ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
ಕುಲಶೇಖರದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡ
Team Udayavani, Aug 3, 2019, 10:19 AM IST
ಮಂಗಳೂರು: ಕುಲಶೇಖರ ಡೈರಿ ಸಮೀಪ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೂಡುಪೆರಾರಿನ ಅರಿಕೆಪದವು ನಿವಾಸಿ ಮಹಾಬಲ ಗೌಡ (47) ಸಾವನ್ನಪ್ಪಿದ್ದಾರೆ.
ಮಧ್ಯಾಹ್ನ ವೇಳೆ ಕಟ್ಟಡದ 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ 1ನೇ ಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳದಲ್ಲಿದ್ದ ಕಾರ್ಮಿ ಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮಹಾಬಲ ಗೌಡ ಹಲವು ವರ್ಷಗಳಿಂದ ಕೂಲಿ ಮತ್ತು ಮೇಸಿಕೆಲಸ ಮಾಡುತ್ತಿದ್ದು, ಸುಮಾರು 2 ತಿಂಗಳಿಂದ ಕುಲಶೇಖರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಅವರ ನಿಧನದಿಂದ ಕುಟುಂಬದ ಆಧಾರಸ್ತಂಭ ಕಳಚಿದ್ದು, ಪ್ರಸ್ತುತ ಮೂಡುಪೆರಾ ರಿನ ಶ್ರೀದೇವಿ ಯುವಕ ಸಂಘದವರು ನೆರವು ಒದಗಿಸಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.