Train; ಎಡಕುಮೇರಿ ರೈಲು ಮಾರ್ಗದಲ್ಲಿ ಭೂಕುಸಿತ; ಇನ್ನೆರಡು ದಿನ ರೈಲು ಸಂಚಾರ ಸ್ಥಗಿತ
Team Udayavani, Jul 27, 2024, 5:12 PM IST
ಮಂಗಳೂರು: ಮಂಗಳೂರು – ಬೆಂಗಳೂರು ನಡುವಿನ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ – ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಹಳಿಯಲ್ಲಿ ಮಣ್ಣು ಕುಸಿತ ಪ್ರಕರಣದಿಂದಾಗಿ ಸೋಮವಾರ (ಜುಲೈ 29) ದವರೆಗೆ ರೈಲು ಸಂಚಾರ ಸ್ಥಗಿತವಾಗಿದೆ.
ದುರಸ್ತಿ ಕಾರ್ಯ ನಡೆಯುತ್ತಿದ್ದು, ಎರಡು ಮೂರು ದಿನಗಳು ಬೇಕಾಗಬಹುದು ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸತತ ಮಳೆಗೆ ಶುಕ್ರವಾರ ಸಂಜೆ ರೈಲು ಹಳಿಯ ಕೆಳ ಭಾಗದಲ್ಲಿ ಮಣ್ಣು ಕುಸಿದು ಬೆಂಗಳೂರು – ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಘಟನೆಯಿಂದಾಗಿ ಶುಕ್ರವಾರ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್‌ಪ್ರೆಸ್ ರೈಲು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಹಿಂದಿರುಗಿತ್ತು.
ರೈಲು ರದ್ದಾದ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬಸ್ಸಿನ ವ್ಯವಸ್ಥೆ ಮಾಡದ ಕಾರಣ ಮಾತಿನ ಚಕಮಕಿ ನಡೆಯಿತು. ಪ್ರಯಾಣಿಕರಿಗೆ ರೈಲು ಬಳಕೆದಾರರ ವೇದಿಕೆ ಪದಾಧಿಕಾರಿಗಳು ಬಸ್ಸಿನ ವ್ಯವಸ್ಥೆ ಕಲ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Encroached; ಉತ್ತರಪ್ರದೇಶದಲ್ಲಿ ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯೇ ತೆರವು!
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.