ಕುಕ್ಕೆ ಸುಬ್ರಹ್ಮಣ್ಯ: ಇಂದು 20 ಕೋ. ರೂ. ಕಾಮಗಾರಿ ಲೋಕಾರ್ಪಣೆ


Team Udayavani, Jul 8, 2017, 2:05 AM IST

Kukke-Subramanya-Temple-750.jpg

ಪಂಜ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ನೆರವೇರುತ್ತಿರುವ ಸಮಗ್ರ ಅಭಿವೃದ್ಧಿಯ 180 ಕೋ.ರೂ. ವೆಚ್ಚದ ಮಾಸ್ಟರ್‌ ಪ್ಲ್ಯಾನ್‌ನಲ್ಲಿ 20 ಕೋ. ರೂ.ಗಳ ಕಾಮಗಾರಿಗಳು ಇದೀಗ ಪೂರ್ಣಗೊಂಡಿದ್ದು, ಜು. 8ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಪೂರೈಸಲು ಆಡಳಿತ ಮಂಡಳಿ ವಿಶೇಷ ಮುತುವರ್ಜಿ ವಹಿಸಿದೆ ಎಂದು ಅವರು ವಿವರಿಸಿದ್ದಾರೆ.

ಕಾಮಗಾರಿಗಳ ಉದ್ಘಾಟನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ ಪ್ಲ್ಯಾನ್‌ ಯೋಜನೆಯಡಿ ಕಾಮಗಾರಿಗಳಾದ ನೀರು ಸರಬರಾಜು ಹಾಗೂ ಒಳಚರಂಡಿ ಯೋಜನೆ, ರಥದ ಶೆಡ್‌, ನೌಕರರ ವಸತಿ ಗೃಹ ಕಟ್ಟಡ ವಸುದಾ, ವರದಾ, ಗಣ್ಯ ಅತಿಥಿಗಳ ಭೋಜನ ಕೊಠಡಿ, ಆದಿಸುಬ್ರಹ್ಮಣ್ಯ ಸೇತುವೆ, ಪ್ರವಾಸೋದ್ಯಮ ಇಲಾಖೆ ಯಿಂದ ನಿರ್ಮಾಣಗೊಂಡ ಆದಿ ಸುಬ್ರಹ್ಮಣ್ಯ ಉದ್ಯಾನವನಗಳು ಜು. 8ರಂದು ಲೋಕಾರ್ಪಣೆಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.

ಗಣ್ಯರ ಸಮ್ಮುಖ
ಶನಿವಾರ ಮುಂಜಾನೆ ನೂತನ ರಥದ ಶೆಡ್‌, ನೀರು ಸರಬರಾಜು ವ್ಯವಸ್ಥೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಒಳಚರಂಡಿ ಯೋಜನೆಯನ್ನು ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಲೋಕಾರ್ಪಣೆಗೊಳಿಸುವರು. ವಸುದಾ – ವರದಾ ನೌಕರರ ವಸತಿ ಗೃಹವನ್ನು ಶಾಸಕ ಎಸ್‌. ಅಂಗಾರ, ಆದಿಸುಬ್ರಹ್ಮಣ್ಯ ಉದ್ಯಾನವನವನ್ನು ಜಿ.ಪಂ.  ಸದಸ್ಯೆ ಆಶಾ ತಿಮ್ಮಪ್ಪ, ವಿವಿಐಪಿ ಭೋಜನ ಕೊಠಡಿಯನ್ನು ಧಾರ್ಮಿಕ ದತ್ತಿ ಆಯುಕ್ತ ಎಸ್‌.ಪಿ., ಷಡಕ್ಷರಿ ಸ್ವಾಮಿ, ಆದಿ ಸುಬ್ರಹ್ಮಣ್ಯ ಸೇತುವೆಯನ್ನು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಉದ್ಘಾಟಿಸುವರು.   

ಬಳಿಕ ದೇಗುಲದ ವಲ್ಲೀಶ ಸಭಾಭವನದಲ್ಲಿ ನಡೆಯಲಿರುವ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸುವರು. ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ತೂಗು ಸೇತುವೆ ಸರದಾರ ಗಿರೀಶ್‌ ಭಾರದ್ವಾಜ್‌ ಅವರನ್ನು ಸಮ್ಮಾನಿಸಲಾಗುವುದು.

ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಎಚ್‌., ತಾ.ಪಂ. ಸದಸ್ಯ ಅಶೋಕ್‌ ನೆಕ್ರಾಜೆ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಜಗನ್ನಿವಾಸ ರಾವ್‌, ಪದ್ಮನಾಭ ಕೋಟ್ಯಾನ್‌, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯೆ ವಿಮಲಾ ರಂಗಯ್ಯ, ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಭಿಯಂತರ ಜಯರಾಮ್‌ ಕೆ.ಪಿ., ಲೋಕೋಪಯೋಗಿ ಅಭಿಯಂತರ ಕಾಂತರಾಜ್‌ ಬಿ.ಟಿ., ಜಿಲ್ಲಾ ಸಹಾಯಕ ಆಯುಕ್ತೆ ಪ್ರಮೀಳಾ, ಜಿಲ್ಲಾ ಲೋಕೋಪಯೋಗಿ ಇಲಾಖಾ ಕಾರ್ಯನಿರ್ವಾಹಕ ಅಭಿಯಂತರ ಗಣೇಶ್‌ ಆರ್‌. ಅರಳೀಕಟ್ಟೆ, ಪ್ರವಾಸೋದ್ಯಮ ಇಲಾಖಾ ಸಹಾಯಕ ನಿರ್ದೇಶಕ ಡಾ| ಉದಯ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಹೇಶ್‌ ಕುಮಾರ್‌ ಕೆ.ಎಸ್‌., ಕೃಷ್ಣಮೂರ್ತಿ ಭಟ್‌, ಬಾಲಕೃಷ್ಣ ಗೌಡ ಬಳ್ಳೇರಿ, ಮಾಧವ ಡಿ., ರಾಜೀವಿ ಆರ್‌ ರೈ, ದಮಯಂತಿ ಕೂಜುಗೋಡು, ಅಭಿವೃದ್ಧಿ ಸಮಿತಿ ಸದಸ್ಯ ಶಿವರಾಮ ರೈ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್‌, ಶಿಷ್ಟಾಚಾರ ಅಧಿಕಾರಿ ಗೋಪೀನಾಥ್‌ ನಂಬೀಶ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.