ಕುಕ್ಕೆ: ಧರ್ಮಸಮ್ಮೇಳನ ಸಭೆ ನಡೆಯಬೇಕು
Team Udayavani, Dec 14, 2017, 2:57 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಕಿರುಷಷ್ಠಿ ವೇಳೆ ಅನಾದಿಕಾಲದಿಂದ ನಡೆದುಕೊಂಡು ಬರುತ್ತಿದ್ದ ಧರ್ಮಸಮ್ಮೇಳನ ಸಭೆ ರದ್ದುಪಡಿಸದೆ ನಡೆಸುವಂತೆ ಸುಬ್ರಹ್ಮಣ್ಯದ ಹಿಂದೂಪರ ಸಂಘಟನೆಗಳ ಮುಖಂಡರು ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಗೆ ಬುಧವಾರ ಮನವಿ ಸಲ್ಲಿಸಿದರು.
ಕಿರುಷಷ್ಠಿ ವೇಳೆ ಧರ್ಮಸಮ್ಮೇಳನ ಸಭೆ ಪ್ರಮುಖ ಪಾತ್ರ ವಹಿಸುತ್ತಿದ್ದು, ತಾಂತ್ರಿಕ ಜೀವನದ ಆಧುನಿಕ ಕಾಲದಲ್ಲಿ ಧರ್ಮ ಸಮ್ಮೇಳನ ಸಭೆ ಧರ್ಮ ಜಾಗೃತಿ ಮೂಲಕ ಕಾಳಜಿ ನೀಡುವಂತದ್ದು, ಇದನ್ನು ರದ್ದು ಪಡಿಸಿ ಕೇವಲ ಸಾಂಸ್ಕೃತಿಕ ಕಾರ್ಯ ಕ್ರಮಕ್ಕೆ ಮೀಸಲಿರಿಸುವುದು ಸೂಕ್ತವಲ್ಲ ಎಂದು ಅವರು ನೀಡಿದ ಮನವಿಯಲ್ಲಿ ತಿಳಿಸಿದ್ದು, ಧರ್ಮ ಸಮ್ಮೇಳನ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮನವಿ ಸ್ವೀಕರಿಸಿದರು. ಮನವಿ ಸಲ್ಲಿಸುವ ವೇಳೆ ವಿಹಿಂಪ ಸುಬ್ರಹ್ಮಣ್ಯ ಘಟಕ ಅಧ್ಯಕ್ಷ ಪ್ರಶಾಂತ್ ಭಟ್ ಮಾಣಿಲ, ಬಜರಂಗ ದಳ ಸಂಚಾಲಕ ಪ್ರಸಾದ್ ರೈ, ವಿಶ್ವಹಿಂದೂಪರಿಷತ್ ಪ್ರಧಾನ ಕಾರ್ಯದರ್ಶಿ ಶ್ರೀಶಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಮೋನಪ್ಪ ಮಾನಾಡು, ಅಚ್ಯುತಾ ಗೌಡ, ಹರಿಪ್ರಸಾದ್, ಅಜಯ್, ಶಿವಪ್ರಸಾದ್ ಜಿ.ಎನ್., ಚಿದಾನಂದ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.