ರವಿವಾರ ಮಧ್ಯಾಹ್ನ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ಕೇವಲ ಒಂದು ಗಂಟೆ ಸುರಿದ ಭಾರೀ ಮಳೆಗೆ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯು ತುಂಬಿ ಹರಿಯಿತು.
ಈ ನದಿಯು ಸುಮಾರು 10ರಿಂದ 15 ನಿಮಿಷಗಳ ಕಾಲ ಪ್ರವಾಹ ಸದೃಶವಾಗಿ ಹರಿಯಿತು. ನದಿಯ ಪ್ರವಾಹವು ಆದಿಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣಕ್ಕೆ ಪ್ರವೇಶಿಸಿತು. ಅಲ್ಲದೆ ಅಲ್ಪ ಪ್ರಮಾಣದಲ್ಲಿ ಸಂಪ್ರದಾಯ ಪ್ರಕಾರ ಒಳ ಪ್ರವೇಶಿಸಿ ಸಂಪೂರ್ಣ ಪ್ರವಾಹ ಶಾಂತವಾಯಿತು.
ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ಭಾರೀ ಗುಡುಗು ಸಹಿತ ಸಣ್ಣಗೆ ಮಳೆ ಆರಂಭವಾಯಿತು. ಬಳಿಕ 3 ಗಂಟೆಯಿಂದ ಸುಮಾರು ಒಂದು ತಾಸು ಭಾರೀ ಮಳೆಯಾಯಿತು. ಈ ಮಳೆಗೆ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯು ತುಂಬಿ ಹರಿಯಿತು. ಸುಮಾರು ಒಂದು ಗಂಟೆಯ ಮಳೆಗೆ ದರ್ಪಣತೀರ್ಥವು 15 ನಿಮಿಷಗಳ ಕಾಲ ಪ್ರವಾಹ ಸದೃಶವಾಗಿ ಹರಿಯಿತು.
ಸ್ವಲ್ಪ ಹೊತ್ತಿನಲ್ಲಿ ಮಳೆ ಕಡಿಮೆಯಾಗಿದ್ದು, ಪ್ರವಾಹವೂ ಇಳಿಮುಖವಾಯಿತು. ಮಳೆಯ ನೀರು ಆದಿಸುಬ್ರಹ್ಮಣ್ಯದ ಕೆಲವು ಅಂಗಡಿಮುಂಗಟ್ಟುಗಳಿಗೂ ನುಗ್ಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.