ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ: ಬಿಜೆಪಿ
Team Udayavani, Jan 9, 2018, 9:33 AM IST
ಮಂಗಳೂರು: ದೀಪಕ್ ಹತ್ಯೆಗೆ ಸ್ಥಳೀಯ ಬಿಜೆಪಿ ಕಾರ್ಪೊರೇಟರ್ ಸುಪಾರಿ ನೀಡಿದ್ದಾ ರೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೇಜವಾಬ್ದಾರಿ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಇದಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಡಾ| ಭರತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈ ಹಿಂದೆ ಚುನಾವಣೆಗಳಲ್ಲಿ ಎಸ್‌ಡಿಪಿಐ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಶಾಸಕ ಮೊದಿನ್ ಬಾವಾ ಅವರು ಜೆಡಿಎಸ್‌ನಲ್ಲಿರುವ ತನ್ನ ಸಹೋದರನ ಮೂಲಕ ಕುಮಾರಸ್ವಾಮಿ ಅವರಲ್ಲಿ ಈ ರೀತಿಯ ಹೇಳಿಕೆ ಕೊಡಿಸಿದ್ದಾರೆ. ಶಾಸಕ ಬಾವಾ ಹಾಗೂ ಕುಮಾರಸ್ವಾಮಿ ಅವರನ್ನೇ ತನಿಖೆಗೊಳಪಡಿಸಬೇಕು ಎಂದರು. ಮನಪಾ ಸದಸ್ಯರಾದ ತಿಲಕ್ ರಾಜ್, ವಿಪಕ್ಷ ನಾಯಕ ಗಣೇಶ್ ಹೊಸಬೆಟ್ಟು, ಬಿಜೆಪಿ ಮುಖಂಡರಾದ ವಿಕಾಸ್ ಪುತ್ತೂರು, ಕಿಶೋರ್ ರೈ ಮತ್ತಿತರರು ಉಪಸ್ಥಿತರಿದ್ದರು.
ಯಾವುದೇ ತನಿಖೆಗೆ ಸಿದ್ಧ: ತಿಲಕ್‌ರಾಜ್
ದೀಪಕ್ ರಾವ್ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಕಲ್ಪಿಸಲಸಾಧ್ಯವಾದ ಆರೋಪವನ್ನು ಕುಮಾರಸ್ವಾಮಿ ಮಾಡಿದ್ದಾರೆ. ಈ ಬಗ್ಗೆ ನಾನು ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಪಾಲಿಕೆಯ ಸ್ಥಳೀಯ ಬಿಜೆಪಿ ಸದಸ್ಯ ತಿಲಕ್ ರಾಜ್ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಒಳಒಪ್ಪಂದ: ನಳಿನ್
ದೀಪಕ್ ಹತ್ಯೆ ಪ್ರಕರಣದ ತನಿಖೆಯ ಹಾದಿತಪ್ಪಿಸಿ ಹಂತಕರನ್ನು ರಕ್ಷಿಸುವ ಕಾರ್ಯವನ್ನು ಜೆಡಿಎಸ್ ಹಾಗೂ ಕಾಂಗ್ರೆಸ್ ಮಾಡುತ್ತಿದೆ .
ಕುಮಾರ ಸ್ವಾಮಿ ಅವರು ಮೈಸೂರಿ ನಲ್ಲಿ ನೀಡಿರುವ ಹೇಳಿಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದ ಮಂಗಳೂರಿನಿಂದಲೇ ಆರಂಭವಾಗಿರುವ ಸೂಚನೆಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.