ಭೂಪರಿವರ್ತನೆ: ವರದಿ ಆಧರಿಸಿ ಕ್ರಮ


Team Udayavani, Jun 26, 2018, 11:49 AM IST

u-t-khadar.png

ಮಂಗಳೂರು: ಭೂ ಪರಿವರ್ತನೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮೂರು ದಿನಗಳೊಳಗೆ ವರದಿ ನೀಡಲು ಸೂಚಿಸಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ  ಸಚಿವ ಯು.ಟಿ. ಖಾದರ್‌ ಹೇಳಿದರು.

(ಕೆಯುಐಡಿಎಫ್ಸಿ) ಮಲ್ಲಿಕಟ್ಟೆ ಕಚೇರಿಯಲ್ಲಿ 9/11 ಭೂಪರಿವರ್ತನೆ ಹಾಗೂ ಸ್ಮಾರ್ಟ್‌ ಸಿಟಿ ಯೋಜನೆ ಕುರಿತಂತೆ ಜನ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿ ಗಳೊಂದಿಗೆ ಸೋಮ ವಾರ ವಿಶೇಷ ಸಭೆ ನಡೆಸಿ, ಸುದ್ದಿ ಗಾರರ ಜತೆಗೆ ಮಾತನಾಡಿದರು.

ಸ್ಮಾರ್ಟ್‌ಸಿಟಿಗೆ ವೇಗ ಸೂಚನೆ
ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ ದೇಶಕ್ಕೆ ಮಾದರಿಯಾಗುವಂತೆ ತಯಾರಾಗುತ್ತಿದೆ. ಜನರ ಸಹಭಾಗಿತ್ವ ಅಗತ್ಯ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಡಳಿತ ನಿರ್ದೇಶಕರಿಗೆ (ಮನಪಾ ಆಯುಕ್ತರು)  ಜವಾಬ್ದಾರಿ ನೀಡಲಾಗಿದೆ ಎಂದರು.

ಮಾನವ ಸಂಪದ ಕ್ರೋಡೀಕರಿಸಿ, ಕೆಲಸ ಚುರುಕಾಗಿ ಸಾಗುವಂತೆ ಮಾಡಲು ಎಸ್‌ಪಿವಿ (ಸ್ಪೆಷಲ್‌ ಪರ್ಪಸ್‌ ವೆಹಿಕಲ್‌) ಎಂಡಿಗೆ ಅಧಿಕಾರ ನೀಡಲಾಗುವುದು. ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ,  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಡಳಿತ ಮಂಡಳಿ ಸಭೆ ನಡೆಸಬೇಕು. ಪಾಲಿಕೆಯನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ಸಭೆ ಮಾಡಿ ಮೇಲ್ವಿಚಾರಣೆ ನಡೆಸಲಿದ್ದೇವೆ ಎಂದು ಸಚಿವ ಖಾದರ್‌ ಹೇಳಿದರು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ,  ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮೇಯರ್‌ ಭಾಸ್ಕರ್‌, ಸ್ಮಾರ್ಟ್‌ಸಿಟಿ ನಿರ್ದೇಶಕರಾದ ಎಂ. ಶಶಿಧರ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಲ್ಯಾನ್ಸಿಲಾಟ್‌ ಪಿಂಟೋ, ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್‌, ಕೆಯುಐಡಿಎಫ್ಸಿ ವ್ಯವ ಸ್ಥಾಪಕ ನಿರ್ದೇಶಕ‌ ಎ.ಬಿ. ಇಬ್ರಾಹಿಂ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಮನಪಾ ಆಯುಕ್ತ ಮೊಹಮ್ಮದ್‌ ನಝೀರ್‌ ಉಪಸ್ಥಿತರಿದ್ದರು.

ಹೆದ್ದಾರಿಯಿಂದ ನಗರದ ಸಂಪರ್ಕ ರಸ್ತೆ ಅಭಿವೃದ್ಧಿ
ಹೆದ್ದಾರಿಯಿಂದ ನಗರವನ್ನು ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ. ತೊಕ್ಕೊಟ್ಟಿನಿಂದ ಜಪ್ಪಿನಮೊಗರು-ಮಹಾಕಾಳಿಪಡು- ಮೋರ್ಗನ್ಸ್‌ಗೆಟ್‌ ರಸ್ತೆಯನ್ನು ಷಟ್ಪಥ ಅಥವಾ ಚತುಷ್ಪಥಗೊಳಿಸುವ ನಿಟ್ಟಿನಲ್ಲಿ ಸಂಸದರು, ಜನಪ್ರತಿನಿಧಿಗಳ ಜತೆ ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ 50:50ರ ಅನುಪಾತದಲ್ಲಿ ಅನುದಾನ ಒದಗಿಸುವಂತೆ ಮನವಿ ಮಾಡಲಾಗುವುದು. ಅನುದಾನ ದೊರೆಯದಿದ್ದಲ್ಲಿ  ರಾಜ್ಯ ಸರಕಾರ ಅಥವಾ ಮಹಾನಗರ ಪಾಲಿಕೆ ವತಿಯಿಂದ ಸಮಸ್ಯೆ ಬಗೆಹರಿಸಲಾಗುವುದು. ಜಪ್ಪು ಮೂಲಕ ಮೀನುಗಾರಿಕಾ ಬಂದರಿಗೆ ಸಂಪರ್ಕ ಕಲ್ಪಿಸಲು ಹೊಸ ರಸ್ತೆ ನಿರ್ಮಾಣದ ಬಗ್ಗೆ ಯೋಚಿಸಲಾಗಿದೆ. ಇದನ್ನು ಪರಿಶೀಲಿಸಲು ವಿಶೇಷ ತಂಡವೊಂದನ್ನು ರಚಿಸಿ ಅವರಿಂದ ವಿಸ್ತೃತ ವರದಿ ತರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

ಮೀನಿಗೆ ರಾಸಾಯನಿಕ ಬಳಕೆ; ಪರಿಶೀಲಿಸಿ ಕ್ರಮ
ಮೀನುಗಳು ಕೆಡದಂತೆ ರಾಸಾಯನಿಕ ಬಳಕೆ ಮಾಡುತ್ತಿರುವ ಆರೋಪಗಳ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಖಾದರ್‌, ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಸತ್ಯಾಸತ್ಯತೆ ಅರಿಯಲಾಗುವುದು. ಆ ಬಳಿಕ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.