ಮಕ್ಕಳ ಸಾಗಾಟದ ವೇಳೆ ಕಾನೂನು, ನಿಯಮ ಪಾಲಿಸಿ

ಶಾಲಾ ವಾಹನಗಳ ಓಡಾಟದ ಭರಾಟೆಯೂ ಆರಂಭ

Team Udayavani, Jun 3, 2019, 6:00 AM IST

z-29

ಮಹಾನಗರ: ಶಾಲಾ ತರಗತಿಗಳು ಆರಂಭವಾಗಿದ್ದು, ಇದರೊಂದಿಗೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಓಡಾಟದ ಭರಾಟೆಯೂ ಆರಂಭವಾಗಿದೆ. ಮಕ್ಕಳ ಸಾಗಾಟದ ವೇಳೆ ಕಾನೂನು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.

ನಗರದ ಬಹುತೇಕ ಪ್ರಮುಖ ಶಿಕ್ಷಣ ಸಂಸ್ಥೆಗಳು ಶಾಲಾ ವಾಹನಗಳನ್ನು ಹೊಂದಿವೆ. ಆದರೆ ಎಲ್ಲ ಮಕ್ಕಳೂ ಈ ವಾಹನಗಳಲ್ಲಿ ಸಂಚರಿಸುತ್ತಿಲ್ಲ. ಖಾಸಗಿ ಬಾಡಿಗೆ ಟ್ಯಾಕ್ಸಿ ಅಥವಾ ಆಟೋ ರಿಕ್ಷಾಗಳಲ್ಲಿ ಬಹಳಷ್ಟು ಮಕ್ಕಳು ಪ್ರಯಾಣ ಮಾಡುತ್ತಾರೆ. ಖಾಸಗಿ ಬಾಡಿಗೆ ವಾಹನಗಳಲ್ಲಿ ಮಿತಿ ಮೀರಿ ಮಕ್ಕಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಹಲವು ವರ್ಷಗಳಿಂದ ಇದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸ್‌ ಆಯುಕ್ತರು ಈ ವರ್ಷ ಶಾಲಾರಂಭದಲ್ಲಿಯೇ ಎಲ್ಲ ಶಿಕ್ಷಣ ಸಂಸ್ಥೆಗಳ ಆಡಳಿತದ ಪ್ರತಿನಿಧಿಗಳನ್ನು ಕರೆಸಿ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳು, ಬಸ್‌ ಮಾಲಕರು, ಟ್ಯಾಕ್ಸಿ ಮತ್ತು ರಿಕ್ಷಾ ಚಾಲಕ/ ಮಾಲಕರ ಸಂಘಟನೆಗಳ ಪದಾಧಿಗಳ ಸಮಕ್ಷಮ ಜಾಗೃತಿ ಕಾರ್ಯಕ್ರಮವನ್ನು ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿದ ಮಾರ್ಗ ಸೂಚಿಗಳನ್ನು ಸಂಬಂಧ ಪಟ್ಟ ಎಲ್ಲರಿಗೂ ತಿಳಿ ಹೇಳಲಾಗಿದೆ. ಶಾಲಾ ವಾಹನಗಳ ಅಪಘಾತ ಮತ್ತು ಅಪರಾಧ ಪ್ರಕರಣಗಳನ್ನು ಆದಷ್ಟು ಕಡಿಮೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ಶಾಲಾ ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಶಾಲಾ ಆಡಳಿತಗಳಿಗೆ ಉತ್ತರದಾಯಿತ್ವವನ್ನು ನಿಗದಿ ಪಡಿಸಿ ಸುಪ್ರೀಂ ಕೋರ್ಟ್‌ ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್‌)ದ ಸಲಹೆಯೊಂದಿಗೆ ಕರಡು ಮಾರ್ಗಸೂಚಿಗಳನ್ನು ತಯಾರಿಸಿ 2018 ಎಪ್ರಿಲ್ನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಕಳುಹಿಸಿ ಅವುಗಳನ್ನು 6 ತಿಂಗಳೊಳಗೆ ಜಾರಿಮಾಡುವಂತೆ ನಿರ್ದೇಶನ ನೀಡಿತ್ತು. ಸಚಿವಾಲಯವು ಈ ಮಾರ್ಗಸೂಚಿಗಳನ್ನು 2018 ಸೆಪ್ಟಂಬರ್‌ನಲ್ಲಿ ಎಲ್ಲ ರಾಜ್ಯ ಸರಕಾರಗಳ ಪ್ರಧಾನ ಕಾರ್ಯದರ್ಶಿಗಳಿಗೆ (ಶಿಕ್ಷಣ) ಕಳುಹಿಸಿ ಅನುಷ್ಠಾನಿಸುವಂತೆ ಸೂಚಿಸಿತ್ತು.

ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಹೇಳುವಾಗ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳಿಗೂ ಸಂಬಂಧಿಸಿ ಮಾರ್ಗ ಸೂಚಿಗಳನ್ನು ಸುಪ್ರೀಂ ಕೋಟ್ ರಚಿಸಿದೆ.

