ಅಗತ್ಯ ವಸ್ತು ಕೊರತೆಯಾಗದು: ಕಾಮತ್
Team Udayavani, Apr 3, 2020, 11:18 AM IST
ಮಂಗಳೂರು: ಅಕ್ಕಿ ಸೇರಿದಂತೆ ದಿನಬಳಕೆಯ ವಸ್ತುಗಳು ಹಾಗೂ ಔಷಧ ಸಾಮಗ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಇತರ ಕಡೆಗಳಿಂದ ವಸ್ತುಗಳು ಸಗಟು ವ್ಯಾಪಾರಿಗಳಿಗೆ ರವಾನೆ ಯಾಗುತ್ತಿದ್ದು, ಅದನ್ನು ರಿಟೇಲ್ ಅಂಗಡಿಗಳಿಗೆ ಒದಗಿಸುವ ಕಾರ್ಯ ನಡೆಯುತ್ತಿದೆ. ರೈಸ್‌ಮಿಲ್‌ಗಳನ್ನು ಕಾರ್ಯಾರಂಭಿಸುವಂತೆ ಮಾಲಕರ ಜತೆ ಮಾತುಕತೆ ನಡೆಸಲಾಗಿದೆ. ಜಿಲ್ಲೆಯ ಜನರಿಗೆ ಕುಚ್ಚಲಕ್ಕಿ ಕೊರತೆಯಾಗ ದಂತೆ ನೋಡಿಕೊಳ್ಳಲಾಗುವುದು ಎಂದರು.
ಮುಜರಾಯಿ ಇಲಾಖೆಯಿಂದ ಕದ್ರಿ ದೇವಸ್ಥಾನದಿಂದ ಇತರ ರಾಜ್ಯ-ಜಿಲ್ಲೆಗಳ 2,475 ಮಂದಿ ನಿರಾಶ್ರಿತರಿಗೆ ಕಳೆದ ಮೂರು ದಿನಗಳಿಂದ ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಸರಕಾರಿ ಶಾಲೆ, ಹಾಸ್ಟೆಲ್‌ಗಳಲ್ಲಿ ತಂಗಿರುವ ಸುಮಾರು 700 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಇದಲ್ಲದೆ ಹೊಟೇಲ್, ಮೆಸ್‌ನ ವ್ಯವಸ್ಥೆ ಇಲ್ಲದ 413 ಮಂದಿಗೆ ಇಂದಿರಾ ಕ್ಯಾಂಟೀನ್‌ನಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಮೇಯರ್ ದಿವಾಕರ ಪಾಂಡೇಶ್ವರ, ಉಪ ಮೇಯರ್ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಕಿರಣ್ ಕುಮಾರ್ ಹಾಜರಿದ್ದರು.
ಪ್ರತಿ ವಾರ್ಡ್‌ಗೆ ಮೋದಿ ಕಿಟ್
ಸಂಸದರು, ಮೇಯರ್ ನೇತೃತ್ವ ದಲ್ಲಿ ಪ್ರಮುಖ ಕಾರ್ಯಕರ್ತರ ಸಹಕಾರ ದೊಂದಿಗೆ ವಾರ್ಡ್‌ಗಳಿಗೆ ತಲಾ 50ರಂತೆ ಮಂಗಳೂರು ದಕ್ಷಿಣ ಕ್ಷೇತ್ರದ 38 ವಾರ್ಡ್
ಗಳಿಗೆ “ಮೋದಿ ಕಿಟ್’ ವಿತರಿಸುವ ಕಾರ್ಯ ಆರಂಭಿಸಲಾಗಿದೆ. 5 ಕೆಜಿ ಕುಚ್ಚಲಕ್ಕಿ, ತಲಾ ಒಂದು ಕೆಜಿ ಸಕ್ಕರೆ, ರವೆ, ಎಣ್ಣೆ, ಅರ್ಧ ಕೆಜಿ ಬೇಳೆ, ಪೇಸ್ಟ್, ಸೋಪ್ ಹಾಗೂ ಲಭ್ಯವಿರುವ ಧಾನ್ಯದ ತಲಾ 500 ರೂ. ಬೆಲೆಬಾಳುವ ಕಿಟ್ ಇದಾಗಿದೆ. ಅಗತ್ಯಕ್ಕನು ಸಾರವಾಗಿ 10,000 ಕಿಟ್‌ಗಳನ್ನು ತಯಾರು ಮಾಡಗುವುದು ಎಂದು ವೇದವ್ಯಾಸ್ ಕಾಮತ್ ತಿಳಿಸಿದರು.
ನಡೆದೇ ಹೋಗಿ
ಅಗತ್ಯ ವಸ್ತುಗಳು ಸ್ಥಳೀಯವಾಗಿಯೇ ಸಿಗುವ ವ್ಯವಸ್ಥೆ ಮಾಡಲಾಗುತ್ತಿದೆ. ಜನ ನಿಗದಿತ ಅವಧಿಯಲ್ಲಿ (ಬೆಳಗ್ಗೆ 7ರಿಂದ 12) ಸಮೀಪದ ಅಂಗಡಿಗಳಿಗೆ ಕಾಲ್ನಡಿಗೆಯಲ್ಲಿ ತೆರಳಿ ಖರೀದಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.