ಕುಕ್ಕೆ  ಸುಬ್ರಹ್ಮ ಣ್ಯ: ಷಷ್ಠಿ, ಪಂಚಮಿ ರಥೋತ್ಸವ 


Team Udayavani, Nov 25, 2017, 9:58 AM IST

25-Nov-1.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರೆ ಪ್ರಯುಕ್ತ ಗುರುವಾರ ರಾತ್ರಿ ಪಂಚಮಿ ಹಾಗೂ ಶುಕ್ರವಾರ ಬ್ರಹ್ಮರಥೋತ್ಸವು ವೈಭವದಿಂದ ನೆರವೇರಿತು. ನಾಡಿನ ಎಲ್ಲ ಕಡೆಗಳಿಂದ ಆಗಮಿಸಿದ ಭಕ್ತರು ಶ್ರೀ ದೇವರ ಮಹಾರಥೊತ್ಸವದಲ್ಲಿ ಪಾಲ್ಗೊಂಡರು.

ಶುಕ್ರವಾರ ಮುಂಜಾನೆ ದೇಗುಲದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಆ ಬಳಿಕ ರಾಜಬೀದಿಯಲ್ಲಿ ವೈಭವದ ಬೃಹ್ಮರಥೋತ್ಸವ ನಡೆಯಿತು. 86 ಮಂದಿ ಭಕ್ತರು ಬ್ರಹ್ಮರಥ ಸೇವೆ ಸಲ್ಲಿಸಿದರು.

ಬ್ರಹ್ಮರಥೋತ್ಸವದ ಸಂದರ್ಭ ರಥಕ್ಕೆ ಸಾಸಿವೆ, ನಾಣ್ಯ ಏಲಕ್ಕಿ ಕಾಳು ಮೆಣಸು ಇತ್ಯಾದಿ ಧಾನ್ಯಗಳನ್ನು ಎಸೆದು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿಕೊಂಡರು. ಪಂಚಮಿಯಂದು ಭಕ್ತರ ಸಂಖ್ಯೆ ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇಳಿಮುಖವಾಗಿತ್ತು. ಆದರೆ ಷಷ್ಠಿ ದಿನ ರಥೋತ್ಸವದ ಹೊತ್ತಿಗೆ ಅಪಾರ ಪ್ರಮಾಣದಲ್ಲಿ ಭಕ್ತರು ಭಾಗವಹಿಸಿದ್ದರು. ದೇಗುಲದ ಅನ್ನಛತ್ರ ಹಾಗೂ ಅಂಗಡಿ ಗುಡ್ಡೆಯ ವಿಶಾಲವಾದ ಸುಸಜ್ಜಿತ ಸ್ಥಳದಲ್ಲಿ ಸಹಸ್ರಾರು ಮಂದಿ ಅನ್ನಪ್ರಸಾದ ಸೇವನೆಮಾಡಿದರು.

ನಗರ ಹಾಗೂ ಸುತ್ತಮುತ್ತಲಿನ ಭಾಗಗಳ ವಿವಿಧ ಸಂಘ -ಸಂಸ್ಥೆಗಳು ಸ್ವಯಂ ಸೇವಕರಾಗಿ ಜಾತ್ರೆ ನಡೆಯುವ ಮೂರು ದಿನಗಳಲ್ಲಿ ತೊಡಗಿಸಿಕೊಂಡಿದ್ದರು.

ಕೃಷಿ ಪ್ರಾತ್ಯಕ್ಷಿತೆ, ಪ್ರದರ್ಶನ
ಜಾತ್ರೆ ಪ್ರಯುಕ್ತ ದೇಗುಲ ಹಾಗೂ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳ ಸಹಾಯೋಗದಲ್ಲಿ ಕೃಷಿ ಮೇಳ ಆಯೋಜಿಸಲಾಗಿತ್ತು. ಕೃಷಿ ಮೇಳದಲ್ಲಿ ವಿವಿಧ ಬಗೆಯ ಬಿತ್ತನೆ ಬೀಜಗಳ ಪ್ರದರ್ಶನ ಮತ್ತು ಮಾರಾಟ, ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಗಳು, ಕೃಷಿ ಉತ್ಪನ್ನಗಳು, ಹಾಲು ಕರೆಯುವ ಯಂತ್ರ, ಔಷಧ ಸಿಂಪಡಿಸುವ ಯಂತ್ರ, ವಿವಿಧ ಜಾತಿಯ ಗಿಡಗಳು ಇತ್ಯಾದಿಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲಾಗಿತ್ತು. ವಿವಿಧ ಜಾತಿಯ ಕಾಡುತ್ಪತ್ತಿ ಗಿಡಗಳ ಪ್ರದರ್ಶನ, ವಿವಿಧ ಭತ್ತದ ತಳಿಗಳು, ಹಾಗೂ ನಾಟಿ ಪದ್ಧತಿಯ ಪ್ರಾತ್ಯಕ್ಷಿತೆ ಪುಸ್ತಕ ಮಳಿಗೆ ಹಾಗೂ ಪ್ರಾಚೀನ ವಸ್ತುಗಳ ಪ್ರದರ್ಶನ ಗಮನಸೆಳೆಯಿತು. ಕೃಷಿ ಚಟುವಟಿಕೆಗಳಿಗೆ ಬಳಸುವ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟಗಳು ಭರದಿಂದ ನಡೆದವು. ಸುಳ್ಯದ ಕೆವಿಜಿ ಆಯುರ್ವೇದಿಕ್‌ ವಿಭಾಗದ ವತಿಯಿಂದ ಉಚಿತ ಆರೋಗ್ಯ ತಪಾಸನೆ ಹಮ್ಮಿಕೊಳ್ಳಲಾಗಿತ್ತು.