ಮಾರ್ಗಸೂಚಿ ವಿವರ

•ಶಾಲಾ ವಾಹನಗಳಿಗೆ ಹಳದಿ ಬಣ್ಣದ ಜತೆ ಸ್ಟಿಕ್ಕರ್‌ ಅಳವಡಿಸಿರಬೇಕು. ಬಾಡಿಗೆ ವಾಹನವಾಗಿದ್ದರೆ ‘ಆನ್‌ ಸ್ಕೂಲ್ ಡ್ಯೂಟಿ’ ಎಂದು ಬರೆದಿರಬೇಕು.
••ಪ್ರಥಮ ಚಿಕಿತ್ಸಾ ಪೆಟ್ಟಿಗೆ
•• ಕಿಟಿಕಿಯ ಭಾಗದಲ್ಲಿ ಗ್ರಿಲ್ಸ್ ಅಳವಡಿಸಿರಬೇಕು.
•• ಶಾಲೆಯ ಹೆಸರು ಮತ್ತು ಫೋನ್‌ ನಂಬ್ರ ಬರೆಯಬೇಕು.
•• ಮಕ್ಕಳ ಬ್ಯಾಗ್‌ ಇರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು.
•• ಬಸ್ಸಿನಲ್ಲಿ ಮಕ್ಕಳ ಮೇಲುಸ್ತುವಾರಿಗೆ ಸಿಬಂದಿ ನೇಮಕ
•• ಜಿಪಿಎಸ್‌ ತಂತ್ರಜ್ಞಾನ
•• ಪಾರದರ್ಶಕ ಕಿಟಕಿ
•• ವಿದ್ಯಾರ್ಥಿಗಳ ಪೂರ್ಣವಾದ ಮಾಹಿತಿ
•• ಚಾಲಕನ ವಿವರ ಇರಬೇಕು
•• ಸ್ಪೀಡ್‌ ಗವರ್ನರ್‌ ಅಳವಡಿಸಿರಬೇಕು
•• ಅಗ್ನಿಶಾಮಕ ವ್ಯವಸ್ಥೆ ಇರಬೇಕು
•• ವಾಹನಗಳ ಬಾಗಿಲಿಗೆ ಬೀಗ ಇರುವುದು ಕಡ್ಡಾಯ
•• ವಾಹನದಲ್ಲಿ ಮಕ್ಕಳನ್ನು ಮಿತಿ ಮೀರಿ ತುಂಬಿಸ ಬಾರದು; ಇನ್ನೊಂದು ಮಗುವಿನ ಮಡಿಲಿನಲ್ಲಿ ಕುಳ್ಳಿರಿಸ ಬಾರದು
•• ಚಾಲಕನಿಗೆ ಕನಿಷ್ಠ 5 ವರ್ಷಗಳ ಚಾಲನಾ ಅನುಭವ ಅಗತ್ಯ
•• ವರ್ಷದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ಮೋಟಾರು ವಾಹನ ನಿಯಮ ಉಲ್ಲಂಘನೆ ಅಥವಾ ಇತರ ಅಪರಾಧ ಎಸಗಿದವರನು ಚಾಲಕನಾಗಿ ನೇಮಿಸ ಬಾರದು.
•• ಮಿತಿ ಮೀರಿದ ವೇಗ, ಮದ್ಯಪಾನ ಮಾಡಿ ಅಥವಾ ಅಪಾಯಕಾರಿಯಾಗಿ ವಾಹನ ಚಲಾಯಿಸಿದ ಬಗ್ಗೆ ಒಂದು ಬಾರಿ ಕೇಸು ದಾಖಲಾದವರನ್ನು ಕೂಡ ನೇಮಿಸ ಬಾರದು.
•• ಮೋಟಾರು ವಾಹನ ಕಾಯ್ದೆ 1988ರ ಕಲಂ 74ರ ಪ್ರಕಾರ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳು ಒಪ್ಪಂದ ವಾಹನ ರಹದಾರಿ ಹೊಂದಿರಬೇಕು. ಚಾಲಕರು ನೀಲಿಬಣ್ಣದ ಸಮವಸ್ತ್ರ ಮತ್ತು ಕಪ್ಪು ಬಣ್ಣದ ಜೂಟ್ ಧರಿಸಿರಬೇಕು. 12 ವರ್ಷದ ಒಳಗಿನ ಮಕ್ಕಳನ್ನು ಆಟೋ ರಿಕ್ಷಾದಲ್ಲಿ 6 ಮಂದಿಯನ್ನು ಹಾಗೂ ಆಮ್ನಿ ವಾಹನದಲ್ಲಿ 8 ಮಂದಿಯನ್ನು ಮಾತ್ರ ಕರೆದೊಯ್ಯಲು ಅವಕಾಶವಿದೆ. 12 ವರ್ಷಕ್ಕಿಂತ ಮೇಲಿನ ಮಕ್ಕಳನ್ನು ವಾಹನದ ಸೀಟುಗಳ ಸಾಮರ್ಥ್ಯದಷ್ಟೇ ಕರೆದೊಯ್ಯಬೇಕು

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.