ಸಂಪಾಜೆ – ಮಡಿಕೇರಿ ಮಾರ್ಗದಲ್ಲಿ ಮತ್ತೆ ಕುಸಿದ ಗುಡ್ಡ
Team Udayavani, Aug 13, 2018, 2:44 PM IST
ಸುಳ್ಯ: ಕರಾವಳಿಯಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಪಾಜೆ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ಸುಳ್ಯ – ಮಡಿಕೇರಿ ರಸ್ತೆಯಲ್ಲಿ ಸೋಮವಾರ ಸಂಚಾರ ಸ್ಥಗಿತಗೊಂಡಿದೆ.
ಸಂಪಾಜೆ ಪ್ರದೇಶದಲ್ಲಿ ನಿರಂತರ ಗುಡ್ಡ ಕುಸಿದು ರಸ್ತೆಗೆ ಬೀಳುತ್ತಿದೆ. ತಾಳತ್ತಮನೆ ಮತ್ತು ಮಡಿಕೇರಿ ಮಧ್ಯೆ ರಸ್ತೆ ಸಂಪೂರ್ಣ ಕುಸಿದು ಹೋಗಿದೆ. ಈ ಪ್ರದೇಶದಲ್ಲಿ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಆದರೆ ನಿನ್ನೆ ತಡರಾತ್ರಿಯಿಂದಲೇ ಮದನಾಡಿನಲ್ಲಿ ಗುಡ್ಡ ಕುಸಿದು ರಸ್ತೆಗೆ ಬೀಳುತ್ತಿದೆ . ಇಂದು ಮುಂಜಾನೆ ಅಧಿಕಾರಿಗಳು ಜೆಸಿಬಿ ಮೂಲಕ ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುತ್ತಿದ್ದಾಗ ಮತ್ತೆ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿಯಲು ಆರಂಭಿಸಿದೆ.
ಸದ್ಯ ಸುಳ್ಯ – ಮಡಿಕೇರಿ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದ್ದು ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸಾಲು ಕಟ್ಟಿ ನಿಂತಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.