ರಾತ್ರಿ ಮನೆಯಲ್ಲಿ ಮಲಗಲೂ ಹೆದರಿಕೆಯಾಗುತ್ತಿದೆ: ಯು.ಟಿ.ಖಾದರ್
Team Udayavani, Apr 6, 2021, 4:58 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾತ್ರಿ ಮನೆಯಲ್ಲಿ ಮಲಗಲೂ ಹೆದರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದೆ. ನೈತಿಕ ಪೊಲೀಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದೆ. ಪೊಲೀಸ್ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ದ್ವಂದ್ವ ನಿರ್ಧಾರಕ್ಕೆ ಕಾರ್ಯಕರ್ತರು ಹೊಡೆದಾಡಿಕೊಳ್ಳುತ್ತಾರೆ. ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಲಿ. ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ದರು, ಆದರೆ ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದರು.
ಇದನ್ನೂ ಓದಿ:18 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ ನೀಡುವಂತೆ ಮೋದಿಗೆ ‘ಐಎಂಎ’ ಪತ್ರ
ಸುದ್ದಿಗೋಷ್ಠಿ ನಡೆಸಿ ಬಹಿರಂಗ ಎಚ್ಚರಿಕೆ ನೀಡುವವರ ಬಗ್ಗೆ ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಸರ್ಕಾರ ಮೊದಲು ಲವ್ ಜಿಹಾದ್ ಕಾನೂನು ತರಲಿ, ಕಾನೂನು ತರದಿದ್ದರೆ ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ, ಸಂಘಟನೆಗಳು ಮುಗ್ಧರಿಗೆ ಹೊಡೆಯುತ್ತಾರೆ. ಮುಗ್ಧರು ಜೈಲಿಗೆ ಹೋಗುತ್ತಾರೆ. ಧೈರ್ಯವಿದ್ದರೆ ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಎಂದು ಯುಟಿ ಖಾದರ್ ಸವಾಲು ಹಾಕಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.