ಕೃಷಿ ಮೇಳದಲ್ಲಿ ಸುಳ್ಯ ಕೃಷಿ ಇಲಾಖೆ, ಅರಣ್ಯ ಇಲಾಖೆ, ಮಂಗಳೂರಿನ ಕೃಷಿ ಪ್ರಾಧಿಕಾರ, ಪುತ್ತೂರು ಗೇರು ಸಂಶೋಧನ ಕೇಂದ್ರ, ಜೇನು ಸಹಕಾರ ಸಂಘ, ಪಶುಸಂಗೋಪನ ಇಲಾಖೆ ಸುಳ್ಯ, ಬಿಳಿನೆಲೆ ಕಿದುವಿನ ಸಿಪಿಸಿಆರ್‌ಐ, ಕ್ಷೀರಾ ಸಾಮಗ್ರಿಗಳ ವಿತರಣ ಸಂಸ್ಥೆ, ರೋಟರಿ ಕ್ಲಬ್‌ ಸುಬ್ರಹ್ಮಣ್ಯ, ಜೇಸಿಐ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಜಲಾನಯನ ಸಮಿತಿಗಳು ಕೃಷಿ ಮೇಳದಲ್ಲಿ ಪಾಲ್ಗೊಂಡಿದ್ದವು. 

ಜಾತ್ರೆ ಸಂದರ್ಭ ಹೆಚ್ಚಿನ ಸಂಖ್ಯೆ ಯಲ್ಲಿ ಸಂತೆಮಾರುಕಟ್ಟೆಗಳು ಆಗಮಿಸಿ ಮಾರಾಟ ಕಾರ್ಯದಲ್ಲಿ ತೊಡಗಿದ್ದರು. ಕುಮಾರಧಾರಾ-ಕಾಶಿಕಟ್ಟೆ ತನಕ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್‌ ಮಾಡಿದ್ದರಿಂದ ಇಕ್ಕಟ್ಟಾಗಿದ್ದ ಈ ರಸ್ತೆಯಲ್ಲಿ ಟ್ರಾಫಿಕ್‌ ಸಮಸ್ಯೆ ಶುಕ್ರವಾರ ಉಂಟಾಗಿತ್ತು. ಬ್ರಹ್ಮರಥ ಎಳೆಯುವ ವೇಳೆ ನೂಕು ನುಗ್ಗಲು ಏರ್ಪಟ್ಟಿತ್ತು. ರಥೋತ್ಸವ ನಡೆದ ರಥಬೀದಿಯ ಎರಡು ಬದಿ ಪೊಲೀಸರು ಹಗ್ಗ ಬಳಸಿ ಭಕ್ತರ ನೂಕುನುಗ್ಗಲು ತಡೆ ಯುವ ಯತ್ನ ನಡೆಸಿದರಾದರೂ ಅಪಾರ ಪ್ರಮಾಣದಲ್ಲಿದ್ದ ಭಕ್ತರು ಮುನ್ನುಗ್ಗಿದ್ದರ ಪರಿಣಾಮ ನೂಕುನುಗ್ಗಲು ಉಂಟಾಯಿತು. 

ಇಂದು ನೌಕವಿಹಾರ
ನ. 25ರಂದು ಶ್ರೀ ಸುಬ್ರಹ್ಮಣ್ಯ ದೇವರ ಅವಭೃಥ ಉತ್ಸವ ಮತ್ತು ನೌಕವಿಹಾರ ಕುಮಾರಧಾರಾ ನದಿಯಲ್ಲಿ ನಡೆಯಲಿದೆ. ಈ ವೇಳೆ ದೇಗುಲದ ಯಶಸ್ವಿ ಆನೆಯ ಜಲಕ್ರೀಡೆಯಲ್ಲಿ ಸಂಭ್ರಮಿಸುವುದು ಮನಸೆಳೆಯುತ್ತದೆ.

ಟಾಪ್ ನ್ಯೂಸ್

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Madanthyar: ಬಾಲಕಿಯರ ಹಾಸ್ಟೆಲ್‌ ಕಟ್ಟಡ ಅನಾಥ!

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

1(1

Madanthyar: ಬಾಲಕಿಯರ ಹಾಸ್ಟೆಲ್‌ ಕಟ್ಟಡ ಅನಾಥ!

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Rashmika Mandanna gave hint of Pushpa 3

Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.